ಆರ್‌ಜಿ ಕರ್ ಅತ್ಯಾಚಾರ- ಕೊಲೆ ಪ್ರಕರಣ | ಆರೋಪಿ ಸಂಜಯ್ ರಾಯ್ ತಪಿತಸ್ಥ; ಕೋರ್ಟ್ ಘೋಷಣೆ

Date:

ಕಳೆದ ವರ್ಷ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ವೈದ್ಯೆಯ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸೀಲ್ಡಾ ನ್ಯಾಯಾಲಯವು ಆರೋಪಿ ಸಂಜಯ್ ರಾಯ್ ತಪ್ಪಿತಸ್ಥನೆಂದು ಘೋಷಿಸಿದೆ.

- Advertisement -

ಕಳೆದ ವರ್ಷ ಆಗಸ್ಟ್‌ 9ರಂದು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಿನಾರ್ ಕೊಠಡಿಯಲ್ಲಿ ವೈದ್ಯೆಯ ಶವ ಪತ್ತೆಯಾಗಿತ್ತು. ತನಿಖೆಯಲ್ಲಿ ವೈದ್ಯೆಯ ಮೇಲೆ ಅತ್ಯಾಚಾರ ನಡೆದಿರುವುದು ತಿಳಿದುಬಂದಿತ್ತು. ಈ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ) ತನಿಖೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಆರ್‌ಜಿ ಕರ್ ಪ್ರತಿಭಟನೆ | ಪೊಲೀಸ್ ಕಸ್ಟಡಿಯಲ್ಲಿ ಚಿತ್ರಹಿಂಸೆ ಪ್ರಕರಣ; ಎಸ್‌ಐಟಿ ತನಿಖೆಗೆ ಆದೇಶ

ನಗರ ಪೊಲೀಸ್‌ನಲ್ಲಿ ನಾಗರಿಕ ಸ್ವಯಂಸೇವಕರಾಗಿರುವ ಸಂಜಯ್ ರಾಯ್ ಮೇಲೆ ಅತ್ಯಾಚಾರ ಮತ್ತು ಕೊಲೆ ಆರೋಪ ಕೇಳಿಬಂದಿತ್ತು. ಈ ಘಟನೆಗೆ ಕೋಲ್ಕತ್ತಾದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ದೇಶದಾದ್ಯಂತ ವೈದ್ಯರು, ಪ್ರಗತಿಪರ ಸಂಘಟನೆಗಳು ಪ್ರತಿಭಟನೆ ನಡೆಸಿತ್ತು.

ಕೋಲ್ಕತ್ತಾ ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿತ್ತು. ಸಿಬಿಐ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿನ ಆರ್ಥಿಕ ಅಕ್ರಮಗಳ ಚಾರ್ಜ್‌ಶೀಟ್ ಅನ್ನು ಸಲ್ಲಿಸಿತ್ತು. ಆರೋಪಪಟ್ಟಿಯಲ್ಲಿ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್, ಡಾ. ಆಶಿಶ್ ಕುಮಾರ್ ಪಾಂಡೆ, ವಿಪ್ಲಬ್ ಸಿಂಘಾ, ಸುಮನ್ ಹಜ್ರಾ ಮತ್ತು ಅಫ್ಸರ್ ಅಲಿ ಖಾನ್ ಸೇರಿದಂತೆ ಹಲವು ಮಂದಿಯ ಹೆಸರುಗಳು ಉಲ್ಲೇಖಿಸಲಾಗಿತ್ತು.

ಇದನ್ನು ಓದಿದ್ದೀರಾ? ಕೋಲ್ಕತ್ತಾ ಆರ್‌ಜಿ ಕರ್ ಕಾಲೇಜಿನ ಮಾಜಿ ಪ್ರಾಂಶುಪಾಲರ ಮನೆ ಮೇಲೆ ಇಡಿ ದಾಳಿ

ಇನ್ನು ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ತನಿಖೆ ನಡೆಸಿದ ಸಿಬಿಐ ಸಂಜಯ್ ರಾವ್ ಅವರನ್ನು ಆರೋಪಿ ಎಂದು ಹೇಳಿತ್ತು. ಹಾಗೆಯೇ ಸಿಬಿಐ ಸಂಜಯ್ ರಾಯ್‌ಗೆ ಮರಣದಂಡನೆ ವಿಧಿಸುವಂತೆ ಕೋರಿತು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್ ಸಂಜಯ್ ರಾವ್ ಅನ್ನು ತಪ್ಪಿತಸ್ಥ ಎಂದು ಘೋಷಿಸಿದೆ. ಹಾಗೆಯೇ ಜನವರಿ 20ರಂದು ಶಿಕ್ಷೆ ಘೋಷಿಸಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...