ಸಹ-ಆರೋಪಿಗಳು ಖುಲಾಸೆಯಾದಾಗ ಪ್ರತ್ಯೇಕ ಆರೋಪವಿಲ್ಲದೆ ಕೊಲೆ ಪ್ರಕರಣದಲ್ಲಿ ಶಿಕ್ಷೆ ನೀಡಲಾಗದು: ಸುಪ್ರೀಂ ಕೋರ್ಟ್

Date:

ಇತರೆ ಸಹ-ಆರೋಪಿಗಳನ್ನು ದೋಷಮುಕ್ತಗೊಳಿಸಿದ ಸಂದರ್ಭದಲ್ಲಿ, ಯಾವುದೇ ಪ್ರತ್ಯೇಕ ಅಥವಾ ಸ್ವತಂತ್ರ ಆರೋಪವಿಲ್ಲದೆ ಕೇವಲ ‘ಸಾಮಾನ್ಯ ಉದ್ದೇಶ’ದ ಆಧಾರದ ಮೇಲೆ ಒಬ್ಬನೇ ಒಬ್ಬ ಆರೋಪಿಯನ್ನು ಮಾತ್ರ ಅಪರಾಧಿಯನ್ನಾಗಿ ದೋಷಿ ಮಾಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

- Advertisement -

ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ನ್ಯಾಯಮೂರ್ತಿ ಅತುಲ್ ಎಸ್. ಚಂದೂರ್ಕರ್ ಅವರನ್ನೊಳಗೊಂಡ ಸುಪ್ರೀಂ ಕೋರ್ಟ್ ಪೀಠವು ಈ ತೀರ್ಪು ನೀಡಿದೆ. ಮಹಾರಾಷ್ಟ್ರದಲ್ಲಿ ತನ್ನ ಸೊಸೆಯ ಕೊಲೆಗೆ ಸಂಬಂಧಿಸಿದಂತೆ ಸಕಮಲಬಾಯಿ ವಾಮನ್ ಪಾಟೀಲ್ ಎಂಬುವವರ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಈ ತೀರ್ಪು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Quockerwodger’: ಶಶಿ ತರೂರ್ ಸೂಚಿಸಿದ ಹೊಸ ರಾಜಕೀಯ ಪದ!

ಇದು 19ನೇ ಶತಮಾನದ ಇಂಗ್ಲಿಷ್ ಭಾಷೆಯಲ್ಲಿ ಬಳಕೆಯಲ್ಲಿದ್ದ ಅಪರೂಪದ ಪದ. ಮೂಲತಃ ದಾರಗಳ ಮೂಲಕ ನಿಯಂತ್ರಿಸಲ್ಪಡುವ ಮರದ ಗೊಂಬೆಯನ್ನು ಸೂಚಿಸುತ್ತಿತ್ತು. ಗೊಂಬೆಯಾಟದಲ್ಲಿ ಸೂತ್ರಧಾರ ದಾರ ಎಳೆದಂತೆ ಗೊಂಬೆ ಕೈಕಾಲು ಆಡಿಸುತ್ತದೆ. ಗೊಂಬೆ ಚಲಿಸುತ್ತದೆಯೇ...

ರಾಷ್ಟ್ರೀಯವಾದ ಹೊಟ್ಟೆ ತುಂಬಿಸುವುದಿಲ್ಲ; ಟ್ರಂಪ್‌ಗೆ ಅಮೆರಿಕನ್ನರು ಕಲಿಸಿದ ಪಾಠ...

ಬೆಲೆ ಏರಿಕೆ, ದುಬಾರಿ ಜೀವನ, ಕುಸಿಯುತ್ತಿರುವ ಖರೀದಿ ಸಾಮರ್ಥ್ಯ ಹಾಗೂ ಆರ್ಥಿಕ ಅನಿಶ್ಚಿತತೆ—ಇವು ಇತ್ತೀಚೆಗೆ ನಡೆದ ಅಮೆರಿಕದ ಮಧ್ಯಂತರ ಚುನಾವಣಾ ವಿಷಯಗಳಾಗಿದ್ದವು. ಇದು ರಾಷ್ಟ್ರೀಯತೆಯ ಆವೇಶ, ಬಲಿಷ್ಠ ನಾಯಕತ್ವವೆಂಬ ಪ್ರಚಾರ ಹಾಗೂ ರಾಜಕೀಯ...

ಕ್ಯಾಂಪಸ್ ರಾಜಕಾರಣದ ಹರಣ: ಎಎಂಯು, ಜಾಮಿಯಾದಲ್ಲಿ ಸೊಲ್ಲಡಗಿದ್ದರ ಆಂತರ್ಯವೇನು?

ಸ್ವಾತಂತ್ರ್ಯ ಸಂಗ್ರಾಮದ ಗರಡಿಯಾಗಿ, ದೇಶಕ್ಕೆ ಕ್ರಾಂತಿಕಾರಿ ನಾಯಕರನ್ನು ನೀಡಿದ್ದ ಅಲೀಗಢ ಮತ್ತು ಜಾಮಿಯಾ ಅಂಗಳಗಳು ಇಂದು ಮೌನಕ್ಕೆ ಜಾರಿವೆ. 2006ರ ನಿರ್ಬಂಧಗಳಿಂದ ಹಿಡಿದು ಮೋದಿ ಸರ್ಕಾರದ ಅವಧಿಯ ತನಿಖೆಗಳವರೆಗೆ - ಮುಸ್ಲಿಂ ವಿಶ್ವವಿದ್ಯಾಲಯಗಳ...

