ಗಾಂಧಿ ಕುಟುಂಬದ ಬಗ್ಗೆ ವಿವಾದಾತ್ಮಕ ಪೋಸ್ಟ್: ಕಂಗನಾ ವಿರುದ್ಧ FIR ದಾಖಲು!

Date:

ಗಾಂಧಿ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಪೋಸ್ಟ್ ಹಂಚಿಕೊಂಡ ಆರೋಪದ ಮೇಲೆ ಹಿಮಾಚಲ ಪ್ರದೇಶದ ಮಂಡಿ ಕ್ಷೇತ್ರದ ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧ ಶಿಮ್ಲಾ ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದಾರೆ.

- Advertisement -

ಶಿಮ್ಲಾ ನಿವಾಸಿ ನಿವೃತ್ತ ಕ್ಯಾಪ್ಟನ್ ಅತುಲ್ ಶರ್ಮಾ ನೀಡಿದ ದೂರಿನ ಆಧಾರದ ಮೇಲೆ ಶುಕ್ರವಾರ (ನ. 13) ಈ ಪ್ರಕರಣ ದಾಖಲಾಗಿದೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಗೌರವ್ ಸಿಂಗ್ ಮಾಧ್ಯಮಗಳಿಗೆ ಖಚಿತಪಡಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (BNS) ಸೆಕ್ಷನ್ 196(1)(b) (ಗುಂಪುಗಳ ನಡುವೆ ದ್ವೇಷ ಹರಡುವುದು), ಸೆಕ್ಷನ್ 353(2) (ಸಾರ್ವಜನಿಕ ಶಾಂತಿಗೆ ಭಂಗ ತರುವ ಹೇಳಿಕೆ) ಮತ್ತು ಸೆಕ್ಷನ್ 356(2) (ಮಾನನಷ್ಟ) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿತ್ತನೆ ಗುರಿ ಅರ್ಧದಷ್ಟೂ ಮುಟ್ಟದ ಕೃಷಿ ಚಟುವಟಿಕೆ; ಜೋಳದ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟದಿಂದ ಕಂಗೆಟ್ಟ ಅನ್ನದಾತರಿಗೆ ಹಿಂಗಾರು ಹಂಗಾಮಿನಲ್ಲಾದರೂ ಮಳೆ ಆಸರೆಯಾಗಬಹುದು ಎಂಬ ನಿರೀಕ್ಷೆಯಿತ್ತು. ಆದರೆ ರೈತರ ಆ ನಿರೀಕ್ಷೆಯೂ ಹುಸಿಯಾಗಿದೆ. ಮುಂಗಾರಿನ ಬೆನ್ನಲ್ಲೇ ಹಿಂಗಾರು ಹಂಗಾಮಿನಲ್ಲೂ ಮಳೆ ಕೈಕೊಟ್ಟಿರುವುದರಿಂದ...

ಧಾರವಾಡದ ‘ಲಲಿತಕಲಾ ಅಕಾಡೆಮಿ’ಗೆ ದುಸ್ಥಿತಿ: ಕಲಾವಿದರಿಂದಲೇ ದೂರವಾದ ಪ್ರಾದೇಶಿಕ...

ಕಲಾವಿದರ ಬಹುದಿನಗಳ ಬೇಡಿಕೆಯಂತೆ ಸ್ಥಾಪನೆಯಾದ ಕೇಂದ್ರಕ್ಕೆ ಮೂರೇ ವರ್ಷಗಳಲ್ಲಿ ದುಸ್ಥಿತಿ; ಸಂಚಾಲಕರ ಏಕಪಕ್ಷೀಯ ಧೋರಣೆ, ಕಲಾವಿದರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿರುವುದು ಹಾಗೂ ಕಲಾ ಚಟುವಟಿಕೆಗಳ ಕೊರತೆಯ ವಿರುದ್ಧ ಹಿರಿಯ ಕಲಾವಿದರ ಆಕ್ರೋಶ. ಸಲಹಾ ಸಮಿತಿ...

