ಅಯೋಧ್ಯೆಯಲ್ಲಿ ಶ್ರೀರಾಮ ಪ್ರಾಣ ಪ್ರತಿಷ್ಠಾಪನೆ: ಪ್ರಧಾನಿ ಸೇರಿ ಹಲವರು ಭಾಗಿ

Date:

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ ರಾಮ ಮಂದಿರದ ಪ್ರಾಣಪ್ರತಿಷ್ಠೆ ಕಾರ್ಯಕ್ರಮ ಇಂದು ನೆರವೇರಿದೆ. ಪ್ರಧಾನಿ ನರೇಂದ್ರ ಮೋದಿ ವಿಧಿ ವಿಧಾನಗಳನ್ನು ಪೂರೈಸಿದ್ದಾರೆ.

- Advertisement -

ಶ್ರೀರಾಮ ಪ್ರಾಣ ಪ್ರತಿಷ್ಠಪನಾ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತ್ರವಲ್ಲದೇ, ದೇಶವಿದೇಶಗಳಿಂದ ಐದು ಸಾವಿರಕ್ಕೂ ಹೆಚ್ಚು ಮಂದಿ ಗಣ್ಯರು ಪಾಲ್ಗೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮಧ್ಯಾಹ್ನ 12.20 ಕ್ಕೆ ಧಾರ್ಮಿಕ ವಿಧಿ ವಿಧಾನಗಳು ಪ್ರಾರಂಭವಾಗಿ12.45ರವರೆಗೆ ಪೂಜಾ ವಿಧಿವಿಧಾನಗಳು ನೆರವೇರಿತು. ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ಹಿನ್ನೆಲೆ ಅಯೋಧ್ಯೆಯ ಇಡೀ ನಗರವನ್ನು 2500 ಕ್ವಿಂಟಾಲ್‌ಗೂ ಹೆಚ್ಚು ಹೂವಿನಿಂದ ಅಲಂಕರಿಸಲಾಗಿದ್ದು, ಪ್ರಾಣ ಪ್ರತಿಷ್ಠೆಯ ನಂತರ ಭಕ್ತರಿಗೆ ದೇವಾಲಯದ ಬಾಗಿಲು ತೆರೆಯಲಾಗುತ್ತದೆ ಎಂದು ದೇಗುಲದ ಟ್ರಸ್ಟ್ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಗ್ಗಿ ಬದುಕಿದವರು ಎದ್ದು ನಿಲ್ಲುವುದು ಯಾವಾಗ?

ಸಮಾರಂಭದಲ್ಲಿ ಎನ್‌ಎಸ್‌ಜಿ ಶೂಟರ್‌ಗಳ ಎರಡು ತಂಡಗಳು, ಆ್ಯಂಟಿ ಡ್ರೋನ್ ತಂತ್ರಜ್ಞಾನ ಹೊಂದಿದ ಎಟಿಎಸ್ ಕಮಾಂಡೋಗಳ ಆರು ತಂಡಗಳು ಮತ್ತು ಉತ್ತರ ಪ್ರದೇಶ ಮತ್ತು ಅರೆಸೇನಾ ಪಡೆಗಳ 15 ಸಾವಿರ ಪೊಲೀಸ್ ಸಿಬ್ಬಂದಿಯನ್ನು ಅಯೋಧ್ಯೆಯ ಭದ್ರತೆಗಾಗಿ ನಿಯೋಜಿಸಲಾಗಿದೆ.

ಆರ್‌ಎಸ್‌​ಎಸ್​ನ ಸರಸಂಘ ಚಾಲಕ ಮೋಹನ್ ಭಾಗವತ್​, ರಾಜ್ಯಪಾಲರಾದ ಆನಂದಿ ಬೆನ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...