ಕಳೆದ ವರ್ಷ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೀಲ್ಡಾ ನ್ಯಾಯಾಲಯವು ಆರೋಪಿ ಸಂಜಯ್ ರಾಯ್ ತಪ್ಪಿತಸ್ಥನೆಂದು ಘೋಷಿಸಿದೆ.
ಕಳೆದ ವರ್ಷ ಆಗಸ್ಟ್ 9ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಿನಾರ್ ಕೊಠಡಿಯಲ್ಲಿ ವೈದ್ಯೆಯ ಶವ ಪತ್ತೆಯಾಗಿತ್ತು. ತನಿಖೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ನಡೆದಿರುವುದು ತಿಳಿದುಬಂದಿತ್ತು. ಈ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಿದೆ.
ಇದನ್ನು ಓದಿದ್ದೀರಾ? ಆರ್‌ಜಿ ಕರ್ ಪ್ರತಿಭಟನೆ | ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಆದೇಶ
ನಗರ ಪೊಲೀಸ್‌ನಲ್ಲಿ ನಾಗರಿಕ ಸ್ವಯಂಸೇವಕರಾಗಿರುವ ಸಂಜಯ್ ರಾಯ್ ಮೇಲೆ ಅತ್ಯಾಚಾರ ಮತ್ತು ಕೊಲೆ ಆರೋಪ ಕೇಳಿಬಂದಿತ್ತು. ಈ ಘಟನೆಗೆ ಕೋಲ್ಕತ್ತಾದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ದೇಶದಾದ್ಯಂತ ವೈದ್ಯರು, ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿತ್ತು.
ಕೋಲ್ಕತ್ತಾ ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತ್ತು. ಸಿಬಿಐ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಆರ್ಥಿಕ ಅಕ್ರಮಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿತ್ತು. ಆರೋಪಪಟ್ಟಿಯಲ್ಲಿ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್, ಡಾ. ಆಶಿಶ್ ಕುಮಾರ್ ಪಾಂಡೆ, ವಿಪ್ಲಬ್ ಸಿಂಘಾ, ಸುಮನ್ ಹಜ್ರಾ ಮತ್ತು ಅಫ್ಸರ್ ಅಲಿ ಖಾನ್ ಸೇರಿದಂತೆ ಹಲವು ಮಂದಿಯ ಹೆಸರುಗಳು ಉಲ್ಲೇಖಿಸಲಾಗಿತ್ತು.
ಇದನ್ನು ಓದಿದ್ದೀರಾ? ಕೋಲ್ಕತ್ತಾ ಆರ್‌ಜಿ ಕರ್ ಕಾಲೇಜಿನ ಮಾಜಿ ಪ್ರಾಂಶುಪಾಲರ ಮನೆ ಮೇಲೆ ಇಡಿ ದಾಳಿ
ಇನ್ನು ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸಿದ ಸಿಬಿಐ ಸಂಜಯ್ ರಾವ್ ಅವರನ್ನು ಆರೋಪಿ ಎಂದು ಹೇಳಿತ್ತು. ಹಾಗೆಯೇ ಸಿಬಿಐ ಸಂಜಯ್ ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಸಂಜಯ್ ರಾವ್ ಅನ್ನು ತಪ್ಪಿತಸ್ಥ ಎಂದು ಘೋಷಿಸಿದೆ. ಹಾಗೆಯೇ ಜನವರಿ 20ರಂದು ಶಿಕ್ಷೆ ಘೋಷಿಸಲಿದೆ.
