ಜಾಮೀನು ಪಡೆದ ವ್ಯಕ್ತಿಯ ರಾಜಕೀಯ ಚಟುವಟಿಕೆಗಳನ್ನು ಕೋರ್ಟ್‌ಗಳು ತಡೆಯಬಾರದು: ಸುಪ್ರೀಂ ಕೋರ್ಟ್

Date:

ಜಾಮೀನು ನೀಡಿದ ವ್ಯಕ್ತಿಗೆ ರಾಜಕೀಯ ಚಟುವಟಿಕೆಗಳನ್ನು ಕೈಗೊಳ್ಳಬಾರದು ಎಂದು ಷರತ್ತು ವಿಧಿಸಿ ಒಡಿಶಾ ಹೈಕೋರ್ಟ್ ನೀಡಿದ ತೀರ್ಪನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಈ ರೀತಿಯ ಆದೇಶಗಳು ವ್ಯಕ್ತಿಯ ಮೂಲಭೂತ ಹಕ್ಕನ್ನು ಉಲ್ಲಂಘಿಸುತ್ತವೆ ಎಂದು ಕೋರ್ಟ್ ತಿಳಿಸಿದೆ.

ನ್ಯಾಯಮೂರ್ತಿ ಬಿ ಆರ್ ಗವಾಯಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠ ಒಡಿಶಾದ ಬ್ರಹ್ಮಾಪುರ್‌ ಪಾಲಿಕೆಯ ಮಾಜಿ ಮೇಯರ್ ಸಿಬಾ ಶಂಕರ್‌ ದಾಸ್ ಜನವರಿ 18ರಂದು ಒಡಿಶಾ ಹೈಕೋರ್ಟ್ ಆದೇಶದ ವಿರುದ್ಧ ಸಲ್ಲಿಸಿದ ಅರ್ಜಿಯ ಮನವಿಯ ಮೇರೆಗೆ ಆದೇಶ ಹೊರಡಿಸಿದರು.

ಜನವರಿ 18ರಂದು ತೀರ್ಪು ನೀಡಿದ್ದ ಒಡಿಶಾ ಹೈಕೋರ್ಟ್ ಸಾರ್ವಜನಿಕವಾಗಿ ಯಾವುದೇ ಅನಪೇಕ್ಷಿತ ಪರಿಸ್ಥಿತಿಗಳನ್ನು ಸೃಷ್ಟಿ ಮಾಡಬಾರದು ಹಾಗೂ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಯಾವುದೇ ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಬಾರದು ಎಂದು ಅರ್ಜಿದಾರರು ಜಾಮೀನಿನ ಮೇಲೆ ವಿಧಿಸಿದ ಷರತ್ತನ್ನು ಹಿಂಪಡೆಯುವಂತೆ ಸಲ್ಲಿಸಿದ್ದ ಅರ್ಜಿಯನ್ನು ರದ್ದುಗೊಳಿಸಿತ್ತು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಡಿಕೆ ಕದ್ದ ಕಳ್ಳ ಜೈಲಿಗೆ, ಆನೆ ಕದ್ದ ಕಳ್ಳ ಎಲ್ಲಿಗೆ?

ಆಗಸ್ಟ್‌ 2022ರಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಅರ್ಜಿದಾರರಿಗೆ ಹೈಕೋರ್ಟ್ ಷರತ್ತುಗಳನ್ನು ವಿಧಿಸಿತ್ತು.

“ನಾವು ಹೈಕೋರ್ಟ್ ವಿಧಿಸಿದ್ದ ಷರತ್ತನ್ನು ರದ್ದುಗೊಳಿಸಿದ್ದೇವೆ. ಇಂತಹ ಷರತ್ತನ್ನು ವಿಧಿಸುವುದು ಅರ್ಜಿದಾರರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತವೆ ಹಾಗೂ ಇಂತಹ ಷರತ್ತುಗಳನ್ನು ವಿಧಿಸಬಾರದು ಎಂದು ಮಾ.22ರ ಆದೇಶದಲ್ಲಿ ಸುಪ್ರೀಂ ಕೋರ್ಟ್ ತಿಳಿಸಿತ್ತು.

2022 ಆಗಸ್ಟ್‌ 11 ರಂದು ತಮ್ಮನ್ನು ಬಿಡುಗಡೆ ಮಾಡುವ ಸಂದರ್ಭದಲ್ಲಿ ವಿಧಿಸಿದ ಷರತ್ತನ್ನು ಮಾರ್ಪಡಿಸಬೇಕೆಂದು ಒಡಿಶಾ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಜಾಮೀನಿನ ಮೇಲೆ ಬಿಡುಗಡೆಗೊಂಡ ನಂತರ ಅರ್ಜಿದಾರರ ಮೇಲೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಕಾರಣ ಕೊಲೆ ಯತ್ನ ಕೂಡ ನಡೆದಿದೆ. ರಾಜಕೀಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಷರತ್ತುಗಳನ್ನು ನಿರ್ಬಂರ್ಧಿಸುವುದು ಅಸಮರ್ಥನೀಯ. ಮೇಲ್ಮನವಿದಾರರ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಅಡ್ಡಿಯುಂಟಾಗುತ್ತದೆ ಎಂದು ಹೈಕೋರ್ಟ್ ಷರತ್ತುಗಳ ತೆರವಿಗೆ ತಡೆಯೊಡ್ಡಿತ್ತು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

30 ವರ್ಷದ ವ್ಯಕ್ತಿಯೊಬ್ಬ ಧ್ವನಿ ಬದಲಾವಣೆ ಮಾಡುವ ಆ್ಯಪ್ ಬಳಸಿ, ಶಿಕ್ಷಕಿಯಾಗಿ...

ಮೊದಲ ಬಾರಿಗೆ ಮತ ಚಲಾಯಿಸಿದ ಹಣಕಾಸು ಆಯೋಗದ ಮುಖ್ಯಸ್ಥ ಅರವಿಂದ್ ಪನಗಾರಿಯಾ

ಹದಿನಾರನೇ ಹಣಕಾಸು ಆಯೋಗದ ಅಧ್ಯಕ್ಷ, 71 ವರ್ಷ ವಯಸ್ಸಿನ ಅರವಿಂದ್ ಪನಗಾರಿಯಾ...

ನಿರ್ಗಮಿಸುವ ಪ್ರಧಾನಿ ತನ್ನನ್ನು ತಾನು ದೇವಮಾನವನೆಂದು ಭಾವಿಸಬಹುದು: ಕಾಂಗ್ರೆಸ್‌

"ನಿರ್ಗಮಿಸುತ್ತಿರುವ ಪ್ರಧಾನಿ ಸೋಲಿನ ವಾಸ್ತವ ತಿಳಿಯುತ್ತಿದ್ದಂತೆ, ಹೆಚ್ಚು ಭ್ರಮೆಯಲ್ಲಿದ್ದಾರೆ. ಅದಕ್ಕೆ ತನ್ನ...

ದೆಹಲಿ ಮಕ್ಕಳ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: 6 ನವಜಾತ ಶಿಶುಗಳು ಸಾವು

ದೆಹಲಿಯ ಮಕ್ಕಳ ಆಸ್ಪತ್ರೆಯಲ್ಲಿ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ 6 ನವಜಾತ...