ಖಾಸಗಿಯವರಿಗೆ ನೀಡಿದ ಗುತ್ತಿಗೆಗಳನ್ನು ಕಾರಣಗಳನ್ನು ನೀಡದೆ ರದ್ದುಗೊಳಿಸಬಾರದು: ಸುಪ್ರೀಂ ಕೋರ್ಟ್

Date:

ಖಾಸಗಿಯವರೆಗೆ ನೀಡಿರುವ ಗುತ್ತಿಗೆಗಳನ್ನು ಕಾರಣಗಳನ್ನು ನೀಡದೆ ರದ್ದುಗೊಳಿಸಬಾರದು ಎಂದು ಹೇಳಿರುವ ಸುಪ್ರೀಂ ಕೋರ್ಟ್, ಕಲ್ಕತ್ತಾ ಹೈಕೋರ್ಟ್ ನೀಡಿದ ಆದೇಶದ ವಿರುದ್ಧದ ತೀರ್ಪನ್ನು ಕಾಯ್ದಿರಿಸಿದೆ.

- Advertisement -

ಮುಖ್ಯ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಹಾಗೂ ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಹಾಗೂ ಮನೋಜ್‌ ಮಿಶ್ರಾ ಅವರಿದ್ದ ಪೀಠವು, ಒಪ್ಪಂದ ಪಡೆದ ನಂತರ ಬಂಡವಾಳಗಳನ್ನು ಹೂಡುವವರು ರದ್ದುಗೊಳ್ಳುವಾಗ ಸಮಂಜಸವಾದ ಕಾರಣಗಳನ್ನು ನಿರೀಕ್ಷಿಸುತ್ತಾರೆ ಎಂದು ತಿಳಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

“ಹೇಗೆ ಯಾವುದೇ ಕಾರಣವಿಲ್ಲದೆ ಒಪ್ಪಂದಗಳನ್ನು ರದ್ದುಗೊಳಿಸುತ್ತೀರಿ? ಒಬ್ಬ ಖಾಸಗಿ ವ್ಯಕ್ತಿಯು ಒಪ್ಪಂದದ ಅನುಸಾರವಾಗಿ ಗುತ್ತಿಗೆ ಪಡೆದಿರುತ್ತಾನೆ” ಎಂದು ಮುಖ್ಯ ನ್ಯಾಯಮೂರ್ತಿಗಳು ತಿಳಿಸಿದರು.

ಪ್ರಕರಣದ ವಾಸ್ತವಗಳನ್ನು ಉಲ್ಲೇಖಿಸಿದ ಮುಖ್ಯ ನ್ಯಾಯಮೂರ್ತಿಗಳು, ಕಾರಣಗಳನ್ನು ನೀಡದೆ ಗುತ್ತಿಗೆಗಳನ್ನು ರದ್ದುಗೊಳಿಸಬಾರದು ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ಮೇ 25, 2023 ರಂದು ಏಕ ಸದಸ್ಯತ್ವದ ಕಲ್ಕತ್ತಾ ಹೈಕೋರ್ಟ್ ಪೀಠ ಕಂಪನಿಯೊಂದಕ್ಕೆ ಯಾವುದೇ ಕಾರಣ ನೀಡದೆ ಒಪ್ಪಂದವನ್ನು ರದ್ದುಗೊಳಿಸಿದ್ದನ್ನು ಎತ್ತಿಹಿಡಿದಿತ್ತು.

ಒಪ್ಪಂದ ಪಡೆದಿದ್ದ ಕಂಪನಿಯು ಕೋಲ್ಕತ್ತಾದ ಪಶ್ಚಿಮ ನಗರದ ಬೈಪಾಸ್‌ ಕೆಳರಸ್ತೆಗಳನ್ನು ನಿರ್ವಹಿಸಲು  ಹತ್ತು ವರ್ಷಗಳವರೆಗೆ ಗುತ್ತಿಗೆ ಪಡೆದುಕೊಂಡಿತ್ತು. ಒಪ್ಪಂದದಂತೆ ಕಂಪನಿಗೆ ಕೆಳರಸ್ತೆಯ ಎರಡು ಭಾಗಗಳಲ್ಲಿ ಜಾಹೀರಾತು ನೀಡಲು ಅನುಮೋದಿಸಲಾಗಿತ್ತು. ಇದಕ್ಕಾಗಿ ಕೆಲ ಕಾಮಗಾರಿ ಕೆಲಸವನ್ನು ನಿರ್ವಹಿಸುವುದು ಅಗತ್ಯವಾಗಿತ್ತು.

ಆದಾಗ್ಯೂ, ಕೋಲ್ಕತ್ತಾ ಮಹಾನಗರ ಅಭಿವೃದ್ಧಿ ಪ್ರಾಧಿಕಾರ(ಕೆಎಂಡಿಎ) ಫೆ.7,2023 ರಂದು ಒಪ್ಪಂದವನ್ನು ರದ್ದುಗೊಳಿಸಿತ್ತು. ಅಲ್ಲದೆ ಇಲ್ಲಿಯವರೆಗೂ ಕಾಮಗಾರಿ ಹಾಗೂ ನಿರ್ವಹಣೆಗಾಗಿ ವೆಚ್ಚ ಮಾಡಿದ್ದ ಹಣ ಹಾಗೂ ಠೇವಣಿಯಿಟ್ಟಿದ್ದ ಪರವಾನಗಿ ಶುಲ್ಕವನ್ನು ಹಿಂತಿರುಗಿಸುವುದಾಗಿ ಕೆಎಂಡಿಎ ತಿಳಿಸಿತ್ತು.

ಕೆಎಂಡಿಎ ಕಾರಣ ತಿಳಿಸದೆ ಒಪ್ಪಂದವನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಅರ್ಜಿದಾರರು ಕೋರ್ಟ್‌ ಮೆಟ್ಟಿಲೇರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...