ಗದಗ | ವರದಕ್ಷಿಣೆ ಮುಟ್ಟದ, ಒಗ್ಗಟ್ಟು ಬಿಡದ ತುಂಬು...

ಆಧುನಿಕತೆ ಬೆಳೆದಂತೆಲ್ಲ ಸಮಾಜದಲ್ಲಿ ಅವಿಭಕ್ತ ಕುಟುಂಬಗಳು ಕಣ್ಮರೆಯಾಗಿ ವಿಭಕ್ತ ಕುಟುಂಬಗಳ ಸಂಖ್ಯೆಗಳು ಹೆಚ್ಚಾಗುತ್ತಿವೆ. ನಾವು ನಮ್ಮವರು ಎನ್ನುವ ಭಾವನೆಗಳು ಮರೆಯಾಗುತ್ತಿರುವ ಹೊತ್ತಿನಲ್ಲಿ ನಂಬಿಕೆ, ವಿಶ್ವಾಸ, ಪ್ರೀತಿಯ ತಳಗಹದಿಯ ಮೇಲೆ ಇಂದಿಗೂ ಜಾಲವಾಡಗಿ ಅವಿಭಕ್ತ...

ದೂರಿನಲ್ಲೇನಿದೆ? 

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಬಿಡುಗಡೆಯಾದ ದಿನವೇ, ಅಂದರೆ ನವೆಂಬರ್ 10ರಂದು ಕಂಗನಾ ರಣಾವತ್ ತಮ್ಮ ಅಧಿಕೃತ ‘ಎಕ್ಸ್’ ಖಾತೆಯಿಂದ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದರು. ಅದರಲ್ಲಿ, 1981ರ ಸುಮಾರಿನ ಗಾಂಧಿ ಕುಟುಂಬದ ಭೋಜನಕೂಟದ ಹಳೆಯ ವಿಡಿಯೋವೊಂದನ್ನು ಹಂಚಿಕೊಂಡಿದ್ದ ಅವರು, ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ಸಂಜಯ್ ಗಾಂಧಿ ಅವರ ಸಾವುಗಳನ್ನು ಸೋನಿಯಾ ಗಾಂಧಿ ಅವರ ರಾಜಕೀಯ ಏಳಿಗೆಗೆ ತಳಕು ಹಾಕಿ ದ್ವೇಷಪೂರಿತ ಮತ್ತು ಪ್ರಚೋದನಾಕಾರಿಯಾಗಿ ಬರೆದುಕೊಂಡಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಅಲ್ಲದೆ, ಸೋನಿಯಾ ಗಾಂಧಿ ಅವರನ್ನು ‘ನಿಗೂಢ ವಿದೇಶಿ ಪ್ರಜೆ’ ಎಂದು ಉಲ್ಲೇಖಿಸಿರುವುದು ಮತ್ತು ಸಂಜಯ್ ಗಾಂಧಿ ಅವರ ನಿಧನದ ನಂತರ ಮೇನಕಾ ಗಾಂಧಿ ಕುಟುಂಬದ ನಿವಾಸದಿಂದ ಹೊರನಡೆದ ವಿಚಾರವನ್ನು ಉಲ್ಲೇಖಿಸಿ ವ್ಯಂಗ್ಯವಾಡಿರುವುದಕ್ಕೆ ದೂರುದಾರರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ನವೆಂಬರ್ 12ರಂದು ಹಿಮಾಚಲ ಪ್ರದೇಶದ ಪೊಲೀಸ್ ಮಹಾನಿರ್ದೇಶಕರಿಗೆ ಇಮೇಲ್ ಮೂಲಕ ದೂರು ಸಲ್ಲಿಸಿದ್ದ ಕ್ಯಾಪ್ಟನ್ ಅತುಲ್ ಶರ್ಮಾ, ಜವಾಬ್ದಾರಿಯುತ ಸ್ಥಾನದಲ್ಲಿರುವ ಜನಪ್ರತಿನಿಧಿಯೊಬ್ಬರ ಇಂತಹ ಹೇಳಿಕೆಗಳು ಸಾರ್ವಜನಿಕ ಶಾಂತಿ ಮತ್ತು ಸಾಮರಸ್ಯಕ್ಕೆ ಧಕ್ಕೆ ತರಬಹುದು ಎಂದು ಪ್ರತಿಪಾದಿಸಿದ್ದಾರೆ. ಸಂವಿಧಾನದ 19(1)(a) ವಿಧಿಯಡಿ ಇರುವ ವಾಕ್ ಸ್ವಾತಂತ್ರ್ಯವು ಸಂಪೂರ್ಣ ನಿರಂಕುಶವಲ್ಲ ಎಂದಿರುವ ಅವರು, ಭಾರತೀಯ ಸಾಕ್ಷ್ಯ ಅಧಿನಿಯಮ 2023ರ ಅಡಿಯಲ್ಲಿ ಸಾಮಾಜಿಕ ಜಾಲತಾಣದ ಡಿಜಿಟಲ್ ಸಾಕ್ಷ್ಯಗಳನ್ನು ಸಂರಕ್ಷಿಸಿ, ಸೈಬರ್ ಕ್ರೈಂ ವಿಭಾಗದಿಂದ ಕಾಲಮಿತಿಯೊಳಗೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಕೋರಿದ್ದಾರೆ.

