ಮಾನನಷ್ಟ ಮೊಕದ್ದಮೆ | ಸಾವರ್ಕರ್ ಮೊಮ್ಮಗನ ತಾಯಿಯ ವಂಶಾವಳಿ ಮಾಹಿತಿ ಕೋರಿದ್ದ ರಾಹುಲ್ ಅರ್ಜಿ ವಜಾ

Date:

ಹಿಂದುತ್ವವಾದಿ ವಿನಾಯಕ್ ದಾಮೋದರ್ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಅವರ ತಾಯಿಯ ವಂಶಾವಳಿಯ ಬಗ್ಗೆ ಮಾಹಿತಿ ಕೋರಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಪುಣೆ ನ್ಯಾಯಾಲಯ ವಜಾಗೊಳಿಸಿದೆ.

- Advertisement -

ಸಾವರ್ಕರ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಸಾವರ್ಕರ್ ಮೊಮ್ಮಗನ ತಾಯಿಯ ವಂಶಾವಳಿಯ ಬಗ್ಗೆ ಮಾಹಿತಿ ಕೋರಿ ರಾಹುಲ್ ಗಾಂಧಿ ಅರ್ಜಿ ಸಲ್ಲಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಇದನ್ನು ಓದಿದ್ದೀರಾ? ರಾಹುಲ್ ಗಾಂಧಿ ಸಂಸತ್ತಿನಿಂದ ಅನರ್ಹ | ಹತ್ತು ಗಂಭೀರ ಪ್ರಶ್ನೆಗಳು

2023ರಲ್ಲಿ ಲಂಡನ್‌ನಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ ಸಾವರ್ಕರ್ ಅವರ ಬರಹಗಳಲ್ಲಿ ಉಲ್ಲೇಖಿಸಲಾಗಿದ್ದ ಘಟನೆಗಳನ್ನು ಪ್ರಸ್ತಾಪಿಸಿದ್ದರು. ಸಾವರ್ಕರ್ ತಮ್ಮ ಪತ್ರವೊಂದರಲ್ಲಿ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸುವುದು ತಮಗೆ ಆನಂದವನ್ನುಂಟು ಮಾಡುತ್ತದೆ ಎಂದು ಬರೆದಿದ್ದರು ಎಂದು ರಾಹುಲ್ ಹೇಳಿದ್ದರು.

ಆದರೆ ಲಂಡನ್‌ನಲ್ಲಿ ರಾಹುಲ್ ಗಾಂಧಿ, ಸಾವರ್ಕರ್ ವಿರುದ್ಧ ಮಾನಹಾನಿಕಾರಕ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಾವರ್ಕರ್ ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಮಾನಹಾನಿ ಮೊಕದ್ದಮೆ ಹೂಡಿದ್ದಾರೆ. ಅಂತಹ ಯಾವುದೇ ವಾಕ್ಯ ವೃಂದವೂ ಸಾವರ್ಕರ್ ಅವರ ಬರಹಗಳಲ್ಲಿಲ್ಲ ಎಂದು ಪ್ರತಿಪಾದಿಸಿದ್ದಾರೆ. ಜೊತೆಗೆ ಮಾನಹಾನಿ ಪರಿಹಾರ ಕೋರಿದ್ದಾರೆ.

ಈ ಬಳಿಕ ರಾಹುಲ್ ಗಾಂಧಿ ದೂರು ಸಲ್ಲಿಸಿದ್ದು ಸಾವರ್ಕರ್ ಮೊಮ್ಮಗನ ತಾಯಿಯ ವಂಶಾವಳಿಯ ಬಗ್ಗೆ ಮಾಹಿತಿ ಕೋರಿದ್ದಾರೆ. ತಮ್ಮ ವಕೀಲ ಮಿಲಿಂದ್ ಪವಾರ್ ಮೂಲಕ ದೂರು ಸಲ್ಲಿಸಿರುವ ರಾಹುಲ್ ಗಾಂಧಿ, “ದೂರುದಾರರು(ಸತ್ಯಕಿ ಸಾವರ್ಕರ್) ತಮ್ಮ ತಂದೆಯ ವಂಶಾವಳಿಯ ವಿವರಗಳನ್ನು ನೀಡಿದ್ದರೂ, ಅವರ ತಾಯಿಯ ವಂಶಾವಳಿಯನ್ನು ಬಹಿರಂಗಪಡಿಸಿಲ್ಲ” ಎಂದು ಹೇಳಿದ್ದರು. ವಿಚಾರಣೆಗೆ ಈ ಮಾಹಿತಿ ನಿರ್ಣಾಯಕವಾಗಿದೆ ಎಂದು ವಾದಿಸಿದ್ದರು.

ಆದರೆ ಈ ಪ್ರಕರಣ ಸತ್ಯಕಿ ಸಾವರ್ಕರ್ ಅವರ ತಾಯಿ ದಿವಂಗತ ಹಿಮಾನಿ ಅಶೋಕ್ ಸಾವರ್ಕರ್ ಅವರ ವಂಶಾವಳಿಗೆ ಸಂಬಂಧಿಸಿದ್ದಲ್ಲ ಎಂದು ಹೇಳಿದ ಮ್ಯಾಜಿಸ್ಟ್ರೇಟ್(ಪ್ರಥಮ ದರ್ಜೆ) ಅಮೋಲ್ ಶಿಂಧೆ ಅರ್ಜಿಯನ್ನು ವಜಾಗೊಳಿಸಿದ್ದಾರೆ. ಹಿಮಾನಿ ಸಾವರ್ಕರ್ ಅವರು ಮಹಾತ್ಮ ಗಾಂಧಿಯವರ ಹಂತಕ ನಾಥುರಾಮ್ ಗೋಡ್ಸೆ ಅವರ ಕಿರಿಯ ಸಹೋದರ ಗೋಪಾಲ್ ವಿನಾಯಕ ಗೋಡ್ಸೆ ಅವರ ಪುತ್ರಿ.

