ಸಲಿಂಗ ವಿವಾಹ ಮಾನ್ಯತೆ; ಹತ್ತು ದಿನಗಳೊಳಗೆ ತಮ್ಮ ಅಭಿಪ್ರಾಯ ತಿಳಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ

Date:

  • ಪತ್ರದಲ್ಲಿ ಕಾಯ್ದೆಗೆ ರಾಜ್ಯ ಸರ್ಕಾರಗಳ ಅಭಿಪ್ರಾಯ ಮುಖ್ಯ ಎಂದು ಉಲ್ಲೇಖ
  • ರಾಜ್ಯಗಳ ಅಭಿಪ್ರಾಯಗಳನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಲು ಸೂಚನೆ

ಸಲಿಂಗ ವಿವಾಹ ಕಾಯ್ದೆಯನ್ನು ಜಾರಿ ತರುವ ಸಂಬಂಧ ಸುಪ್ರೀಂ ಕೋರ್ಟ್​​ನಲ್ಲಿ​ ವಿಚಾರಣೆ ನಡೆಯುತ್ತಿರುವ ಬೆನ್ನಲ್ಲೇ, ಕೇಂದ್ರ ಸರ್ಕಾರ ರಾಜ್ಯಗಳಿಗೆ ಹತ್ತು ದಿನಗಳೊಳಗೆ ಸಲಿಂಗ ವಿವಾಹ ಕಾಯ್ದೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ಎಲ್ಲ ರಾಜ್ಯ ಸರ್ಕಾರಗಳಿಗೆ ಪತ್ರ ಬರೆದಿದೆ.

- Advertisement -

ಕೇಂದ್ರ ಕಾನೂನು ಸಚಿವಾಲಯವು ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಹತ್ತು ದಿನಗಳ ಒಳಗೆ ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯ ಸಲ್ಲಿಸುವಂತೆ ಸೂಚಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿಲುವಿನಲ್ಲಿ ಯಾವುದೇ ವಿಳಂಬವಿಲ್ಲದೆ ಸರಿಯಾದ ನಿರ್ಧಾರ ತೆಗೆದುಕೊಳ್ಳತ್ತದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ರಾಜ್ಯಗಳಿಗೆ ಬರೆದ ಪತ್ರದಲ್ಲಿ, “ಮದುವೆ ಸಂವಿಧಾನದ ಸಮಕಾಲೀನ ಪಟ್ಟಿಯಲ್ಲಿ ನಮೂದು 5ರ ಅಡಿಯಲ್ಲಿ ಬರುತ್ತದೆ, ಕೇಂದ್ರ ಸರ್ಕಾರ ಮತ್ತು ರಾಜ್ಯಗಳು ಎರಡೂ ಸಂಬಂಧಿತ ಸಮಸ್ಯೆಗಳನ್ನು ನಿಯಂತ್ರಿಸಲು ಅನುವು ಮಾಡಿಕೊಡುತ್ತದೆ. ಎಲ್ಲಾ ರಾಜ್ಯ ಸರ್ಕಾರಗಳ ಅಭಿಪ್ರಾಯಗಳನ್ನು ಒಳಗೊಂಡಂತೆ ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಲಾಗುವುದು. ಈ ಕಾಯ್ದೆಗೆ ರಾಜ್ಯ ಸರ್ಕಾರಗಳ ಅಭಿಪ್ರಾಯವು ಮುಖ್ಯ” ಎಂದು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಸಲಿಂಗ ವಿವಾಹ ಮಾನ್ಯತೆ; ವಿಶೇಷ ವಿವಾಹ ಕಾಯ್ದೆ ವ್ಯಾಪ್ತಿಯಲ್ಲಿ ಮಾತ್ರ ವಿಚಾರಣೆ ಎಂದ ಸುಪ್ರೀಂ ಕೋರ್ಟ್