ಇದನ್ನೂ ಓದಿ: ಕಂಬ ಕುಸಿದು ಬಾಲಕಿ ಸಾವು ಪ್ರಕರಣ: ಶಾಲಾ ಆಡಳಿತ ಮಂಡಳಿ ವಿರುದ್ಧದ ಪ್ರಕರಣ ಕೈಬಿಟ್ಟ ಸುಪ್ರೀಂ ಕೋರ್ಟ್

ಈ ಪ್ರಕರಣದಲ್ಲಿ ಐಪಿಸಿ ಸೆಕ್ಷನ್ 302 (ಕೊಲೆ) ಮತ್ತು ಸೆಕ್ಷನ್ 34ರ (ಸಾಮಾನ್ಯ ಉದ್ದೇಶ) ಅಡಿಯಲ್ಲಿ ಕಮಲಬಾಯಿ ಹಾಗೂ ಇತರೆ ಸಹ-ಆರೋಪಿಗಳ ಮೇಲೆ ಜಂಟಿಯಾಗಿ ಆರೋಪ ಹೊರಿಸಲಾಗಿತ್ತು. ವಿಚಾರಣಾ ನ್ಯಾಯಾಲಯವು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಇತರೆ ಆರೋಪಿಗಳನ್ನು ದೋಷಮುಕ್ತಗೊಳಿಸಿತ್ತು. ಆದರೆ, ಹೈಕೋರ್ಟ್ ಕಮಲಬಾಯಿ ಅವರನ್ನು ಮಾತ್ರ ಅಪರಾಧಿಯೆಂದು ತೀರ್ಮಾನಿಸಿ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ಅರ್ಜಿದಾರರ ಪರ ವಾದವನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್, ಮೂಲ ಆರೋಪವು ಎಲ್ಲರ ಮೇಲೂ ಒಟ್ಟಾಗಿ ‘ಸಾಮಾನ್ಯ ಉದ್ದೇಶ’ ಮತ್ತು ಸೆಕ್ಷನ್ 302ರ ಅಡಿಯಲ್ಲಿ ಇತ್ತು ಹೊರತು ಕಮಲಬಾಯಿ ಮೇಲೆ ಮಾತ್ರ ಯಾವುದೇ ಪ್ರತ್ಯೇಕ ಸೆಕ್ಷನ್ 302ರ ನಿರ್ದಿಷ್ಟ ಆರೋಪವಿರಲಿಲ್ಲ ಎಂದು ತಿಳಿಸಿತು.

ಸಹ-ಆರೋಪಿಗಳು ಎಲ್ಲರೂ ಸೆಕ್ಷನ್ 302 ಮತ್ತು 34ರ ಅಡಿಯಲ್ಲಿ ಖುಲಾಸೆಗೊಂಡಿರುವಾಗ, ಕೇವಲ ಒಬ್ಬ ವ್ಯಕ್ತಿಯ ಮೇಲೆ ಮಾತ್ರ ಪ್ರತ್ಯೇಕವಾದ ಸ್ವತಂತ್ರ ಸೆಕ್ಷನ್ 302ರ ನಿರ್ದಿಷ್ಟ ಆರೋಪವಿಲ್ಲದಿದ್ದಲ್ಲಿ ಆಕೆಯನ್ನು ಮಾತ್ರ ಪ್ರತ್ಯೇಕವಾಗಿ ಕೊಲೆ ಪ್ರಕರಣದಲ್ಲಿ ದೋಷಿ ಎಂದು ಘೋಷಿಸಲು ಕಾನೂನುಬದ್ಧವಾಗಿ ಸಾಧ್ಯವಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟಿದೆ.

ಈ ಹಿನ್ನೆಲೆಯಲ್ಲಿ ಬಾಂಬೆ ಹೈಕೋರ್ಟ್ ನೀಡಿದ್ದ ದೋಷಿ ತೀರ್ಪನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್, ಮೇಲ್ಮನವಿದಾರಳನ್ನು ಕೂಡಲೇ ಬಿಡುಗಡೆ ಮಾಡುವಂತೆ ಆದೇಶಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರಿನಲ್ಲಿ ಪತ್ನಿಯ ಕುಟುಂಬದ 7 ಜನರನ್ನು ಒರಳು ಕಲ್ಲಿನಿಂದ ಜಜ್ಜಿ ಕೊಂದ ಕ್ಯಾಬ್ ಚಾಲಕ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ 45 ವರ್ಷದ ಕ್ಯಾಬ್ ಚಾಲಕನೊಬ್ಬ ತನ್ನ ಪತ್ನಿಯ...

ಬಸವಕಲ್ಯಾಣ | ತಂತ್ರಜ್ಞಾನ ಬಳಕೆಯಲ್ಲಿ ವಿವೇಕ ಅಗತ್ಯ: ಡಾ.ರಮೇಶ ಕೆ.ಬಿ.

ಆಧುನಿಕ ತಂತ್ರಜ್ಞಾನ ಮಾನವ ಜಗತ್ತನ್ನು ಪಲ್ಲಟಗೊಳಿಸಿದ್ದು, ಅದರ ಶಕ್ತಿ ಮತ್ತು ಮಿತಿಗಳ...

ಯುವಜನರ ಕನಸುಗಳಿಗೆ ರೆಕ್ಕೆ ಮೂಡಿಸಿದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’ ಯಶಸ್ವಿ ಸಂಪನ್ನ

ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ...

ಬೀದರ್ | 436 ಅಂಗನವಾಡಿ ಹುದ್ದೆಗಳ ಭರ್ತಿಗೆ ಆನ್‌ಲೈನ್ ಅರ್ಜಿ ಆಹ್ವಾನ

ಬೀದರ್ ಜಿಲ್ಲೆಯ ವಿವಿಧ ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ...