ಸಂವಿಧಾನ ದಿನ | ಸಂವಿಧಾನದ ರಕ್ಷಣೆಗೆ ಗಾಂಧಿ, ಖರ್ಗೆ ಕರೆ; ಮೋದಿ ಸರ್ಕಾರದ ವಿರುದ್ಧ ವಿಪಕ್ಷಗಳ ಆಕ್ರೋಶ

Date:

ದೇಶಾದ್ಯಂತ ಸಂವಿಧಾನ ದಿನ ಅಚರಣೆ ನಡೆಯುತ್ತಿದೆ. ಮೋದಿ ಸರ್ಕಾರವು ಸಂವಿಧಾನವನ್ನು ತಿರುಚುವ ಕೆಲಸ ಮಾಡುತ್ತಿರುವ ಎಂದು ಆರೋಪಿಸಿರುವ ಕಾಂಗ್ರೆಸ್‌, ಮೋದಿ ಸರ್ಕಾರದ ವಿರುದ್ಧ ದೇಶಾದ್ಯಂತ ‘ಸಂವಿಧಾನ ರಕ್ಷಾ ಮಾರ್ಚ್’ ಹಮ್ಮಿಕೊಂಡಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ವಿರೋಧ ಪಕ್ಷಗಳ ನಾಯಕರು ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವುದಾಗಿ ಪ್ರತಿಜ್ಞೆ ಮಾಡಿದ್ದಾರೆ. ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ದುರ್ಬಲಗೊಳಿಸುತ್ತಿದೆ’ ಎಂದು ಆರೋಪಿಸಿರುವ ವಿಪಕ್ಷಗಳ ನಾಯಕರು, ಮೋದಿ ಸರ್ಕಾರ, ಬಿಜೆಪಿ, ಆರ್‌ಎಸ್‌ಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -

ಸಾಮಾಜಿಕ ಜಾಲತಾಣ ‘ಎಕ್ಸ್‌’ನಲ್ಲಿ ಟ್ವೀಟ್‌ ಮಾಡಿರುವ ರಾಹುಲ್‌ ಗಾಂಧಿ, “ಭಾರತದ ಸಂವಿಧಾನ ಕೇವಲ ಪುಸ್ತಕವಲ್ಲ, ಅದು ದೇಶದ ಆತ್ಮ. ಪ್ರತಿಯೊಬ್ಬ ಭಾರತೀಯನ ಘನತೆ ಮತ್ತು ಹಕ್ಕುಗಳನ್ನು ರಕ್ಷಿಸುವ ಸಾಧನವಾಗಿದೆ. ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವೇ ನಮ್ಮ ಪ್ರಜಾಪ್ರಭುತ್ವದ ಅಡಿಪಾಯ. ಯಾವುದೇ ಪರಿಸ್ಥಿತಿಯಲ್ಲಿಯೂ ಸಂವಿಧಾನವನ್ನು ರಕ್ಷಿಸುತ್ತೇವೆ. ಪ್ರತಿಯೊಬ್ಬ ಭಾರತೀಯನ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸುತ್ತೇವೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಆಶಯಗಳ ಅನುಷ್ಠಾನಕ್ಕೆ ಜನಾಂದೋಲನವಾಗಲಿ; ಪ್ರಜಾಪ್ರಭುತ್ವದ ರಕ್ಷಣೆಗೆ ಜನರ...

ನವೆಂಬರ್ 26ರ ಸಂವಿಧಾನ ದಿನಾಚರಣೆಯಿಂದ ನವೆಂಬರ್ 26, 2027ರವರೆಗೆ ಐಕ್ಯ ಹೋರಾಟ ಸಮಿತಿಯ ಒಂದು ವರ್ಷದ ಅಭಿಯಾನ; ಅಂಬೇಡ್ಕರ್ ಕನಸಿನ ಪ್ರಬುದ್ಧ ಭಾರತ ನಿರ್ಮಾಣಕ್ಕೆ ಹೊಸ ಸಂಕಲ್ಪ ನಮಗೆ ಸ್ವಾತಂತ್ರ್ಯ ಬಂದು ಏಳು ದಶಕಗಳಿಗೂ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್...

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ ಸ್ವಾವಲಂಬನೆ, ಮಹಿಳೆಯರಿಗೆ ಉದ್ಯೋಗಾವಕಾಶ, ಗ್ರಾಮೀಣ ಜನರಿಗೆ ಬದುಕಿನ ಭದ್ರತೆ ಹಾಗೂ ದೇಶಕ್ಕೆ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ದೊರಕಿಸಿಕೊಟ್ಟ ದೂರದೃಷ್ಟಿಯ ನಾಯಕರು. ಭಾರತದ...

