ಎನ್‌ಟಿಎ ಕಚೇರಿ ಮೇಲೆ ಕಾಂಗ್ರೆಸ್ ರಾಷ್ಟ್ರೀಯ ವಿದ್ಯಾರ್ಥಿ ಘಟಕ ದಾಳಿ: ಬೀಗ ಜಡಿದು ಪ್ರತಿಭಟನೆ

Date:

ನೀಟ್‌ ವೈದ್ಯಕೀಯ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಅಕ್ರಮಗಳು ನಡೆದಿರುವ ಹಿನ್ನೆಲೆ ಸುಮಾರು 100ಕ್ಕೂ ಹೆಚ್ಚು ಕಾಂಗ್ರೆಸ್‌ ರಾಷ್ಟ್ರೀಯ ವಿದ್ಯಾರ್ಥಿ ಘಟಕ ನವದೆಹಲಿಯ ರಾಷ್ಟ್ರೀಯ ಪರೀಕ್ಷಾ ಮಂಡಳಿ ಕಚೇರಿಯ ಪರೀಕ್ಷಾ ವಿಭಾಗಕ್ಕೆ ದಾಳಿ ನಡೆಸಿದ್ದಾರೆ.

- Advertisement -

ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ದೃಶ್ಯಗಳಲ್ಲಿರುವಂತೆ ವಿದ್ಯಾರ್ಥಿಗಳ ಗುಂಪು ಘೋಷಣೆಗಳನ್ನು ಕೂಗುತ್ತ ಎನ್‌ಟಿಎ ಕಚೇರಿಗೆ ದಾಳಿ ನಡೆಸಿದ್ದಾರೆ. ಅಧಿಕೃತ ಪಡಿಸದ ಕೆಲವು ವರದಿಗಳಂತೆ ಕೆಲವು ಪ್ರತಿಭಟನಾಕಾರರು ಕಚೇರಿಗೆ ಹೊರಗಡೆಯಿಂದ ಬೀಗ ಜಡಿದಿದ್ದಾರೆ ಎನ್ನಲಾಗಿದೆ. ನಂತರ ಪ್ರತಿಭಟನಾನಿರತ ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಮೇ ತಿಂಗಳಲ್ಲಿ ದೇಶಾದ್ಯಂತ ಸುಮಾರು 24 ಲಕ್ಷ ಮಂದಿ ಬರೆದಿದ್ದ ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ಹಲವರು ಅಕ್ರಮವಾಗಿ ಉತ್ತೀರ್ಣರಾಗಿದ್ದರು. ಪ್ರಕರಣವನ್ನು ಸಿಬಿಐ ಕೈಗೆತ್ತಿಕೊಂಡಿದ್ದು, ಈಗಾಗಲೇ ಬಿಹಾರ, ಮಹಾರಾಷ್ಟ್ರ ಹಾಗೂ ದೆಹಲಿಯಿಂದ 20ಕ್ಕೂ ಅಧಿಕ ಮಂದಿಯನ್ನು ಬಂಧಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಮುದಾಯವಾರು ಡಿಸಿಎಂ ಬೇಡಿಕೆಯೂ, ಮುಖ್ಯಮಂತ್ರಿಗಳ ಮೌನವೂ

ಕೃಪಾಂಕ ನೀಡಿದ್ದ 1563 ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯನ್ನು ಕೈಗೊಳ್ಳಲಾಗಿತ್ತು. ಆದರೆ ಪರೀಕ್ಷೆಯಲ್ಲಿ ಕೇವಲ 700 ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದರು. ಕೆಲವು ವಿದ್ಯಾರ್ಥಿಗಳು ಸುಪ್ರೀಂ ಕೋರ್ಟ್‌ನಲ್ಲಿಯೂ ಅರ್ಜಿ ಸಲ್ಲಿಸಿದ್ದು, ಜುಲೈ 8 ರಂದು ಪ್ರಕರಣವು ವಿಚಾರಣೆಗೆ ಬರಲಿದೆ.

ಒಂದೇ ಕೋಚಿಂಗ್‌ ಕೇಂದ್ರದಲ್ಲಿದ್ದ 6 ಮಂದಿ ಸೇರಿ 67 ವಿದ್ಯಾರ್ಥಿಗಳು ಅತ್ಯಂತ ಹೆಚ್ಚು ಅಂಕ ಗಳಿಸಿದ್ದರು.  ಕೃಪಾಂಕವನ್ನು ರದ್ದುಪಡಿಸಿದ ನಂತರ ವಿದ್ಯಾರ್ಥಿಗಳು ಹಲವರು ರ್ಯಾಂಕ್‌ ದರ್ಜೆಯನ್ನು ಕಳೆದುಕೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡಿನಲ್ಲಿ ತೀವ್ರ ವಿರೋಧ: ‘ಆರ್‌ಟಿಐ ವಿನಾಯಿತಿ’ ನಿರ್ಧಾರದಿಂದ ಹಿಂದೆ ಸರಿದ ವಿಜಯ್ ಸರ್ಕಾರ

ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ನೇತೃತ್ವದ 'ತಮಿಳಗ ವೆಟ್ರಿ ಕಳಗಂ'...

ಅಸ್ಸಾಂ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಡಲು ನಮ್ಮ ಬಂಧನ: ಸಿಜೆಪಿ ನಾಯಕ ಅಶುತೋಷ್ ರಂಕಾ ಆರೋಪ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಹ-ಸಂಚಾಲಕ ಅಶುತೋಷ್ ರಂಕಾ ಮತ್ತು ಅವರ...

ವಿಜಯನ್ ವಿರುದ್ಧ ಸಿಎಂಆರ್‌ಎಲ್ ಪ್ರಕರಣ: ಇಡಿ ಹೇಳಿದ ತಕ್ಷಣ ಎಫ್‌ಐಆರ್ ದಾಖಲಿಸಲಾಗದು ಎಂದು ಕೇರಳ ಗೃಹ ಸಚಿವ

ಜಾರಿ ನಿರ್ದೇಶನಾಲಯ (ಇಡಿ) ಕೋರಿದೆ ಎಂದಮಾತ್ರಕ್ಕೆ ತಕ್ಷಣವೇ ಎಫ್‌ಐಆರ್ ನೋಂದಾಯಿಸಲು ಸಾಧ್ಯವಿಲ್ಲ....

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...