ಇದನ್ನು ಓದಿದ್ದೀರಾ? ಸಾವರ್ಕರ್‌ ಹೆಸರಿನ ದುರ್ಬಳಕೆ: ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

“ಈ ಪ್ರಕರಣವು ದಿವಂಗತ ಹಿಮಾನಿ ಅಶೋಕ್ ಸಾವರ್ಕರ್ ಅವರ ವಂಶವೃಕ್ಷಕ್ಕೆ ಸಂಬಂಧಿಸಿಲ್ಲ ಅಥವಾ ವಿವಾದಾತ್ಮಕವಾಗಿಲ್ಲ. ಆದ್ದರಿಂದ, ಆರೋಪಿಗಳ ಅರ್ಜಿಯು ಅರ್ಹವಾಗಿಲ್ಲ. ಈ ಬಗ್ಗೆ ಅಧಿಕ ತನಿಖೆಯ ಅಗತ್ಯವಿಲ್ಲ” ಎಂದು ನ್ಯಾಯಾಲಯವು ತನ್ನ ಆದೇಶದಲ್ಲಿ ತಿಳಿಸಿದೆ.

ಜಾಮೀನು ರದ್ದು ಕೋರಿದ್ದ ಸತ್ಯಕಿ ಅರ್ಜಿಯೂ ವಜಾ

ಈ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಸತ್ಯಕಿ ಸಾವರ್ಕರ್ ಸಲ್ಲಿಸಿದ್ದ ಅರ್ಜಿಯನ್ನೂ ನ್ಯಾಯಾಲಯ ತಿರಸ್ಕರಿಸಿದೆ. ಒಂದಲ್ಲ ಒಂದು ನೆಪದಲ್ಲಿ ಈ ಪ್ರಕರಣ ವಿಳಂಬವಾಗುವಂತೆ ರಾಹುಲ್ ಮಾಡುತ್ತಿದ್ದಾರೆ ಎಂದು ಸತ್ಯಕಿ ಆರೋಪಿಸಿದ್ದಾರೆ.

ರಾಹುಲ್ ಅವರು ನೀಡಿದ ಅರ್ಜಿ ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಆದರೆ ಒಂದಲ್ಲ ಒಂದು ನೆಪ ಹೇಳಿ ತಮ್ಮ ಅರ್ಜಿಯನ್ನು ದಾಖಲಿಸುತ್ತಿಲ್ಲ ಮತ್ತು ವಿಳಂಬ ತಂತ್ರಗಳನ್ನು ಅನುಸರಿಸುತ್ತಿದ್ದಾರೆ ಎಂದು ಸತ್ಯಕಿ ಸಾವರ್ಕರ್ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ವೈಯಕ್ತಿಕ ಹಾಜರಾತಿಯಿಂದ ಶಾಶ್ವತ ವಿನಾಯಿತಿ ನೀಡಿ ರಾಹುಲ್ ಗಾಂಧಿಯವರಿಗೆ ಜಾಮೀನು ನೀಡಲಾಗಿದೆ. ಅವರು ಉದ್ದೇಶಪೂರ್ವಕವಾಗಿ ವಿಚಾರಣೆಯನ್ನು ವಿಳಂಬ ಮಾಡುತ್ತಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೇಳಿರುವ ನ್ಯಾಯಾಧೀಶರು ಜಾಮೀನು ರದ್ದು ಕೋರಿದ ಅರ್ಜಿಯನ್ನೂ ವಜಾಗೊಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

22 ನಿಮಿಷದ ಜಾಹೀರಾತು, 75 ಸಾವಿರ ದಂಡ! ಸಿನಿಪ್ಲೆಕ್ಸ್‌ ಕಿವಿಹಿಂಡಿದ ಗ್ರಾಹಕ ವೇದಿಕೆ

ಸಿನಿಮಾ ಶುರುವಾಗುವ ಮುನ್ನ 22 ನಿಮಿಷಗಳ ಕಾಲ ವಾಣಿಜ್ಯ ಜಾಹೀರಾತುಗಳು ಮತ್ತು...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

ಅಕ್ಟೋಬರ್ 8ರೊಳಗೆ ಪಶ್ಚಿಮ ಬಂಗಾಳ ಶಾಸಕರ ಅನರ್ಹತೆ ಅರ್ಜಿಗಳ ವಿಲೇವಾರಿಗೆ ಸ್ಪೀಕರ್​ಗೆ ಸುಪ್ರೀಂ ಸೂಚನೆ

ಪಕ್ಷಾಂತರ ನಿಷೇಧ ಕಾಯ್ದೆ ಹಾಗೂ ಸಂವಿಧಾನದ ಹತ್ತನೇ ಶೆಡ್ಯೂಲ್‌ನ ಅಡಿಯಲ್ಲಿ, ರಿತಬ್ರತಾ...