ಮಣಿಪುರದಲ್ಲಿ ಹೆಚ್ಚಿದ ಉದ್ವಿಗ್ನತೆ: ಸಿಎಂ ಭದ್ರತಾ ತಂಡದ ಮೇಲೆ ಉಗ್ರರ ದಾಳಿ; ಪೊಲೀಸರಿಗೆ ಗಾಯ

Date:

ಮಣಿಪುರದಲ್ಲಿ ಉದ್ವಿಗ್ನತೆ ಇನ್ನಷ್ಟು ಹೆಚ್ಚಾಗಿದ್ದು, ಶಂಕಿತ ಉಗ್ರರು ಸೋಮವಾರ ಮಣಿಪುರ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರ ಭದ್ರತಾ ತಂಡದ ಮೇಲೆ ದಾಳಿ ನಡೆಸಿದ್ದು ಪೊಲೀಸ್‌ ಸಿಬ್ಬಂದಿಯೋರ್ವರಿಗೆ ಗಾಯವಾಗಿದೆ.

- Advertisement -

ಪೊಲೀಸರ ಪ್ರಕಾರ, ಕಾಂಗ್‌ಪೋಕ್ಪಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 37ರಲ್ಲಿ ಬೆಳಿಗ್ಗೆ 10:30ರ ಸುಮಾರಿಗೆ ತಂಡವು ಜಿರಿಬಾಮ್‌ಗೆ ಹೋಗುತ್ತಿದ್ದಾಗ ದಾಳಿ ನಡೆಸಿದೆ. ಇತ್ತೀಚೆಗೆ ಮೈತಿ ಮತ್ತು ಕುಕಿ ಸಮುದಾಯದ ನಡುವೆ ಜನಾಂಗೀಯ ಸಂಘರ್ಷ ಈ ಸ್ಥಳದಲ್ಲಿಯೇ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸಂಘರ್ಷದ ಪರಿಸ್ಥಿತಿಯನ್ನು ಅವಲೋಕಿಸಲು ಸಿಎಂ ಬಿರೇನ್ ಸಿಂಗ್ ಮಂಗಳವಾರ ಚಾಪರ್‌ನಲ್ಲಿ ಪಟ್ಟಣಕ್ಕೆ ತೆರಳಲಿದ್ದರು. ಈ ವೇಳೆ ದಾಳಿ ನಡೆದಿದ್ದು, ಕಾನ್‌ಸ್ಟೆಬಲ್‌ನನ್ನು ರಾಜ್ಯದ ರಾಜಧಾನಿ ಇಂಫಾಲ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಕಾನ್‌ಸ್ಟೆಬಲ್‌ಗೆ ಬುಲೆಟ್‌ ತಗುಲಿದೆ.

ಇದನ್ನು ಓದಿದ್ದೀರಾ?  ಮಣಿಪುರದಲ್ಲಿ ವರ್ಷ ಕಳೆದರೂ ಶಾಂತಿಯಿಲ್ಲ, ಈಶಾನ್ಯ ರಾಜ್ಯಕ್ಕೆ ಆದ್ಯತೆ ನೀಡಿ: ಆರ್‌ಎಸ್‌ಎಸ್ ಮುಖ್ಯಸ್ಥ ಭಾಗವತ್

ಪೊಲೀಸ್ ಕಾನ್‌ಸ್ಟೆಬಲ್‌ನನ್ನು ಆಸ್ಪತ್ರೆಯಲ್ಲಿ ಭೇಟಿಯಾಗಿ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿಂಗ್, “ಈ ಘಟನೆಯು ಅತ್ಯಂತ ದುರದೃಷ್ಟಕರ ಮತ್ತು ಅತ್ಯಂತ ಖಂಡನೀಯ. ಇದು ಮುಖ್ಯಮಂತ್ರಿ ಹಾಗೂ ರಾಜ್ಯದ ಜನತೆಯ ಮೇಲಿನ ದಾಳಿಯಾಗಿದೆ. ಈ ಕೃತ್ಯಗಳನ್ನು ತಡೆಯಲು ರಾಜ್ಯ ಸರ್ಕಾರ ಏನಾದರೂ ಮಾಡಲೇಬೇಕಾಗಿದೆ” ಎಂದು ತಿಳಿಸಿದರು.

ಅಪರಾಧಿಗಳ ಮೇಲೆ ಕ್ರಮಕೈಗೊಳ್ಳುವ ಯಾವುದೇ ನಿರ್ಧಾರಕ್ಕೆ ಬರುವ ಮುನ್ನ ತಮ್ಮ ಸಹೋದ್ಯೋಗಿಗಳನ್ನು ಸಂಪರ್ಕಿಸುತ್ತೇನೆ ಎಂದು ಸಿಎಂ ಹೇಳಿದ್ದಾರೆ.

ಇನ್ನು ಜಿರಿಬಾಮ್‌ಗೆ ಭೇಟಿ ನೀಡುವ ಕುರಿತು ಜಂಟಿ ಕ್ರಿಯಾ ಸಮಿತಿಯ (ಜೆಎಸಿ) ಮುಖಂಡರಿಗೆ ಸಿಎಂ ಮೌಖಿಕ ಭರವಸೆ ನೀಡಿದ್ದಾರೆ ಎಂದು ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರು ಈ ಪತ್ರಿಕೆಗೆ ತಿಳಿಸಿದ್ದಾರೆ.

ಅಸ್ಸಾಂನ ಬರಾಕ್ ಕಣಿವೆಯಲ್ಲಿ ಕ್ಯಾಚಾರ್ ಜಿಲ್ಲೆಗೆ ಹೊಂದಿಕೊಂಡು ಮಣಿಪುರದ ಪಶ್ಚಿಮದ ಗಡಿಯಲ್ಲಿ ನೆಲೆಗೊಂಡಿರುವ ಜಿರಿಬಾಮ್ ಜಿಲ್ಲೆಯಲ್ಲಿ ಮೈತಿ, ಕುಕಿ ಮತ್ತು ಇತರೆ ಬುಡಕಟ್ಟು ಜನಾಂಗದ ಮಿಶ್ರ ಜನಸಂಖ್ಯೆಯಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...