ಪತಿ ಶ್ರೀಮಂತ: ವಿಚ್ಛೇದನ ಪರಿಹಾರವನ್ನು 5 ಲಕ್ಷದಿಂದ 1 ಕೋಟಿ ರೂ.ಗೆ ಏರಿಸಿದ ಕೋರ್ಟ್

Date:

ಕೌಟುಂಬಿಕ ದೌರ್ಜನ್ಯ ಪ್ರಕರಣದಲ್ಲಿ ವಿಚ್ಛೇದನ ಪಡೆಯುತ್ತಿರುವ ಮಹಿಳೆಗೆ ನೀಡಲಾಗುವ ಪರಿಹಾರ ಮೊತ್ತವನ್ನು ಮುಂಬೈನ ಸೆಷನ್ಸ್ ನ್ಯಾಯಾಲಯವು 5 ಲಕ್ಷ ರೂ.ಗಳಿಂದ 1 ಕೋಟಿ ರೂ.ಗಳಿಗೆ ಹೆಚ್ಚಿಸಿದೆ. ಹಾಗೆಯೇ ಆಕೆಯ ಪತಿ ಅತಿ ಶ್ರೀಮಂತ. ಲಿಫ್ಟ್ ಕಂಪನಿಯನ್ನು ನಡೆಸುತ್ತಿರುವ ಮಹಿಳೆಯ ಪತಿ ಮತ್ತು ಅವರ ಕುಟುಂಬವು ಕೋಟ್ಯಾಧಿಪತಿಗಳು ಎಂದು ಕೋರ್ಟ್ ಹೇಳಿದೆ.

- Advertisement -

ಈ ಪರಿಹಾರದ ಜೊತೆಗೆ ಮಹಿಳೆ ಮತ್ತು ಅವರ ಮಗಳಿಗೆ ನೀಡಲಾಗುವ ಮಾಸಿಕ ಜೀವನಾಂಶವನ್ನು ನ್ಯಾಯಾಲಯವು ಒಂದು ಲಕ್ಷ ರೂಪಾಯಿಯಿಂದ 1.5 ಲಕ್ಷ ರೂಪಾಯಿಗೆ ಹೆಚ್ಚಿಸಿದೆ. “ದೂರುದಾರರು ತನ್ನ ಪತಿಯೊಂದಿಗೆ ವಾಸಿಸುತ್ತಿದ್ದಾಗ ಎದುರಿಸಿದ ದೈಹಿಕ ಮತ್ತು ಮಾನಸಿಕ ಹಿಂಸೆಯನ್ನು ನಮಗೆ ಕಲ್ಪಿಸಿಕೊಳ್ಳಲೂ ಸಾಧ್ಯವಿಲ್ಲ” ಎಂದು ಕೋರ್ಟ್ ಈ ಸಂದರ್ಭದಲ್ಲೇ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ದುಡಿಯುವ ಸಾಮರ್ಥ್ಯವಿರುವ ಪತ್ನಿ ಹೆಚ್ಚಿನ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್‌

ಈ ತೀರ್ಪು ನೀಡಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ(ದಿಂಡೋಶಿ ನ್ಯಾಯಾಲಯ) ಎಸ್ ಜೆ ಅನ್ಸಾರಿ, ಮಹಿಳೆ 20 ವರ್ಷಗಳ ಕಾಲ ‘ಚಿತ್ರಹಿಂಸೆ ಮತ್ತು ಅವಮಾನ’ವನ್ನು ಸಹಿಸಿಕೊಂಡಿದ್ದರಿಂದ ಮ್ಯಾಜಿಸ್ಟ್ರೇಟ್ ನೀಡಿದ 5 ಲಕ್ಷ ರೂ.ಗಳ ಆರಂಭಿಕ ಪರಿಹಾರವು ಅಲ್ಪ ಎಂದು ತೀರ್ಪು ನೀಡಿದೆ.

41 ವರ್ಷದ ಸಂತ್ರಸ್ತೆ ಕೌಟುಂಬಿಕ ಹಿಂಸಾಚಾರದಿಂದ ಮಹಿಳೆಯರ ರಕ್ಷಣೆ ಕಾಯ್ದೆಯಡಿಯಲ್ಲಿ ಮ್ಯಾಜಿಸ್ಟ್ರೇಟ್ ಹೊರಡಿಸಿದ ಪರಿಹಾರ ಆದೇಶವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. 1997ರ ಡಿಸೆಂಬರ್‌ನಲ್ಲಿ ಮದುವೆಯಾದಾಗಿನಿಂದ ಪತಿ ಮತ್ತು ಅತ್ತೆ-ಮಾವರಿಂದ ದೈಹಿಕ, ಭಾವನಾತ್ಮಕ ಮತ್ತು ಆರ್ಥಿಕ ದೌರ್ಜನ್ಯವನ್ನು ತಾನು ಅನುಭವಿಸಿದ್ದೇನೆ. ಕೊನೆಗೆ ತಡೆಯಲಾಗದೆ ಕಾನೂನು ಮೊರೆ ಹೋಗಿದ್ದೇನೆ ಎಂದು ಮಹಿಳೆ ಹೇಳಿದ್ದಾರೆ.

ಇನ್ನು ಮಹಿಳೆ ಈ ಪರಿಹಾರದ ಮೊತ್ತ ಅತಿ ಕಡಿಮೆ ಎಂದು ಹೇಳಿದರೆ, ಆಕೆಯ ಪತಿಯ ಪರ ವಕೀಲರು ಪರಿಹಾರವನ್ನು ಪಡೆಯಲು ಮಹಿಳೆ ಅರ್ಹರಲ್ಲ ಎಂದು ವಾದಿಸಿದ್ದಾರೆ. ಮಕ್ಕಳ ಶೈಕ್ಷಣಿಕ, ಜೀವನದ ವೆಚ್ಚವನ್ನು ತಾನೇ ಭರಿಸುತ್ತೇನೆ. ಇದರಿಂದಾಗಿ ನನ್ನ ಬಳಿ ಏನೂ ಉಳಿಯದು ಎಂದು ಪತಿ ಹೇಳಿಕೊಂಡಿದ್ದಾನೆ.

ಆದರೆ ಕೋರ್ಟ್ ಆರೋಪಿ ವ್ಯಕ್ತಿ ಮತ್ತು ಆತನ ತಂದೆ 2012ರಲ್ಲಿ 1 ಕೋಟಿ ರೂ.ಗಿಂತ ಹೆಚ್ಚು ಮೌಲ್ಯದ ಭೂಮಿ ಮತ್ತು ಫ್ಲಾಟ್ ಖರೀದಿಸಿರುವುದನ್ನು ಗಮನಿಸಿದೆ. ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ ಎಂದು ಆರೋಪಿತ ವ್ಯಕ್ತಿ ಸಾಬೀತುಪಡಿಲು ಸಾಧ್ಯವಾಗಿಲ್ಲ. ಲಿಫ್ಟ್ ಕಂಪನಿಯಲ್ಲಿ ಉತ್ತಮ ಆದಾಯವಿದೆ. ಕೋಟ್ಯಾಧಿಪತಿಗಳಾಗಿರುವವರು ಐದು ಲಕ್ಷ ರೂಪಾಯಿ ಪರಿಹಾರ ನೀಡುವುದು ಅತಿ ಕಡಿಮೆ ಎಂದು ಕೋರ್ಟ್ ಹೇಳಿದ್ದು ಮೊತ್ತ ಏರಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...