ಮೇಕೆದಾಟು ಯೋಜನೆಗೆ ತಮಿಳುನಾಡು ಸೇರಿ ನೆರೆ ರಾಜ್ಯಗಳ ಒಪ್ಪಿಗೆ ಅಗತ್ಯವಿಲ್ಲ: ಕೇಂದ್ರ ಸ್ಪಷ್ಟನೆ

Date:

ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಗೆ ಕರ್ನಾಟಕವು ತಮಿಳುನಾಡು, ಕೇರಳ ಮತ್ತು ಪುದುಚೇರಿ ಸೇರಿದಂತೆ ಕೆಳಹರಿವಿನ ರಾಜ್ಯಗಳ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ ಎಂದು ಕೇಂದ್ರ ಜಲಶಕ್ತಿ ಸಚಿವಾಲಯ ಸ್ಪಷ್ಟಪಡಿಸಿದೆ.

- Advertisement -

ರಾಜ್ಯಸಭೆಯಲ್ಲಿ ಸೋಮವಾರ ತಮಿಳುನಾಡಿನ ಸಂಸದ ಡಾ. ಅನ್ಬುಮಣಿ ರಾಮದಾಸ್ ಕೇಳಿದ ಲಿಖಿತ ಪ್ರಶ್ನೆಗೆ ಜಲಶಕ್ತಿ ಖಾತೆ ರಾಜ್ಯ ಸಚಿವ ರಾಜ್ ಭೂಷಣ್ ಚೌಧರಿ ಉತ್ತರ ನೀಡಿದ್ದು, 2018ರ ಫೆಬ್ರವರಿ 16ರಂದು ಕಾವೇರಿ ಜಲವಿವಾದ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನಲ್ಲಿ ಕರ್ನಾಟಕವು ಕಾವೇರಿ ನದಿಗೆ ಅಡ್ಡಲಾಗಿ ಯಾವುದೇ ಕಾಮಗಾರಿ ಕೈಗೊಳ್ಳಲು ತಮಿಳುನಾಡು, ಕೇರಳ ಹಾಗೂ ಪುದುಚೇರಿಯ ಒಪ್ಪಿಗೆ ಪಡೆಯಬೇಕು ಎಂಬ ಉಲ್ಲೇಖ ಇಲ್ಲ ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಕಾವೇರಿ ಜಲವಿವಾದ ನ್ಯಾಯಮಂಡಳಿ (CWDT) 2007ರ ತೀರ್ಪಿನ 18ನೇ ಷರತ್ತನ್ನು ಸುಪ್ರೀಂ ಕೋರ್ಟ್ ಸೂಕ್ತವೆಂದು ಪರಿಗಣಿಸಿ ತನ್ನ ತೀರ್ಪಿನಲ್ಲಿ ಪುನರುಚ್ಚರಿಸಿದೆ. ಅದರಂತೆ, ನ್ಯಾಯಮಂಡಳಿಯ ಆದೇಶಕ್ಕೆ ವಿರುದ್ಧವಾಗದ ರೀತಿಯಲ್ಲಿ ಪ್ರತಿಯೊಂದು ರಾಜ್ಯಕ್ಕೂ ತನ್ನ ಗಡಿಯೊಳಗಿನ ನೀರಿನ ಬಳಕೆಯನ್ನು ನಿಯಂತ್ರಿಸುವ ಹಾಗೂ ಅದರ ಪ್ರಯೋಜನ ಪಡೆಯುವ ಅಧಿಕಾರವಿದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: SIR ಅವಧಿ ವಿಸ್ತರಿಸುವಂತೆ ದೇಮ, ಗುಹಾ ಸೇರಿ ನಾಲ್ವರಿಂದ ಹೈಕೋರ್ಟ್‌ಗೆ ಅರ್ಜಿ

ಮೇಕೆದಾಟು ಯೋಜನೆಯ ಪ್ರಸ್ತುತ ಸ್ಥಿತಿ ಕುರಿತು ಉತ್ತರಿಸಿರುವ ಸಚಿವರು, ಕರ್ನಾಟಕ ಸರ್ಕಾರವು 2019ರಲ್ಲಿ ಸಲ್ಲಿಸಿದ್ದ ಮೇಕೆದಾಟು ಸಮತೋಲನ ಜಲಾಶಯ ಹಾಗೂ ಕುಡಿಯುವ ನೀರಿನ ಯೋಜನೆಯ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ಕಾವೇರಿ ನ್ಯಾಯಮಂಡಳಿ ತೀರ್ಪು ಮತ್ತು ಕೇಂದ್ರ ಜಲ ಆಯೋಗದ (CWC) ಜಾರಿಯಲ್ಲಿರುವ ಮಾರ್ಗಸೂಚಿಗಳಿಗೆ ಅನುಗುಣವಾಗಿ ಪರಿಷ್ಕರಿಸಿ ಮರುಸಲ್ಲಿಸುವಂತೆ ಹಿಂದಿರುಗಿಸಲಾಗಿದೆ ಎಂದು ತಿಳಿಸಿದ್ದಾರೆ.

ತಮಿಳುನಾಡಿನ ಸಂಸದ ಅನ್ಬುಮಣಿ ರಾಮದಾಸ್ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಯೋಜನೆಗೆ ಮುನ್ನ ಕೆಳಹರಿವಿನ ರಾಜ್ಯಗಳ ಒಪ್ಪಿಗೆ ಪಡೆದಿದೆಯೇ ಹಾಗೂ ಯೋಜನೆಯ ಪ್ರಸ್ತುತ ಸ್ಥಿತಿ ಏನು ಎಂಬ ಪ್ರಶ್ನೆಗಳನ್ನು ರಾಜ್ಯಸಭೆಯಲ್ಲಿ ಕೇಳಿದ್ದರು. ಅದಕ್ಕೆ ಉತ್ತರವಾಗಿ ಕೇಂದ್ರ ಸರ್ಕಾರ ಈ ಸ್ಪಷ್ಟನೆ ನೀಡಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಕಲ್ಯಾಣ ಕರ್ನಾಟಕದಲ್ಲಿ 16.23 ಲಕ್ಷ ಮತದಾರರು ಔಟ್!

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಪೂರ್ಣಗೊಂಡಿದ್ದು,...

ಕ್ಯಾಮೆರಾ ಆಫ್ ಆಗಿದೆ ಎಂದುಕೊಂಡು ಇಸ್ರೇಲ್ ನೀತಿ ಟೀಕೆ; ಲೈವ್ ಪ್ರಸಾರ ತಿಳಿದು ದಂಗಾದ ನಟಿ!

ದೇಶದ ನೀತಿಗಳ ಬಗ್ಗೆ ಸ್ವತಃ ಇಸ್ರೇಲ್‌ನಲ್ಲೇ ವಿರೋಧಿ ಧ್ವನಿಗಳು ಕೇಳಿಬರುತ್ತಿರುವುದು ತಿಳಿದೇ...

ನ್ಯಾಯಾಂಗದ ವಿರುದ್ಧ ಹೇಳಿಕೆ ಆರೋಪ; ಸಿಜೆಪಿ ನಾಯಕ ಸೌರವ್‌ ದಾಸ್‌ಗೆ ಮದ್ರಾಸ್ ಹೈಕೋರ್ಟ್ ನೋಟಿಸ್

ನ್ಯಾಯಾಂಗದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ CJP ವಕ್ತಾರ...