ಮುಸ್ಲಿಂ ಯುವಕರನ್ನು ಸಿಲುಕಿಸಲು ಸಂಚು? ಅಪಹರಣ ಪ್ರಕರಣಕ್ಕೆ ಹೊಸ ತಿರುವು!

Date:

ಹಿಂದು ಮಹಿಳೆಯ ಅಪಹರಣ ಮತ್ತು ಕಿರುಕುಳ ಪ್ರಕರಣದಲ್ಲಿ ಇಬ್ಬರು ಮುಸ್ಲಿಂ ಯುವಕರ ವಿರುದ್ಧ ಮಾಡಲಾಗಿದ್ದ ಆರೋಪಗಳು ಇದೀಗ ಹೊಸ ತಿರುವು ಪಡೆದುಕೊಂಡಿವೆ. ಈ ಪ್ರಕರಣವು ಪೂರ್ವಯೋಜಿತ ಸಂಚಿನ ಭಾಗವಾಗಿದ್ದು, ಇಬ್ಬರು ಮುಸ್ಲಿಂ ಯುವಕರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸಲಾಗಿದೆ ಎಂಬುದು ಪೊಲೀಸ್‌ ತನಿಖೆಯಿಂದ ಬಹಿರಂಗವಾಗಿದೆ.

- Advertisement -

ಉತ್ತರ ಪ್ರದೇಶದ ಮೀರತ್‌ನಲ್ಲಿ, ಝೀಶಾನ್ ಮತ್ತು ಶಾವೇಜ್ ಎಂಬ ಇಬ್ಬರು ಯುವಕರು ಒಬ್ಬ ಹಿಂದು ಮಹಿಳೆಯನ್ನು ಅಪಹರಿಸಿ ಕಾರಿನಲ್ಲಿ ಕರೆದೊಯ್ಯುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಇದೀಗ, ಪ್ರಕರಣದಲ್ಲಿ ಅವರನ್ನು ಉದ್ದೇಶಪೂರ್ವಕವಾಗಿ ಸಿಲುಕಿಸುವ ಸಂಚು ನಡೆದಿತ್ತು. ಯುವಕರು ತಮ್ಮ ವಿರುದ್ಧದ ಸಂಚಿನ ಅರಿವಿಲ್ಲದೆ, ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ ಎಂಬುದನ್ನು ಪೊಲೀಸರು ಪತ್ತೆಹಚ್ಚಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಸಂಚು ರೂಪಿಸಿದ್ದ ಪ್ರಮುಖ ಆರೋಪಿ ಎಂದು ಗುರುತಿಸಲ್ಪಟ್ಟಿರುವ ನಕುಲ್ ಸಿಂಗ್ ಪ್ರಸ್ತುತ ತಲೆಮರೆಸಿಕೊಂಡಿದ್ದಾನೆ. ಆತನ ಬಂಧನಕ್ಕಾಗಿ ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿದ್ದಾರೆ.

ಶನಿವಾರ ನಕುಲ್ ಸಿಂಗ್ ಪೊಲೀಸರಿಗೆ ಕರೆ ಮಾಡಿ, ‘ಝೀಶಾನ್ ಮತ್ತು ಶಾವೇಜ್ ಎಂಬ ಇಬ್ಬರು ಯುವಕರು ಒಬ್ಬ ಹಿಂದು ಮಹಿಳೆಯನ್ನು ಅಪಹರಿಸಿ ಕಾರಿನಲ್ಲಿ ಕರೆದೊಯ್ಯುತ್ತಿದ್ದಾರೆ. ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ, ಬಳಿಕ ಆಕೆಯನ್ನು ರಿಂಗ್ ರೋಡ್ ಪ್ರದೇಶದಲ್ಲಿ ಬಿಟ್ಟು ಪರಾರಿಯಾಗಲು ಯತ್ನಿಸುತ್ತಿದ್ದಾರೆ’ ಎಂದು ಮಾಹಿತಿ ಕೊಟ್ಟಿದ್ದ.

ಆತನ ಮಾಹಿತಿಯಂತೆ ಪೊಲೀಸರು ತಕ್ಷಣ ಸ್ಥಳಕ್ಕೆ ತೆರಳಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಜೊತೆಗೆ ಝೀಶಾನ್ ಮತ್ತು ಶಾವೇಜ್ ಅವರನ್ನು ವಶಕ್ಕೆ ಪಡೆದು, ಅವರ ವಾಹನವನ್ನು ವಶಪಡಿಸಿಕೊಂಡಿದ್ದರು. ನಕುಲ್ ನೀಡಿದ ದೂರಿನ ಆಧಾರದ ಮೇಲೆ ಆರಂಭದಲ್ಲಿ ಪ್ರಕರಣವೂ ದಾಖಲಾಗಿತ್ತು.

ಆದರೆ, ತನಿಖೆ ಮುಂದುವರಿದಂತೆ ಪ್ರಕರಣದ ದಿಕ್ಕು ಬದಲಾಗಿದೆ. ಪ್ರಜ್ಞೆ ಮರಳಿದ ಬಳಿಕ ಮಹಿಳೆ ನೀಡಿದ ಹೇಳಿಕೆ ಪೊಲೀಸರಿಗೆ ಮಹತ್ವದ ಸುಳಿವು ನೀಡಿದೆ. ತನಗೆ ನಕುಲ್ ಸಿಂಗ್‌ ಜೊತೆ ಮೊದಲೇ ಪರಿಚಯವಿತ್ತು. ಆತ ಉದ್ಯೋಗ ಕೊಡಿಸುವುದಾಗಿ ಹೇಳಿ ತನ್ನನ್ನು ಸಂಪರ್ಕಿಸಿದ್ದ ಎಂದು ಮಹಿಳೆ ಪೊಲೀಸರಿಗೆ ತಿಳಿಸಿದ್ದಾರೆ.

