ಸಾವರ್ಕರ್ ಕುರಿತ ವಿವಾದಾತ್ಮಕ ಹೇಳಿಕೆ: ರಾಹುಲ್‌ಗೆ ಲಖನೌ ಕೋರ್ಟ್ ನೀಡಿದ್ದ ಸಮನ್ಸ್‌ಗೆ ಸುಪ್ರೀಂ ತಡೆ

Date:

ವಿ.ಡಿ. ಸಾವರ್ಕರ್ ಅವರ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ರಿಲೀಫ್ ಸಿಕ್ಕಿದೆ. ರಾಹುಲ್ ಗಾಂಧಿ ಅವರಿಗೆ ಲಖನೌ ವಿಚಾರಣಾ ನ್ಯಾಯಾಲಯ ನೀಡಿದ್ದ ಸಮನ್ಸ್ ಆದೇಶವನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಪಡಿಸಿದೆ.

- Advertisement -

​ನ್ಯಾಯಮೂರ್ತಿಗಳಾದ ದೀಪಂಕರ್ ದತ್ತಾ ಮತ್ತು ಶೀಲ್ ನಾಗು ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಮಹತ್ವದ ಆದೇಶ ನೀಡಿದೆ. ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅಗತ್ಯವಿರುವ ಪೂರ್ವ ‘ಮಂಜೂರಾತಿ’ಯನ್ನು ಪಡೆದಿಲ್ಲ ಎಂಬ ಆಧಾರದ ಮೇಲೆ ನ್ಯಾಯಪೀಠ ಈ ಕ್ರಮ ಕೈಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

​”ಉತ್ತರ ಪ್ರದೇಶ ಸರ್ಕಾರ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಮಂಜೂರಾತಿ ಪಡೆದಿರುವ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ದೂರುದಾರರ ಪರ ವಕೀಲರು ಹಾಗೂ ಹೆಚ್ಚುವರಿ ಸಾಲಿಸಿಟರ್ ಜನರಲ್ ಒಪ್ಪಿಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಮ್ಯಾಜಿಸ್ಟ್ರೇಟ್ ಹೊರಡಿಸಿದ್ದ ದೂರನ್ನು ಹಾಗೂ ಸಮನ್ಸ್ ಆದೇಶವನ್ನು ರದ್ದುಪಡಿಸಲಾಗಿದೆ” ಎಂದು ಸುಪ್ರೀಂ ಪೀಠ ಸ್ಪಷ್ಟಪಡಿಸಿದೆ.

2022ರ ನವೆಂಬರ್ 17ರಂದು ಮಹಾರಾಷ್ಟ್ರದ ಅಕೋಲಾ ಜಿಲ್ಲೆಯಲ್ಲಿ ನಡೆದ ‘ಭಾರತ್ ಜೋಡೋ ಯಾತ್ರೆ’ಯ ಸಮಾವೇಶದಲ್ಲಿ ರಾಹುಲ್ ಗಾಂಧಿ ಅವರು ವಿ.ಡಿ. ಸಾವರ್ಕರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರ ಆಧಾರದ ಮೇಲೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಲಕ್ನೋದ ಅಧೀನ ನ್ಯಾಯಾಲಯವು ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿತ್ತು.

​ತಮ್ಮ ವಿರುದ್ಧದ ಈ ಸಮನ್ಸ್ ಆದೇಶವನ್ನು ಪ್ರಶ್ನಿಸಿ ರಾಹುಲ್ ಗಾಂಧಿ ಮೇಲ್ಮನವಿ ಸಲ್ಲಿಸಿದ್ದರು. ಇದಕ್ಕೂ ಮುನ್ನ, 2025ರ ಏಪ್ರಿಲ್ 4ರಂದು ಲಖನೌ ಹೈಕೋರ್ಟ್ ಪೀಠವು ಈ ಹಂತದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿ, ಸೆಷನ್ಸ್ ಕೋರ್ಟ್‌ಗೆ ಪರಿಷ್ಕರಣಾ ಅರ್ಜಿ (Revision petition) ಸಲ್ಲಿಸುವಂತೆ ರಾಹುಲ್ ಗಾಂಧಿಗೆ ಸೂಚಿಸಿತ್ತು. ಇದೀಗ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿ, ಸಮನ್ಸ್ ರದ್ದಾಗಿದೆ.

​ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಕೂಡ ರಾಹುಲ್ ಗಾಂಧಿ ವಿರುದ್ಧ ಇದೇ ವಿಚಾರವಾಗಿ ದೂರು ದಾಖಲಿಸಿದ್ದರು. 2023ರ ಮಾರ್ಚ್‌ನಲ್ಲಿ ಲಂಡನ್‌ನಲ್ಲಿ ಭಾಷಣ ಮಾಡಿದ್ದ ರಾಹುಲ್ ಗಾಂಧಿ, “ಸಾವರ್ಕರ್ ಮತ್ತು ಅವರ 5-6 ಜನ ಸ್ನೇಹಿತರು ಸೇರಿ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದರು ಮತ್ತು ಈ ಬಗ್ಗೆ ಸಾವರ್ಕರ್ ಸಂತಸಪಟ್ಟಿದ್ದರು ಎಂದು ಪುಸ್ತಕವೊಂದರಲ್ಲಿ ಅವರೇ ಬರೆದುಕೊಂಡಿದ್ದಾರೆ” ಎಂದು ಆರೋಪಿಸಿದ್ದರು.

​ಆದರೆ, ಈ ಘಟನೆ ಸಂಪೂರ್ಣ ಸುಳ್ಳು ಮತ್ತು ಸಾವರ್ಕರ್ ಆ ರೀತಿ ಎಲ್ಲಿಯೂ ಬರೆದಿಲ್ಲ ಎಂದು ಆರೋಪಿಸಿದ್ದ ಸತ್ಯಕಿ ಸಾವರ್ಕರ್, ಐಪಿಸಿ ಸೆಕ್ಷನ್ 500ರ ಅಡಿಯಲ್ಲಿ ರಾಹುಲ್ ಗಾಂಧಿಗೆ ಶಿಕ್ಷೆ ವಿಧಿಸಬೇಕು ಹಾಗೂ ಸಿಆರ್‌ಪಿಸಿ ಸೆಕ್ಷನ್ 357ರ ಅಡಿ ಪರಿಹಾರ ಕೊಡಿಸಬೇಕು ಎಂದು ಆಗ್ರಹಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯವು ಈಗಾಗಲೇ ರಾಹುಲ್ ಗಾಂಧಿ ಅವರಿಗೆ ಜಾಮೀನು ಮಂಜೂರು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ...