ಸಹಾಯಕ್ಕಾಗಿ ಕರೆ ಮಾಡಿದ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ

Date:

ಸಹಾಯಕ್ಕಾಗಿ ಪೊಲೀಸರಿಗೆ ಕರೆ ಮಾಡಿದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಪೊಲೀಸ್ ಕಾನ್‌ಸ್ಟೆಬಲ್ ಮತ್ತು ಗೃಹರಕ್ಷಕ ಅಧಿಕಾರಿಯನ್ನು ಬಂಧಿಸಲಾಗಿದೆ. ಘಟನೆಯು ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯಲ್ಲಿ ನಡೆದಿದೆ.

- Advertisement -

ಚಿತ್ತೂರಿನ ಪುಂಗನೂರು ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಉಮಾಶಂಕರ್ ಮತ್ತು ಗೃಹರಕ್ಷಕ ಕಿರಣ್ ಕುಮಾರ್ ಬಂಧಿತ ಆರೋಪಿಗಳು. ಆರೋಪಿಗಳು ತನಗೆ ನಿದ್ರೆ ಔಷಧಿಯನ್ನು ಬೆರೆಸಿದ್ದ ಪಾನೀಯ ಕುಡಿಸಿ, ಹಲವು ಬಾರಿ ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ. ಕೃತ್ಯದ ಬಗ್ಗೆ ಯಾರಿಗಾದರೂ ಹೇಳಿದರೆ, ಆಕೆಯ ಮಕ್ಕಳನ್ನು ಕೊಲ್ಲುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು ಎಂದು ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗೃಹರಕ್ಷಕ ಅಧಿಕಾರಿ ಕಿರಣ್ ಕುಮಾರ್‌ ನಿರಂತರವಾಗಿ ಫೋನ್ ಕರೆಗಳನ್ನು ಮಾಡುವ ಮೂಲಕ ಪದೇ ಪದೇ ಕಿರುಕುಳ ನೀಡುತ್ತಿದ್ದಾರೆ ಎಂದು ಸಂತ್ರಸ್ತೆ ಆರೋಪಿಸಿದ್ದಾರೆ.

ಈ ಲೇಖನ ಓದಿದ್ದೀರಾ?: ಜಿಎಸ್‌ಟಿ ಕಡಿತ | ಬಿಜೆಪಿ ಸಂಭ್ರಮಿಸುವಂಥಾದ್ದು ಏನಿದೆ?

ದೂರು ದಾಖಲಿಸಲು ಹಲವಾರು ಪೊಲೀಸ್ ಠಾಣೆಗಳನ್ನು ಸಂಪರ್ಕಿಸಿದರೂ, ಸುಮಾರು ಎರಡು ವಾರಗಳ ಕಾಲ ಪೊಲೀಸರು ದೂರು ದಾಖಲಿಸಿಕೊಳ್ಳಲಿಲ್ಲ. ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ನ್ಯಾಯಕ್ಕಾಗಿ ಸಾರ್ವಜನಿಕವಾಗಿ ಮನವಿ ಮಾಡಿದ ನಂತರವೇ ಪೊಲೀಸರು ಅಂತಿಮವಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ಮಹಿಳೆ ಹೇಳಿಕೊಂಡಿದ್ದಾರೆ.

“ನ್ಯಾಯಕ್ಕಾಗಿ ಮಹಿಳೆಯು ಮಾಧ್ಯಮದ ಮುಂದೆ ಸಾರ್ವಜನಿಕವಾಗಿ ಮನವಿ ಮಾಡಿದ ನಂತರ, ಬಂಗಾರುಪಾಳ್ಯಂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಬಂಧಿಸಿದ್ದಾರೆ. ತನಿಖೆ ನಡೆಯುತ್ತಿದೆ” ಎಂದು ಪಲಮನೇರ್‌ನ ಉಪ ಪೊಲೀಸ್ ವರಿಷ್ಠಾಧಿಕಾರಿ ದೇಗಲ ಪ್ರಭಾಕರ್ ಹೇಳಿದ್ದಾರೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...