ಅಯೋಧ್ಯೆಯಿಂದ ಸ್ಪರ್ಧಿಸಿ ಗೆದ್ದು ತೋರಿಸಿ: ಸಿಎಂ ಯೋಗಿಗೆ ಅಖಿಲೇಶ್ ಯಾದವ್ ಬಹಿರಂಗ ಸವಾಲು

Date:

ಉತ್ತರ ಪ್ರದೇಶದ ಮುಂಬರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ಸಮಾಜವಾದಿ ಪಾರ್ಟಿ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ನೇರ ಸವಾಲೊಂದನ್ನು ಎಸೆದಿದ್ದಾರೆ. ಮುಖ್ಯಮಂತ್ರಿಗೆ ನಿಜವಾಗಿಯೂ ತಮ್ಮ ಆಡಳಿತದ ಮೇಲೆ ನಂಬಿಕೆಯಿದ್ದರೆ, ಅವರು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಅಯೋಧ್ಯೆ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದು ತೋರಿಸಲಿ ಎಂದು ಅಖಿಲೇಶ್ ಯಾದವ್ ಪಂಥಾಹ್ವಾನ ನೀಡಿದ್ದಾರೆ.

- Advertisement -

ಅಯೋಧ್ಯೆಯಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ (ಭಾಗವತ ಕಥೆ) ಭಾಗವಹಿಸಿ ಮಾತನಾಡಿದ ಅಖಿಲೇಶ್ ಯಾದವ್, ಆಡಳಿತಾರೂಢ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ಇದನ್ನೂ ಓದಿ: 2027ರ ಉತ್ತರ ಪ್ರದೇಶ ಚುನಾವಣೆಯಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ ಘೋಷಣೆ

“ಸಮಾಜವಾದಿ ಪಾರ್ಟಿಯು ಅಯೋಧ್ಯೆ ಕ್ಷೇತ್ರಕ್ಕೆ ತನ್ನ ಅಭ್ಯರ್ಥಿಯನ್ನು (ಪವನ್ ಪಾಂಡೆ) ಘೋಷಿಸಿದಾಗಿನಿಂದಲೂ ಬಿಜೆಪಿ ಸಾಲು ಸಾಲು ಆಂತರಿಕ ಸಮೀಕ್ಷೆಗಳನ್ನು ನಡೆಸುತ್ತಿದೆ. ಪ್ರತಿಯೊಂದು ಸಮೀಕ್ಷೆಯಲ್ಲೂ ಬಿಜೆಪಿ ಹಿನ್ನಡೆ ಅನುಭವಿಸುತ್ತಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಬಿಜೆಪಿಗೆ ಅಯೋಧ್ಯೆಯಲ್ಲಿ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಯೇ ಸಿಗುತ್ತಿಲ್ಲ ಎಂದು ಕೇಳಿಬರುತ್ತಿದೆ. ಅಷ್ಟೊಂದು ಆತ್ಮವಿಶ್ವಾಸವಿರುವ ಮುಖ್ಯಮಂತ್ರಿಗಳು ಸ್ವತಃ ಅಯೋಧ್ಯೆಯಿಂದಲೇ ಕಣಕ್ಕಿಳಿದು ತಮ್ಮ ಶಕ್ತಿ ನಿರೂಪಿಸಲಿ” ಎಂದು ವ್ಯಂಗ್ಯವಾಡಿದರು.

ಎಸ್‌ಪಿ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ಮೂಲ ಸ್ವರೂಪಕ್ಕೆ ಧಕ್ಕೆಯಾಗದಂತೆ ಜಾಗತಿಕ ಮಟ್ಟದ ಅಭಿವೃದ್ಧಿ ಮಾಡಲಾಗುವುದು. ಅಭಿವೃದ್ಧಿ ಹೆಸರಿನಲ್ಲಿ ಸ್ಥಳೀಯರ ಮನೆ ಹಾಗೂ ಅಂಗಡಿಗಳನ್ನು ಕೆಡವಿ ಹಾಕುವ ಕೆಲಸವನ್ನು ಮಾಡುವುದಿಲ್ಲ ಮತ್ತು ಮಹಿಳೆಯರಿಗೆ ವಾರ್ಷಿಕ ₹40,000 ಪಿಂಚಣಿ ನೀಡಲಾಗುವುದು ಎಂದು ಆಶ್ವಾಸನೆ ನೀಡಿದರು.

ಶ್ರೀರಾಮ ಮತ್ತು ಶ್ರೀಕೃಷ್ಣ ನಮಗೆ ಒಂದೇ. ಅಧಿಕಾರವನ್ನು ಪ್ರೀತಿ ಮತ್ತು ಸೌಹಾರ್ದತೆಯಿಂದ ಗೆಲ್ಲಬೇಕೇ ಹೊರತು ವಂಚನೆ ಅಥವಾ ಭೇದಭಾವದಿಂದಲ್ಲ. ಧರ್ಮದ ಹೆಸರಿನಲ್ಲಿ ಹಣ ಸಂಗ್ರಹಿಸಿ ದುರ್ಬಳಕೆ ಮಾಡಿಕೊಂಡವರಿಗೆ ಈ ಬಾರಿ ರಾಜ್ಯದ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಕಿಡಿಕಾರಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಬೀದರ್ ದಕ್ಷಿಣ ಕ್ಷೇತ್ರದ ʼಆಪ್ʼ ಅಧ್ಯಕ್ಷರಾಗಿ ಅಶೋಕ ಜಾಯ್ ಆಯ್ಕೆ

ಬೀದರ್ ದಕ್ಷಿಣ ಕ್ಷೇತ್ರದ ಆಮ್ ಆದ್ಮಿ ಪಕ್ಷದ ನೂತನ ಅಧ್ಯಕ್ಷರಾಗಿ ಡಾ.ಅಶೋಕ...

ಬಸವನ ಬಾಗೇವಾಡಿ | ತಾಲೂಕು ಆಸ್ಪತ್ರೆಯಲ್ಲಿ ಔಷಧ ಕೊರತೆ: ಡಿಎಚ್‌ಒ ಸ್ಪಷ್ಟನೆಗೆ ರೈತ ಸಂಘ ಆಗ್ರಹ

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಯಲ್ಲಿ ಬಡ ರೋಗಿಗಳಿಗೆ ಅಗತ್ಯ...