ಪಂಜಾಬ್ ಚುನಾವಣೆ | 6 ವರ್ಷಗಳ ಬಳಿಕ ಮತ್ತೆ...

2020ರ ಐತಿಹಾಸಿಕ ರೈತ ಹೋರಾಟದ ವೇಳೆ ಮುರಿದುಬಿದ್ದಿದ್ದ ಶಿರೋಮಣಿ ಅಕಾಲಿ ದಳ (SAD) ಮತ್ತು ಬಿಜೆಪಿ  ಮೈತ್ರಿ ಆರು ವರ್ಷಗಳ ಬಳಿಕ ಮತ್ತೆ ಜೀವ ಪಡೆದುಕೊಂಡಿದೆ. 2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ...

ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಡಾ. ಬಿ.ಆರ್. ಅಂಬೇಡ್ಕರ್ ಅವರ ಮಾತುಗಳನ್ನು ಸ್ಮರಿಸಿದ್ದು, “ಸಾಮಾಜಿಕ ಪ್ರಜಾಪ್ರಭುತ್ವದ ಅಡಿಪಾಯವಿಲ್ಲದೆ ರಾಜಕೀಯ ಪ್ರಜಾಪ್ರಭುತ್ವ ದೀರ್ಘಕಾಲ ಉಳಿಯುವುದಿಲ್ಲ. ನ್ಯಾಯ, ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಮತ್ತು ಜಾತ್ಯತೀತತೆಯಂತಹ ಸಂವಿಧಾನಾತ್ಮಕ ಮೌಲ್ಯಗಳನ್ನು ರಕ್ಷಿಸುವುದು ಪ್ರತಿಯೊಬ್ಬ ಭಾರತೀಯನ ಜವಾಬ್ದಾರಿಯಾಗಿದೆ. ದೇಶದ ಏಕತೆ, ಸಮಗ್ರತೆ ಮತ್ತು ಸಾಮಾಜಿಕ ಸಾಮರಸ್ಯವನ್ನು ಕಾಪಾಡುವ ಸಂಕಲ್ಪ ಮಾಡೋಣ” ಎಂದು ‘ಎಕ್ಸ್‌’ನಲ್ಲಿ ಕರೆ ನೀಡಿದ್ದಾರೆ.

ಗುಜರಾತ್‌ನಲ್ಲಿ ನಡೆದ ಸಂವಿಧಾನ ರಕ್ಷಣಾ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲಾ, “ಬಿಜೆಪಿ ಸರ್ಕಾರವು ಡಾ. ಬಿ.ಆರ್. ಅಂಬೇಡ್ಕರ್ ಅವರ ಆಶಯಗಳನ್ನು ತುಳಿಯುತ್ತಿದೆ. ಸಂವಿಧಾನಾತ್ಮಕ ಮೌಲ್ಯಗಳು, ಸಮಾನತೆ ಮತ್ತು ಸಾಮಾಜಿಕ ಸಾಮರಸ್ಯಕ್ಕೆ ಧಕ್ಕೆ ತರುತ್ತಿದೆ” ಎಂದು ಆರೋಪಿಸಿದ್ದಾರೆ.

“ಮಹಾತ್ಮ ಗಾಂಧಿಯವರ ಹೆಸರು ಮತ್ತು ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಪ್ರತಿಮೆಗಳನ್ನು ರಾಜಕೀಯವಾಗಿ ಬಳಸಿಕೊಳ್ಳುವ ಬಿಜೆಪಿ, ರೈತರ ಜೀವನೋಪಾಯ ಮತ್ತು ಭೂಮಿಯ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ” ಎಂದು ಅವರು ಟೀಕಿಸಿದ್ದಾರೆ.

ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು, “ಸಂವಿಧಾನದ ರಕ್ಷಣೆ ಕೇವಲ ಒಂದು ರಾಜಕೀಯ ಪಕ್ಷಕ್ಕೆ ಸಂಬಂಧಿಸಿದ ವಿಷಯವಲ್ಲ. ಭಾರತ ಪ್ರಜಾಪ್ರಭುತ್ವವಾಗಿ ಮುಂದುವರಿಯುತ್ತದೆಯೇ ಎಂಬ ಮೂಲಭೂತ ಪ್ರಶ್ನೆಯಾಗಿದೆ. ಮತದಾರರ ಪಟ್ಟಿಯಲ್ಲಿ ನಡೆಯುತ್ತಿರುವ ಅಕ್ರಮಗಳ ವಿರುದ್ಧ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕಾಂಗ್ರೆಸ್ ದೇಶಾದ್ಯಂತ ಸಂವಿಧಾನ ರಕ್ಷಾ ಮಾರ್ಚ್ ನಡೆಸಲಿದೆ” ಎಂದು ಘೋಷಿಸಿದ್ದಾರೆ.

ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಸಂವಿಧಾನ ಮತ್ತು ಸಾಮಾಜಿಕ ನ್ಯಾಯದ ರಕ್ಷಣೆಯನ್ನು ತಮ್ಮ ಪಕ್ಷದ ಪ್ರಮುಖ ರಾಜಕೀಯ ಸಂಕಲ್ಪವೆಂದು ಪ್ರತಿಪಾದಿಸಿದ್ದಾರೆ. 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಂವಿಧಾನ ದಿನದಂದೇ ಪಕ್ಷದ ‘ಜನ–ಮನ್’ ಚುನಾವಣಾ ಪ್ರಣಾಳಿಕೆಯ ಮೊದಲ ಭಾಗವನ್ನು ಬಿಡುಗಡೆ ಮಾಡುವ ಕಾರ್ಯಕ್ರಮವನ್ನು ಸಮಾಜವಾದಿ ಪಕ್ಷ ಘೋಷಿಸಿದೆ.

ನಾಗಪುರದಲ್ಲಿ ‘ಪ್ರಜಾಪ್ರಭುತ್ವ ಉಳಿಸಿ, ಸಂವಿಧಾನ ಉಳಿಸಿ’ ಪ್ರತಿಭಟನೆಯಲ್ಲಿ ಭಾಗವಹಿಸಿರುವ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಹಸಂಯೋಜಕ ಆಶುತೋಷ್ ರಾಂಕಾ, “ಕಳೆದ ಕೆಲವು ವರ್ಷಗಳಿಂದ ದೇಶದ ಸಂವಿಧಾನದ ಮೇಲೆ ನೇರ ದಾಳಿಗಳು ನಡೆಯುತ್ತಿವೆ. ಅಂಬೇಡ್ಕರ್ ಪ್ರತಿಪಾದಿಸಿದ ಮೌಲ್ಯಗಳ ರಕ್ಷಣೆಗಾಗಿ ಸಾರ್ವಜನಿಕರು ಮುಂದೆ ಬರಬೇಕು” ಎಂದು ಕರೆ ನೀಡಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಂದಿನಿ ಮೊಸರಿನ ದರ ಇಳಿಕೆ

ಹಾಲು ಮತ್ತು ಹಾಲಿನ ಉತ್ಪನ್ನಗಳ ಬೆಲೆ ಏರಿಕೆಗೆ ಸಾರ್ವಜನಿಕ ವಲಯದಿಂದ ತೀವ್ರ...

ಸಂತ್ರಸ್ತೆಯ ಗುರುತು ಬಹಿರಂಗ: ಶಾಸಕ ಮುನಿರತ್ನ ವಿರುದ್ಧ ಮತ್ತೊಂದು ಎಫ್‌ಐಆರ್

ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆಯ ಗುರುತನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದ ಹಾಗೂ ಬೆದರಿಕೆ...

ಬೆಳಗಾವಿ |ಬೇಸಿಗೆಯ ನೀರಿನ ಸಂಕಷ್ಟ ಎದುರಿಸಲು ಮುನ್ನೆಚ್ಚರಿಕೆ: ಕೃಷ್ಣಾ ತೀರದ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕಡಿತ ಹೆಚ್ಚಳ

ಮುಂದಿನ ಬೇಸಿಗೆಯಲ್ಲಿ ನೀರಿನ ಕೊರತೆ ಎದುರಾಗುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು, ಕೃಷ್ಣಾ ನದಿ...

ರೈತರ ಬದುಕಿನಲ್ಲಿ ಹೊಸ ಬೆಳಕು ಮೂಡಿಸಿದ ಡಾ. ವರ್ಗೀಸ್ ಕುರಿಯನ್

ಕುರಿಯನ್ ಅವರು ಕೇವಲ ಹಾಲಿನ ಉತ್ಪಾದನೆಯನ್ನು ಹೆಚ್ಚಿಸಿದ ವ್ಯಕ್ತಿಯಲ್ಲ. ರೈತರಿಗೆ ಆರ್ಥಿಕ...