12 ವರ್ಷಗಳ ಆಡಳಿತದ ಕೊಡುಗೆ: ಮೋದಿ ಜನ್ಮದಿನದಂದು ಸರ್ಕಾರಿ ಶಾಲೆ ಗಿಫ್ಟ್ ನೀಡಿದ ಸಿಜೆಪಿ

Date:

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 76ನೇ ಜನ್ಮದಿನಾಚರಣೆಯ ಸಂದರ್ಭದಲ್ಲಿ, ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ಯ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ವಿಶಿಷ್ಟ ಹಾಗೂ ವ್ಯಂಗ್ಯಾತ್ಮಕ ರೀತಿಯಲ್ಲಿ ಶುಭಾಶಯ ಕೋರಿದ್ದಾರೆ. ಮಹಾರಾಷ್ಟ್ರದ ಆದಿವಾಸಿ ಸರ್ಕಾರಿ ಶಾಲೆಯೊಂದರಲ್ಲಿ ದೀಪ ಬೆಳಗಿಸಿದ ಅವರು, “ಈ ಜೀರ್ಣಾವಸ್ಥೆಯಲ್ಲಿರುವ ಸರ್ಕಾರಿ ಶಾಲೆಯನ್ನು ನಾವು ಮೋದಿ ಅವರಿಗೆ ಜನ್ಮದಿನದ ಉಡುಗೊರೆಯಾಗಿ ನೀಡುತ್ತಿದ್ದೇವೆ” ಎಂದು ಹೇಳುವ ಮೂಲಕ ಸರ್ಕಾರದ ಮೂಲಸೌಕರ್ಯಗಳ ಕೊರತೆಯನ್ನು ಪ್ರಸ್ತಾಪಿಸಿದ್ದಾರೆ.

- Advertisement -

ಸಾರ್ವಜನಿಕವಾಗಿ ಮೋದಿ ಅವರ ಜನ್ಮದಿನದ ಅಂಗವಾಗಿ ದೀಪ ಬೆಳಗಿಸಲು ನೀಡಿದ್ದ ಕರೆಯ ಹಿನ್ನೆಲೆಯಲ್ಲಿ, ಸಿಜಿಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಆದಿವಾಸಿ ಮಕ್ಕಳಿರುವ ಸರ್ಕಾರಿ ಶಾಲೆಯ ಕಟ್ಟಡದಲ್ಲಿ ದೀಪ ಹಚ್ಚಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಇದನ್ನೂ ಓದಿ: ಸಿಜೆಪಿಯಿಂದ ‘ಆದಿವಾಸಿ ಸ್ಕೂಲ್ ಠೀಕ್ ಕರೋ’ ಅಭಿಯಾನ: ಸೆ.17ರಿಂದ ಶಾಲೆಗಳ ಪರಿಶೀಲನೆ

ಈ ಸಂದರ್ಭದಲ್ಲಿ ಕಟ್ಟಡದ ಸವೆದುಹೋದ ಗೋಡೆಗಳು ಮತ್ತು ಕೊರತೆಯಿರುವ ಮೂಲಸೌಕರ್ಯಗಳನ್ನು ತೋರಿಸಿದ ಅವರು, “ನಿಮ್ಮ ಕಳೆದ 12 ವರ್ಷಗಳ ಆಡಳಿತ ಹಾಗೂ ಸಾಧನೆಗೆ ಸಾಕ್ಷಿಯಾಗಿರುವ ಈ ಸರ್ಕಾರಿ ಶಾಲೆಯನ್ನೇ ನಿಮಗಾಗಿ ಗಿಫ್ಟ್ ಆಗಿ ನೀಡುತ್ತಿದ್ದೇವೆ” ಎಂದು ಟೀಕಿಸಿದರು. ನಂತರ ಸ್ಥಳದಲ್ಲಿದ್ದವರೊಂದಿಗೆ ಸೇರಿ ‘ಹ್ಯಾಪಿ ಬರ್ತ್‌ಡೇ ಮೋದಿಜಿ’ ಎಂದು ಹಾಡಿ ಶುಭ ಹಾರೈಸಿದರು.

CJP ಪ್ರಸ್ತುತ ‘ಶಾಲೆ ಸರಿ ಮಾಡಿ’ (School Thik Karo) ಎಂಬ ಸಾಮಾಜಿಕ ಅಭಿಯಾನವನ್ನು ನಡೆಸುತ್ತಿದ್ದು, ದೇಶದ ವಿವಿಧ ಭಾಗಗಳಲ್ಲಿರುವ ಸರ್ಕಾರಿ ಶಾಲೆಗಳ ಅವ್ಯವಸ್ಥೆ ಮತ್ತು ಶಿಥಿಲಾವಸ್ಥೆಯನ್ನು ಮೂಲಮಟ್ಟದಿಂದ ಎತ್ತಿ ತೋರಿಸುವ ಕೆಲಸ ಮಾಡುತ್ತಿದೆ. ಸಾರ್ವಜನಿಕ ವಲಯದಲ್ಲಿ ಈ ರೀತಿಯ ವಿಶಿಷ್ಟ ಮಾದರಿಯ ಪ್ರತಿಭಟನೆ ಹಾಗೂ ಶುಭಾಶಯ ಪ್ರದರ್ಶನವು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10 ದಿನಗಳಲ್ಲಿ ಘೋಷಣೆ – ಶಾಸಕ ಅಶೋಕ ಪಟ್ಟಣ

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ ಭವಿಷ್ಯ!

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ,...

ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆ ನಿರ್ಮಾಣಕ್ಕೆ ಸರ್ಕಾರ ಅಸ್ತು

"ಮಂಗಳೂರಿನಲ್ಲಿ ಕಿದ್ವಾಯಿ, ಜಯದೇವ ಆಸ್ಪತ್ರೆಗಳ ಶಾಖೆಗಳ ನಿರ್ಮಾಣಕ್ಕೆ ರಾಜ್ಯ ಸಚಿವ ಸಂಪುಟ...

ಔರಾದ್‌ | ಶಿಕ್ಷಕರ ಮಾತು ಆಜ್ಞೆಯಂತೆ ಪಾಲಿಸುವ ಮಕ್ಕಳು ಸೋಲುವುದಿಲ್ಲ : ಶಾಸಕ ಪ್ರಭು ಚವ್ಹಾಣ

ಶಿಕ್ಷಕರು ನೀಡುವ ಮೌಲ್ಯಯುತ ಮಾತುಗಳನ್ನು ಆಜ್ಞೆಯಂತೆ ಪಾಲಿಸುವ ಮಕ್ಕಳು ಜೀವನದಲ್ಲಿ ಸೋಲದೆ,...