ಕೇಂದ್ರ ಸರ್ಕಾರವು ಅಫಿಡವಿಟ್ ಸಲ್ಲಿಸುವ ಮೂಲಕ ನ್ಯಾಯಾಲಯದ ಮುಂದೆ ತನ್ನ ವಿಚಾರಗಳನ್ನು ತಿಳಿಸಲಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಈ ವಿಚಾರವಾಗಿ ಸಮಾಲೋಚನೆ ಮಾಡಲು ಮುಕ್ತವಾಗಿದೆ ಎಂದು ಕೇಂದ್ರವು ನ್ಯಾಯಾಲಯಕ್ಕೆ ಮನವಿ ಮಾಡಿದೆ.

ಸಲಿಂಗ ವಿವಾಹಗಳಿಗೆ ಕಾನೂನು ಮಂಜೂರಾತಿ ಕೋರಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ನಲ್ಲಿ ಮತ್ತೆ ವಿರೋಧಿಸಿದ ಕೇಂದ್ರವು, “ಹೊಸ ಸಾಮಾಜಿಕ ಸಂಬಂಧವನ್ನು ರಚಿಸುವ ಬಗ್ಗೆ ಸಂಸತ್ತು ಮಾತ್ರ ನಿರ್ಧರಿಸಬಹುದು” ಎಂದು ಮಂಗಳವಾರ ಹೇಳಿತ್ತು.

“ವಿಚಾರಣೆಯಲ್ಲಿ ಹಾಜರಿರುವವರು ರಾಷ್ಟ್ರದ ಅಭಿಪ್ರಾಯಗಳನ್ನು ಪ್ರತಿನಿಧಿಸುವುದಿಲ್ಲ ಮತ್ತು ಈ ಬಗ್ಗೆ ನಿರ್ಧರಿಸುವ ವ್ಯಾಪ್ತಿ ನ್ಯಾಯಾಲಯಕ್ಕೆ ಬರುತ್ತದೆಯೇ ಎಂದು ಮೊದಲು ಪರಿಶೀಲಿಸಬೇಕು” ಎಂದು ಕೇಂದ್ರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದರು.

“ಸಾಮಾನ್ಯ ಜನರು ಮತ್ತು ರಾಜಕೀಯ ಪಕ್ಷಗಳು ಈ ವಿಷಯದ ಬಗ್ಗೆ ಭಿನ್ನ ದೃಷ್ಟಿಕೋನಗಳನ್ನು ಹೊಂದಿದ್ದಾರೆ. ವಿಚಾರಣೆ ಮತ್ತು ಫಲಿತಾಂಶ ದೇಶದಲ್ಲಿ ಗಮನಾರ್ಹ ಪರಿಣಾಮ ಉಂಟು ಮಾಡುತ್ತದೆ” ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಕಳೆದ ವರ್ಷ ನವೆಂಬರ್ 25ರಂದು ಇಬ್ಬರು ಸಲಿಂಗಕಾಮಿ ದಂಪತಿಗಳು ತಮ್ಮ ವಿವಾಹದ ಹಕ್ಕನ್ನು ಖಾತ್ರಿ ಪಡಿಸಲು ಮತ್ತು ವಿಶೇಷ ವಿವಾಹ ಕಾಯ್ದೆಯಡಿಯಲ್ಲಿ ತಮ್ಮ ವಿವಾಹಗಳನ್ನು ನೋಂದಾಯಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಸುಪ್ರೀಂಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

CJP ಪ್ರೊಟೆಸ್ಟ್‌ ಎಫೆಕ್ಟ್ | ಅ.10ರಂದು ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು

ದೆಹಲಿಯಲ್ಲಿ ಅಕ್ಟೋಬರ್‌ 10ರಂದು ನಡೆಯಲಿರುವ ಕಾಕ್ರೋಚ್‌ ಜನತಾ ಪಾರ್ಟಿ (CJP) ಪ್ರತಿಭಟನೆಯ...

ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...