ಮಹಿಳೆಯ ಹೇಳಿಕೆ ಆಧರಿಸಿ ತನಿಖೆ ನಡೆಸಿದ ಪೊಲೀಸರಿಗೆ, ನಕುಲ್‌ನೇ ಉದ್ದೇಶಪೂರ್ವಕವಾಗಿ ಮಹಿಳೆಯನ್ನು ಝೀಶಾನ್ ಮತ್ತು ಶಾವೇಜ್ ಅವರೊಂದಿಗೆ ಕಳುಹಿಸಿದ್ದಾನೆ ಎಂಬುದು ಗೊತ್ತಾಗಿದೆ.

“ಮಹಿಳೆಯನ್ನು ಆ ಇಬ್ಬರು ಮುಸ್ಲಿಂ ಯುವಕರೊಂದಿಗೆ ಕಳಿಸಿದ್ದ ನಕುಲ್, ಆಕೆಯನ್ನು ರಿಂಗ್‌ ರೋಡ್‌ನಲ್ಲಿ ಇಳಿಸುವಂತೆ ಸೂಚಿಸಿದ್ದ. ಅಲ್ಲದೆ, ಈ ಯೋಜಿತ ಕೃತ್ಯಕ್ಕೆ ಸಹಕರಿಸಿದರೆ ಹಣ ನೀಡುವುದಾಗಿಯೂ ಮಹಿಳೆಗೆ ಆಮಿಷವೊಡ್ಡಿದ್ದ” ಎದು ಸಿವಿಲ್ ಲೈನ್ಸ್ ವಲಯದ ಪೊಲೀಸ್ ಅಧಿಕಾರಿ ಶುಚಿತಾ ಸಿಂಗ್ ವಿವರಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಕೋಮುವಾದ ವಿರೋಧಿ ಕಾಜಿ ನಜ಼ರುಲ್ ಇಸ್ಲಾಮ್‌ಗೆ ‘ಕೇಸರಿ’ ಲೇಪಿಸುತ್ತಿರುವ ಬಿಜೆಪಿ

ಝೀಶಾನ್ ಮತ್ತು ಶಾವೇಜ್ ವಿಚಾರಣೆ ವೇಳೆ ತಾವು ನಿರಪರಾಧಿಗಳು. ಘಟನೆಗೂ ಮುನ್ನ ತಾವು ಆ ಮಹಿಳೆಯನ್ನು ಎಂದಿಗೂ ಭೇಟಿಯಾಗಿರಲಿಲ್ಲ ಎಂದು ಹೇಳಿದ್ದಾರೆ.

ಪ್ರಕರಣದ ಸತ್ಯಾಸತ್ಯತೆ ತಿಳಿಯಲು ಪೊಲೀಸರು 500ಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದಾರೆ. ಸಂಬಂಧಪಟ್ಟವರ ಕರೆ ವಿವರಗಳ ವಿಶ್ಲೇಷಣೆಯನ್ನೂ ನಡೆಸಿದ್ದಾರೆ. ತನಿಖೆಯಲ್ಲಿ ಲಭ್ಯವಾದ ಸಾಕ್ಷ್ಯಗಳು ಮಹಿಳೆಯ ಹೇಳಿಕೆಯನ್ನು ಬೆಂಬಲಿಸುತ್ತಿದ್ದು, ಇಬ್ಬರು ಯುವಕರ ವಿರುದ್ಧ ಮಾಡಲಾಗಿದ್ದ ಆರೋಪಗಳಿಗೆ ನಕಲಿ ಎಂಬುದು ಸ್ಪಷ್ಟವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸದ್ಯ ನಕುಲ್ ಸಿಂಗ್ ವಿರುದ್ಧ ಹೊಸ ಪ್ರಕರಣ ದಾಖಲಿಸಿರುವ ಪೊಲೀಸರು, ಆತನ ಬಂಧನಕ್ಕಾಗಿ ಶೋಧ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತ & ಚೀನಾದ H-1B ಉದ್ಯೋಗಿಗಳಿಂದ ಅಮೆರಿಕನ್ನರ ಉದ್ಯೋಗಕ್ಕೆ ಕುತ್ತು; ಸಂಸದ ರಿಲೆ ಮೂರ್ ಆರೋಪ

ಅಮೆರಿಕದ ಕಂಪ್ಯೂಟರ್‌ ಸೈನ್ಸ್‌ ಪದವೀಧರರ ಉದ್ಯೋಗಾವಕಾಶಗಳನ್ನು ಭಾರತ ಮತ್ತು ಚೀನಾದಿಂದ ಬರುವ...

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ; ಸುಪ್ರೀಂನದ್ದು ದ್ವಂದ್ವ ನಿಲುವಲ್ಲವೇ?

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ...

ದೇಶ ತೊರೆಯುವಂತೆ ನೋಟಿಸ್‌; ಹೈಕೋರ್ಟ್ ಮೆಟ್ಟಿಲೇರಿದ ನಟ ಇಮ್ರಾನ್ ಖಾನ್

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆದ...

ಅವಧಿ ಮೀರಿದ ಆಹಾರ ಮರುಮಾರಾಟ ಆರೋಪ: ರಿಲಯನ್ಸ್‌, ಬ್ಲಿಂಕಿಟ್‌ ಘಟಕಗಳ ವಿರುದ್ಧ ತನಿಖೆ

ಅವಧಿ ಮೀರಿದ, ಹಾಳಾದ ಹಾಗೂ ಗ್ರಾಹಕರು ತಿರಸ್ಕರಿಸಿದ ಆಹಾರ ಪದಾರ್ಥಗಳನ್ನು ನಾಶಪಡಿಸುವ...