ರಾಜಿ ಮಾಡಿಸಲು ನೀವು ಮಧ್ಯವರ್ತಿಗಳಲ್ಲ: ಮಹಿಳಾ ಪೊಲೀಸ್ ಠಾಣೆಗಳ ವಿರುದ್ಧ ಮದ್ರಾಸ್ ಹೈಕೋರ್ಟ್ ತರಾಟೆ

Date:

ವರದಕ್ಷಿಣೆ ಕಿರುಕುಳದ ದೂರಿಗೆ ಸಂಬಂಧಿಸಿದಂತೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವ ಬದಲು, ಖಾಸಗಿಯಾಗಿ ರಾಜಿ ಮಾಡಿಕೊಳ್ಳುವಂತೆ ವಧುವಿನ ತಂದೆಯ ಮೇಲೆ ಒತ್ತಡ ಹೇರಿದ ಮಹಿಳಾ ಪೊಲೀಸ್ ಠಾಣೆಯ ನಡೆಯನ್ನು ಮದ್ರಾಸ್ ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.

- Advertisement -

ಅಲ್ಲದೆ, ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ತಲಾ 1 ಲಕ್ಷ ರೂಪಾಯಿ ಠೇವಣಿ ಇಡುವಂತೆ ಮತ್ತು ಜುಲೈ 14ರಂದು ನ್ಯಾಯಾಲಯದ ಮುಂದೆ ಹಾಜರಾಗಿ ವಿವರಣೆ ನೀಡುವಂತೆ ಆದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನೂ ಓದಿ: ಮಾನನಷ್ಟ ಪ್ರಕರಣ: 10 ಲಕ್ಷ ರೂ. ಠೇವಣಿಯಿಡಲು ಕ್ರಿಕೆಟಿಗ ಧೋನಿಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಅರ್ಜಿದಾರರ ಪರ ವಕೀಲರಾದ ವನಿಶ್ ಮತ್ತು ಎಸ್. ಕಿಶೋರ್ ಕುಮಾರ್ ಅವರು ನ್ಯಾಯಾಲಯಕ್ಕೆ ಸಲ್ಲಿಸಿದ ವಿವರಗಳ ಪ್ರಕಾರ, ವಧುವಿನ ತಂದೆ ವರ್ಷಗಟ್ಟಲೆ ಶ್ರಮಪಟ್ಟು ಹಣ ಉಳಿಸಿ ಮಗಳ ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದರು. ಮದುವೆಯನ್ನು ಜೂನ್ 8ಕ್ಕೆ ನಿಗದಿಪಡಿಸಲಾಗಿತ್ತು. ಆದರೆ, ಮದುವೆಗೆ ಮುಂಚಿತವಾಗಿ ವರನ ಕಡೆಯವರು ಹೆಚ್ಚುವರಿ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದಾರೆ. ವಧುವಿನ ತಂದೆ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದಾಗ ವರನ ಕುಟುಂಬಸ್ಥರು ಏಕಪಕ್ಷೀಯವಾಗಿ ಮದುವೆಯನ್ನು ರದ್ದುಗೊಳಿಸಿದ್ದರು.

ಈ ಹಿನ್ನೆಲೆಯಲ್ಲಿ ವಧುವಿನ ತಂದೆ ಕಾನೂನು ಕ್ರಮಕ್ಕೆ ಮುಂದಾಗಿದ್ದರು. ಆದರೆ ಪೊಲೀಸರು ಪ್ರಕರಣ ದಾಖಲಿಸುವ ಬದಲು, ಖಾಸಗಿ ರಾಜಿ ಸಂಧಾನ ಮಾಡಿಕೊಳ್ಳಲು ಹೇಳಿದ್ದರು. ವರದಕ್ಷಿಣೆ ಹಣದ ಪೈಕಿ ಕೇವಲ 5,00,000 ರೂಪಾಯಿಗಳನ್ನು ಮಾತ್ರ ಮರುಪಾವತಿ ಪಡೆಯುವಂತೆ ವಧುವಿನ ತಂದೆಯನ್ನು ಒಪ್ಪಿಸಿ, ಬಾಕಿ ಹಣಕ್ಕೆ ಇನ್ನೊಂದು ತಿಂಗಳು ಕಾಯುವಂತೆ ಸೂಚಿಸಿ ಪ್ರಕರಣವನ್ನು ಮುಚ್ಚಿಹಾಕಿದ್ದಾರೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.

ಈ ಅರ್ಜಿ ವಿಚಾರಣೆ ನಡೆಸಿದ ಮದ್ರಾಸ್ ಹೈಕೋರ್ಟ್‌ನ ಜಸ್ಟಿಸ್ ಎಲ್. ವಿಕ್ಟೋರಿಯಾ ಗೌರಿ, “ಅನೌಪಚಾರಿಕ ರಾಜಿಗಳ ಮೂಲಕ ಅಪರಾಧವನ್ನು ಬದಿಗೊತ್ತಲು ಪೊಲೀಸರಿಗೆ ಸಾಧ್ಯವಿಲ್ಲ. ಮಹಿಳೆಯರನ್ನು ರಕ್ಷಿಸಲು ಸ್ಥಾಪಿಸಲಾದ ಸಂಸ್ಥೆಗಳು ಕಾನೂನುಬದ್ಧ ಜವಾಬ್ದಾರಿಗಳನ್ನು ನಿಭಾಯಿಸಲು ವಿಫಲವಾಗುತ್ತಿರುವುದು ವಿಪರ್ಯಾಸ,” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಹಾಗೆಯೇ “ಕೆಲವು ಮಹಿಳಾ ಪೊಲೀಸ್ ಠಾಣೆಗಳು ಮಹಿಳೆಯರಲ್ಲಿ ವಿಶ್ವಾಸ ಮೂಡಿಸುವ ಬದಲು, ಕ್ರಿಮಿನಲ್ ಕಾನೂನಿನ ಕಡ್ಡಾಯ ನಿಯಮಗಳನ್ನು ಬದಿಗಿಟ್ಟು ಅನೌಪಚಾರಿಕ ರಾಜಿ ಸಂಧಾನದ ವೇದಿಕೆಗಳಾಗಿ ಬದಲಾಗುತ್ತಿರುವುದು ಅತ್ಯಂತ ಆತಂಕಕಾರಿ ಸಂಗತಿಯಾಗಿದೆ,” ಎಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಲೈಂಗಿಕ ಕಿರುಕುಳ ಆರೋಪ; ಪ್ರಾಧ್ಯಾಪಕ ಹುದ್ದೆಯಿಂದ ಕಾಂಗ್ರೆಸ್ ಸಂಸದ ಬಿಮೋಲ್ ವಜಾ

11 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಹಾಗೂ ಅನುಚಿತ ವರ್ತನೆಯ ಆರೋಪದಡಿ ದೂರು...

ಬೀದರ್‌ | ಕಾನ್ಶಿರಾಂ ಹೋರಾಟ ಬಹುಜನರ ರಾಜಕೀಯ ಜಾಗೃತಿಗೆ ದಾರಿದೀಪ

ಬೀದರ್ ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ವಿವಿಧ ಬಹುಜನ ಸಂಘಟನೆಗಳ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...