ಅಭಯಾರಣ್ಯದಲ್ಲಿ ಅಕ್ರಮ ಗಣಿಗಾರಿಕೆ – ಯಮುನಾ ನದಿಗೆ ಒಡ್ಡು ನಿರ್ಮಾಣ: ವರದಿ ಕೇಳಿದ ಸುಪ್ರೀಂ

Date:

ಹರಿಯಾಣದ ಕಲೆಸರ್ ವನ್ಯಜೀವಿ ಅಭಯಾರಣ್ಯದ ಬಳಿ ಗಣಿಗಾರಿಕೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಯಮುನಾ ನದಿಗೆ ಒಡ್ಡು ನಿರ್ಮಿಸಲಾಗಿದೆ. ಅಭಯಾರಣ್ಯದಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಹೇರಳವಾಗಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ಕೈಗೆತ್ತಿಕೊಂಡಿರುವ ಸುಪ್ರೀಂ ಕೋರ್ಟ್‌, ಒಡ್ಡು ನಿರ್ಮಾಣದ ಕುರಿತಾಗಿ ಸಂಪೂರ್ಣ ವರದಿ ನೀಡುವಂತೆ ಕೇಂದ್ರೀಯ ಅಧಿಕಾರ ಸಮಿತಿಗೆ (ಸಿಇಸಿ) ನಿರ್ದೇಶನ ನೀಡಿದೆ.

- Advertisement -

ಯಮುನಾ ನದಿ ತೀರದಲ್ಲಿರುವ ಯಮುನಾ ನಗರದ ಪೂರ್ವ ಭಾಗದಲ್ಲಿ ಕಲೆಸರ್ ವನ್ಯಜೀವಿ ಅಭಯಾರಣ್ಯವಿದೆ. ಇದೇ ಭಾಗದಲ್ಲಿ ಅಕ್ರಮ ಗಣಿಗಾರಿಕೆಗಳು ನಡೆಯುತ್ತಿವೆ. ಈ ಗಣಿಗಾರಿಕೆಗೆ ಅನುಕೂಲ ಮಾಡಿಕೊಡಲು ಅಭಯಾರಣ್ಯದ ಬಳಿ ನದಿಗೆ ಒಡ್ಡು ನಿರ್ಮಿಸಲಾಗಿದೆ ಎಂದು ಅರ್ಜಿದಾರರು ಒತ್ತಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಅರ್ಜಿದಾರರ ಪರವಾಗಿ ವಾದ ಮಂಡಿಸಿದ ವಕೀಲ ಗೌರವ್ ಕುಮಾರ್ ಬನ್ಸಾಲ್, “ಅಕ್ರಮ ಮತ್ತು ಅತಿರೇಕದ ಗಣಿಗಾರಿಕೆಗೆ ಅನುಕೂಲವಾಗುವಂತೆ ಒಡ್ಡು ನಿರ್ಮಾಣ ಮಾಡಲಾಗಿದೆ. ಪರಿಣಾಮ, ಅಭಯಾರಣ್ಯಕ್ಕೆ ಭಾರೀ ಹಾನಿಯಾಗಲಿದ್ದು, ವನ್ಯಜೀವಿಗಳಿಗೂ ಅಪಾಯ ತೊಂದರೆಯಾಗಲಿದೆ” ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಅಗಸ್ಟೀನ್ ಜಾರ್ಜ್ ಅವರನ್ನೊಳಗೊಂಡ ಪೀಠವು, ಅರ್ಜಿದಾರರು ಎತ್ತಿರುವ ಸಮಸ್ಯೆಗಳನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕು ಎಂದು ಸಿಇಸಿಗೆ ಸೂಚಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಾರಾಷ್ಟ್ರ ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಕೇವಲ 8,000 ರೂ. ಆಸೆಗೆ ಬಿದ್ದು ಶೂಗಳಲ್ಲಿ ಅಡಗಿಸಿ ಪಶ್ನೆಪತ್ರಿಕೆ ಕಳವು!

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (ಟಿಇಟಿ) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ...

ಲಡಾಖ್‌ ಹೋರಾಟಕ್ಕೆ ವರ್ಷ: ಸೆ. 23ರಂದು ಸೋನಮ್ ವಾಂಗ್‌ಚುಕ್ ನೇತೃತ್ವದಲ್ಲಿ 20 ಕಿ.ಮೀ ಪಾದಯಾತ್ರೆ

ಲಡಾಖ್‌ಗೆ ಸಂವಿಧಾನದ 6ನೇ ಪರಿಚ್ಛೇದದ ಅಡಿಯಲ್ಲಿ ವಿಶೇಷ ರಕ್ಷಣೆ ಹಾಗೂ ಪೂರ್ಣ...

85ರ ಗ್ರಾನೈಟ್ ಉದ್ಯಮಿಯ ಕಾಮಕೃತ್ಯ; 20 ವರ್ಷಗಳಿಂದ ಅಪ್ರಾಪ್ತೆಯರ ಮೇಲೆ ಅತ್ಯಾಚಾರ

ತಮಿಳುನಾಡಿನ ಪ್ರಭಾವಿ, ಗ್ರಾನೈಟ್ ಉದ್ಯಮಿ 85 ವರ್ಷದ ಆರ್‌. ವೀರಮಣಿ ವಿರುದ್ಧದ...

ವಸ್ತುವನ್ನು ಸುಡುವುದರಿಂದಷ್ಟೇ ‘ಚರಸ್’ ಎಂದು ಸಾಬೀತುಪಡಿಸಲಾಗದು: 22 ವರ್ಷಗಳ ಬಳಿಕ ಇಬ್ಬರು ಖುಲಾಸೆ

ವಶಪಡಿಸಿಕೊಂಡ ವಸ್ತುವಿನ ಒಂದು ಸಣ್ಣ ಭಾಗವನ್ನು ಸುಟ್ಟು ನೋಡುವುದರಿಂದ ಮಾತ್ರವೇ ಅದು...