ಪ್ರಕರಣ ದಾಖಲಾಗಿರುವ ಕುರಿತು ಸಂಸದೆ ಕಂಗನಾ ರನೌತ್ ಅವರಿಂದ ಇದುವರೆಗೂ ಯಾವುದೇ ತಕ್ಷಣದ ಪ್ರತಿಕ್ರಿಯೆ ವ್ಯಕ್ತವಾಗಿಲ್ಲ . 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅನುಭವ ಮಂಟಪ ಉತ್ಸವ : ನ.16ರಿಂದ 26ರವರೆಗೆ ‘ಜನಪದದಲ್ಲಿ ಬಸವ ದರ್ಶನ’ ಪ್ರವಚನ

ಬಸವಕಲ್ಯಾಣ: ನವೆಂಬರ್ 28 ಮತ್ತು 29ರಂದು ನಡೆಯಲಿರುವ 47ನೇ ಶರಣ ಕಮ್ಮಟ...

ಬೀದರ್‌ | ಕೆಕೆಆರ್‌ಟಿಸಿ ನಿರ್ದೇಶಕ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ ಚಂದ್ರಕಾಂತ ಹಿಪ್ಪಳಗಾಂವ

ಕಾಂಗ್ರೆಸ್ ಪಕ್ಷಕ್ಕಾಗಿ ಸುಮಾರು ನಾಲ್ಕು ದಶಕಗಳಿಂದ ಸಂಘಟನೆಯಲ್ಲಿ ತೊಡಗಿಸಿಕೊಂಡು ವಿವಿಧ ಜವಾಬ್ದಾರಿಗಳನ್ನು...

ಐಐಟಿ-ರೂರ್ಕಿಯಲ್ಲಿ ವಿದ್ಯಾರ್ಥಿ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ, 70 ಪರೀಕ್ಷೆಗಳು ಮುಂದೂಡಿಕೆ

ದೇಶದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ರೂರ್ಕಿಯ ಭಾರತೀಯ ತಂತ್ರಜ್ಞಾನ ಸಂಸ್ಥೆಯ...

ಬೀದರ್‌ | ಕೃಷಿ, ಶಿಕ್ಷಣ, ವಸತಿ ಸಾಲ ಸೌಲಭ್ಯಕ್ಕೆ ಆದ್ಯತೆ ನೀಡಿ: ಸಂಸದ ಸಾಗರ್ ಖಂಡ್ರೆ

ಬೀದರ್ ಜಿಲ್ಲೆಯಲ್ಲಿ ಕೃಷಿ, ಶಿಕ್ಷಣ, ವಸತಿ ಸೇರಿದಂತೆ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ...