ಸುಪ್ರೀಂ ಕೋರ್ಟ್ ಛೀಮಾರಿ ನಂತರ ಚುನಾವಣಾ ಬಾಂಡ್‌ಗಳ ಎಲ್ಲ ಮಾಹಿತಿ ಸಲ್ಲಿಸಿದ ಎಸ್‌ಬಿಐ

Date:

ಸುಪ್ರೀಂ ಕೋರ್ಟ್ ಛೀಮಾರಿ ಹಾಕಿದ ನಂತರ ಭಾರತೀಯ ಸ್ಟೇಟ್‌ ಬ್ಯಾಂಕ್‌ (ಎಸ್‌ಬಿಐ) ಆಲ್ಫಾನ್ಯೂಮರಿಕ್‌ ಸಂಖ್ಯೆ ಒಳಗೊಂಡ ಚುನಾವಣಾ ಬಾಂಡ್‌ಗಳ ಎಲ್ಲ ವಿವರಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಮಾಡಿದೆ. ಈ ಬಗ್ಗೆ ಕೂರ್ಟ್‌ಗೂ ಮಾಹಿತಿ ನೀಡಿದೆ.

- Advertisement -

ಎಸ್‌ಬಿಐ ನ ಅಧ್ಯಕ್ಷರಾದ ದಿನೇಶ್ ಕುಮಾರ್‌ ಖೇರಾ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗಕ್ಕೆ ತನ್ನ ಸ್ವಾಧೀನ ಪಡಿಸುಕೊಳ್ಳುವುದಕ್ಕಾಗಿ ಚುನಾವಣಾ ಬಾಂಡ್‌ಗಳ ಎಲ್ಲ ವಿವರಗಳನ್ನು ಬಹಿರಂಗಪಡಿಸಿರುವುದಾಗಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆದಾಗ್ಯೂ, ಖಾತೆಯ ಭದ್ರತೆಯ ದೃಷ್ಟಿಯಿಂದ ರಾಜಕೀಯ ಪಕ್ಷಗಳ ಕೆವೈಸಿ ವಿವರಗಳು ಹಾಗೂ ಪೂರ್ಣ ಬ್ಯಾಂಕ್‌ ಖಾತೆ ಸಂಖ್ಯೆಗಳನ್ನು ಸಾರ್ವಜನಿಕಗೊಳಿಸಲಾಗುತ್ತಿಲ್ಲ. ಹಾಗೆಯೇ ಭದ್ರತಾ ಕಾರಣಗಳಿಂದ ಖರೀದಿದಾರರ ಕೆವೈಸಿ ವಿವರಗಳನ್ನು ಸಾರ್ವಜನಿಕಗೊಳಿಸುತ್ತಿಲ್ಲ. ಆದರೆ ರಾಜಕೀಯ ಪಕ್ಷಗಳನ್ನು ಗುರುತಿಸಲು ಇವುಗಳು ಅಗತ್ಯವಿಲ್ಲ ಎಂದು ಎಸ್‌ಬಿಐ ತಿಳಿಸಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಎಲ್ಲೆಲ್ಲೂ ಪುರುಷರದೇ ಪಾರುಪತ್ಯ; ಮಹಿಳಾ ಪ್ರಾತಿನಿಧ್ಯ ಕನ್ನಡಿಯೊಳಗಿನ ಗಂಟು

ಚುನಾವಣಾ ಬಾಂಡ್‌ಗಳನ್ನು 2018ರಲ್ಲಿ ಪರಿಚಯಿಸಿದ ನಂತರ ಬಾಂಡ್‌ ಖರೀದಿದಾರರ ಹೆಸರು, ಹಣ, ಬಾಂಡ್‌ನ ನಿರ್ದಿಷ್ಟ ಸಂಖ್ಯೆ, ಪಕ್ಷದ ಹೆಸರು, ಬಾಂಡ್‌ನ ನಗದೀಕರಣ, ರಾಜಕೀಯ ಪಕ್ಷಗಳ ಬ್ಯಾಂಕ್‌ ಖಾತೆಯ ಕೊನೆಯ ನಾಲ್ಕು ಸಂಖ್ಯೆಗಳು ಹಾಗೂ ಹಣ ಹಾಗೂ ಬಾಂಡ್ ನಗದೀಕರಣ ಸಂಖ್ಯೆಯ ಮಾಹಿತಿಯನ್ನು ಎಸ್‌ಬಿಐ ಈಗ ಬಹಿರಂಗಗೊಳಿಸಿದೆ.

ಸುಪ್ರೀಂ ಕೋರ್ಟ್‌ ಆದೇಶದಂತೆ ಕೆವೈಸಿ ವಿವರಗಳನ್ನು ಹೊರತುಪಡಿಸಿ ಎಸ್‌ಬಿಐ ಎಲ್ಲ ವಿವರಗಳನ್ನು ಬಹಿರಂಗಗೊಳಿಸಿರುವುದಾಗಿ ಅಫಿಡವಿಡ್‌ ಸಲ್ಲಿಸಿದೆ.

ಚುನಾವಣಾ ಬಾಂಡ್‌ಗಳು ಅಸಂವಿಧಾನಿಕ,ಆಲ್ಫಾನ್ಯೂಮರಿಕ್‌ ಸಂಖ್ಯೆಗಳನ್ನು ಒಳಗೊಂಡ ಎಲ್ಲ ವಿವರಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಫೆ.15, 2024ರ ತೀರ್ಪಿನಲ್ಲಿ ಸ್ಪಷ್ಟವಾಗಿ ಹೇಳಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

‘ಇವು ಕೇವಲ ಉಪಚುನಾವಣೆಗಳು’: ನಂದಿಗ್ರಾಮ, ರೆಜಿನಗರ ‘ಎಸ್‌ಐಆರ್’ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ನಕಾರ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ಕ್ಷೇತ್ರಗಳ ಉಪಚುನಾವಣೆಗೂ ಮುನ್ನ ‘ವಿಶೇಷ...