ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ಭಾರತೀಯ ಸ್ಟೇಟ್ ಬ್ಯಾಂಕ್ (ಎಸ್‌ಬಿಐ) ಆಲ್ಫಾನ್ಯೂಮರಿಕ್ ಸಂಖ್ಯೆ ಒಳಗೊಂಡ ಚುನಾವಣಾ ಬಾಂಡ್‌ಗಳ ಎಲ್ಲ ವಿವರಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. ಈ ಬಗ್ಗೆ ಕೂರ್ಟ್‌ಗೂ ಮಾಹಿತಿ ನೀಡಿದೆ.
ಎಸ್‌ಬಿಐ ನ ಅಧ್ಯಕ್ಷರಾದ ದಿನೇಶ್ ಕುಮಾರ್ ಖೇರಾ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗಕ್ಕೆ ತನ್ನ ಸ್ವಾಧೀನ ಪಡಿಸುಕೊಳ್ಳುವುದಕ್ಕಾಗಿ ಚುನಾವಣಾ ಬಾಂಡ್‌ಗಳ ಎಲ್ಲ ವಿವರಗಳನ್ನು ಬಹಿರಂಗಪಡಿಸಿರುವುದಾಗಿ ತಿಳಿಸಿದ್ದಾರೆ.
ಆದಾಗ್ಯೂ, ಖಾತೆಯ ಭದ್ರತೆಯ ದೃಷ್ಟಿಯಿಂದ ರಾಜಕೀಯ ಪಕ್ಷಗಳ ಕೆವೈಸಿ ವಿವರಗಳು ಹಾಗೂ ಪೂರ್ಣ ಬ್ಯಾಂಕ್ ಖಾತೆ ಸಂಖ್ಯೆಗಳನ್ನು ಸಾರ್ವಜನಿಕಗೊಳಿಸಲಾಗುತ್ತಿಲ್ಲ. ಹಾಗೆಯೇ ಭದ್ರತಾ ಕಾರಣಗಳಿಂದ ಖರೀದಿದಾರರ ಕೆವೈಸಿ ವಿವರಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ. ಆದರೆ ರಾಜಕೀಯ ಪಕ್ಷಗಳನ್ನು ಗುರುತಿಸಲು ಇವುಗಳು ಅಗತ್ಯವಿಲ್ಲ ಎಂದು ಎಸ್‌ಬಿಐ ತಿಳಿಸಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು
ಚುನಾವಣಾ ಬಾಂಡ್‌ಗಳನ್ನು 2018ರಲ್ಲಿ ಪರಿಚಯಿಸಿದ ನಂತರ ಬಾಂಡ್ ಖರೀದಿದಾರರ ಹೆಸರು, ಹಣ, ಬಾಂಡ್‌ನ ನಿರ್ದಿಷ್ಟ ಸಂಖ್ಯೆ, ಪಕ್ಷದ ಹೆಸರು, ಬಾಂಡ್‌ನ ನಗದೀಕರಣ, ರಾಜಕೀಯ ಪಕ್ಷಗಳ ಬ್ಯಾಂಕ್ ಖಾತೆಯ ಕೊನೆಯ ನಾಲ್ಕು ಸಂಖ್ಯೆಗಳು ಹಾಗೂ ಹಣ ಹಾಗೂ ಬಾಂಡ್ ನಗದೀಕರಣ ಸಂಖ್ಯೆಯ ಮಾಹಿತಿಯನ್ನು ಎಸ್‌ಬಿಐ ಈಗ ಬಹಿರಂಗಗೊಳಿಸಿದೆ.
ಸುಪ್ರೀಂ ಕೋರ್ಟ್ ಆದೇಶದಂತೆ ಕೆವೈಸಿ ವಿವರಗಳನ್ನು ಹೊರತುಪಡಿಸಿ ಎಸ್‌ಬಿಐ ಎಲ್ಲ ವಿವರಗಳನ್ನು ಬಹಿರಂಗಗೊಳಿಸಿರುವುದಾಗಿ ಅಫಿಡವಿಡ್ ಸಲ್ಲಿಸಿದೆ.
ಚುನಾವಣಾ ಬಾಂಡ್‌ಗಳು ಅಸಂವಿಧಾನಿಕ,ಆಲ್ಫಾನ್ಯೂಮರಿಕ್ ಸಂಖ್ಯೆಗಳನ್ನು ಒಳಗೊಂಡ ಎಲ್ಲ ವಿವರಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ಗೆ ಅಪ್‌ಲೋಡ್ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಫೆ.15, 2024ರ ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿತ್ತು.