ರಾಜಸ್ಥಾನ ಹೈಕೋರ್ಟ್‌ನಲ್ಲಿ ಭ್ರಷ್ಟಾಚಾರದ ಆರೋಪ: ಮಾಜಿ ಉಸ್ತುವಾರಿ ಸಿಜೆ ವಿರುದ್ಧ ತಿರುಗಿಬಿದ್ದ ನ್ಯಾಯಮೂರ್ತಿ ಮೆಹ್ತಾ

Date:

ರಾಜಸ್ಥಾನ ಹೈಕೋರ್ಟ್‌ನ ಮಾಜಿ ಉಸ್ತುವಾರಿ ಮುಖ್ಯನ್ಯಾಯಮೂರ್ತಿ (ಆಕ್ಟಿಂಗ್ ಸಿಜೆ) ಸಂಜೀವ್ ಪ್ರಕಾಶ್ ಶರ್ಮಾ ಅವರ ವಿರುದ್ಧ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಸಂದೀಪ್ ಮೆಹ್ತಾ ಅವರು ಗಂಭೀರ ಆರೋಪಗಳನ್ನು ಮಾಡಿ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್ ಅವರಿಗೆ ನಾಲ್ಕನೇ ಪತ್ರ ಬರೆದಿದ್ದಾರೆ. ಈ ಬೆಳವಣಿಗೆಯಿಂದಾಗಿ ದೇಶದ ನ್ಯಾಯಾಂಗ ವಲಯದಲ್ಲಿ ಭಾರಿ ಸಂಚಲನ ಮೂಡಿದೆ.

- Advertisement -

ಆಂತರಿಕ ತನಿಖೆಗಳಲ್ಲಿ ನೇರ ಹಸ್ತಕ್ಷೇಪ, ಗೌಪ್ಯತೆಯ ಉಲ್ಲಂಘನೆ ಮತ್ತು ಆಡಳಿತಾತ್ಮಕ ಅಧಿಕಾರ ದುರುಪಯೋಗ ಸೇರಿದಂತೆ ಹಲವು ಗಂಭೀರ ಆರೋಪಗಳನ್ನು ನ್ಯಾಯಮೂರ್ತಿ ಮೆಹ್ತಾ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನೂ ಓದಿ: ಲಿಂಗತ್ವ ಗುರುತಿಸುವಿಕೆಗೆ ಸರ್ಕಾರದ ಮಧ್ಯಸ್ಥಿಕೆ ಸಲ್ಲದು: ರಾಜಸ್ಥಾನ ಹೈ ಕೋರ್ಟ್

ಹೈಕೋರ್ಟ್‌ನಲ್ಲಿ ನಿಯಮಗಳನ್ನು ತಮಗೆ ಬೇಕಾದಂತೆ ಬದಲಾಯಿಸಿರುವುದು, ಭೂ ವಿವಾದದ ಪ್ರಕರಣಗಳಲ್ಲಿ ನ್ಯಾಯಾಂಗ ಹಸ್ತಕ್ಷೇಪ ಮಾಡಿರುವುದು ಹಾಗೂ ಹೆಚ್ಚಿನ ವೇತನ ಶ್ರೇಣಿಯ ಹೊಸ ಹುದ್ದೆಗಳನ್ನು ಸೃಷ್ಟಿಸಿ ತಮಗೆ ಬೇಕಾದವರನ್ನು ನೇಮಕ ಮಾಡಿಕೊಳ್ಳುವುದು ಸೇರಿದಂತೆ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂದು ಪತ್ರದಲ್ಲಿ ಸುಪ್ರೀಂ ಕೋರ್ಟ್ ಗಮನಕ್ಕೆ ತರಲಾಗಿದೆ.

ಈ ಹಿಂದೆ ಆಗಸ್ಟ್ 2, 10 ಮತ್ತು 17ರಂದು ಮೂರು ಪತ್ರಗಳನ್ನು ಬರೆದಿದ್ದ ನ್ಯಾಯಮೂರ್ತಿ ಮೆಹ್ತಾ, ನ್ಯಾಯಮೂರ್ತಿ ಶರ್ಮಾ ಅವರ ‘ಅಧಿಕಾರ ದುರುಪಯೋಗ’ ಮತ್ತು ಪ್ರಕರಣಗಳ ಹಂಚಿಕೆಯಲ್ಲಿ (ರೋಸ್ಟರ್) ಪಕ್ಷಪಾತ ಮಾಡುತ್ತಿದ್ದಾರೆ ಎಂದು ದೂರಿದ್ದರು. ಇದೀಗ ನಾಲ್ಕನೇ ಪತ್ರದ ಮೂಲಕ ಪ್ರಕರಣದ ಗಂಭೀರತೆಯನ್ನು ಸಿಜೆಐ ಅವರಿಗೆ ವಿವರಿಸಿದ್ದಾರೆ.

ಮತ್ತೊಂದೆಡೆ, ತಮ್ಮ ಮೇಲಿನ ಎಲ್ಲ ಆರೋಪಗಳನ್ನು ತೀವ್ರವಾಗಿ ನಿರಾಕರಿಸಿರುವ ನ್ಯಾಯಮೂರ್ತಿ ಸಂಜೀವ್ ಪ್ರಕಾಶ್ ಶರ್ಮಾ, “ನನ್ನ ಮೇಲಿನ ಆರೋಪಗಳು ಸಂಪೂರ್ಣ ಆಧಾರರಹಿತ. ವೈಯಕ್ತಿಕ ದ್ವೇಷದಿಂದ ಈ ಆರೋಪಗಳನ್ನು ಮಾಡಲಾಗಿದೆ. ನಾನು ಈಗಾಗಲೇ ಸಿಜೆಐ ಅವರಿಗೆ ಸಾಕ್ಷ್ಯಾಧಾರಗಳೊಂದಿಗೆ ಸೂಕ್ತ ಸ್ಪಷ್ಟನೆ ನೀಡಿದ್ದೇನೆ,” ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾಖಲೆಯ ರನ್ ಬೆನ್ನತ್ತಿದ ಭಾರತಕ್ಕೆ ಜಯ: ನ್ಯೂಜಿಲೆಂಡ್ ವಿರುದ್ಧ ಮಿಂಚಿದ ಸಂಜು ಸ್ಯಾಮ್ಸನ್

ನ್ಯೂಜಿಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಕ್ರೈಸ್ಟ್‌ಚರ್ಚ್‌ನ ಹ್ಯಾಗ್ಲಿ ಓವಲ್ ಮೈದಾನದಲ್ಲಿ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು ಇಳಿಕೆ: ಯಾವೆಲ್ಲ ಔಷಧಿ ಅಗ್ಗ? ಪಡೆಯುವ ವಿಧಾನ ಹೇಗೆ?

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ...

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...