‘ಹಸು ತಾಯಿ – ಪೊಲೀಸರು ತಂದೆ’: ಯುವಕರನ್ನು ಥಳಿಸಿ, ಮೆರವಣಿಗೆ ಮಾಡಿದ ಪೊಲೀಸರು

Date:

ಗೋಹತ್ಯೆ ಆರೋಪದ ಮೇಲೆ ಇಬ್ಬರು ಮುಸ್ಲಿಂ ಯುವಕರನ್ನು ಪೊಲೀಸರು ಥಳಿಸಿದ್ದು, ಹಲ್ಲೆ ಮಾಡುತ್ತಲೇ ರಸ್ತೆಯಲ್ಲಿ ಮೆರವಣಿಗೆ ಮಾಡಿರುವ ಘಟನೆ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ನಡೆದಿದೆ.

- Advertisement -

ಮುಸ್ಲಿಂ ಯುವಕ ಸಲೀಂ ಮೇವಾಟಿ ಮತ್ತು ಆಕಿಬ್ ಮೇವಾಟಿ ಎಂಬ ಯುವಕರನ್ನು ಜನನಿಬಿಡ ಪ್ರದೇಶದಲ್ಲಿ ಪೊಲೀಸರು ಮೆರವಣಿಗೆ ಮಾಡಿದ್ದಾರೆ. ದಾರಿಯುದ್ದಕ್ಕೂ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ. ಅಲ್ಲದೆ, “ಗೋವು ನಮ್ಮ ತಾಯಿ – ಪೊಲೀಸರು ನಮ್ಮ ತಂದೆ” (ಗೌ ಹಮಾರಿ ಮಾತಾ ಹೈ, ಪೊಲೀಸ್ ಹಮಾರಾ ಬಾಪ್ ಹೈ) ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿದ್ದಾರೆ. ಘಟನೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ವಿಡಿಯೋದಲ್ಲಿ, ಸಲೀಂ ಮತ್ತು ಆಕಿಬ್ ಅವರನ್ನು ಯಾಕೆ ಮೆರವಣಿಗೆ ಮಾಡಲಾಗುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿರುವ ಪೊಲೀಸ್ ಅಧಿಕಾರಿಯೊಬ್ಬರು, ‘ಅವರು ಗೋಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ’ ಎಂದು ಹೇಳಿದ್ದಾರೆ.

ಇಬ್ಬರು ಮುಸ್ಲಿಂ ಯುವಕರನ್ನು ಸುಮಾರು ಒಂದು ಕಿಲೋಮೀಟರ್ ವೆರೆಗೆ ಹೊಡೆಯುತ್ತಲೇ ಮೆರವಣಿಗೆ ಮಾಡಿರುವ ಪೊಲೀಸರು, ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಪೊಲೀಸರು ಯುವಕರನ್ನು ಮೆರವಣಿಗೆ ಮಾಡಿರುವುದು ಮತ್ತು ರಸ್ತೆಯುದ್ದಕ್ಕೂ ಥಳಿಸಿರುವುದರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪೊಲೀಸರು ಹಿಂದುತ್ವವಾದಿ ಗೋರಕ್ಷರಂತೆ ವರ್ತಿಸುತ್ತಿದ್ದಾರೆ ಎಂದು ಹಲವರು ಕಿಡಿಕಾರಿದ್ದಾರೆ.

“ಉಜ್ಜಯಿನಿಯ ಘಾಟಿಯಾ ಪ್ರದೇಶದಲ್ಲಿ ಗೋಹತ್ಯೆ ನಡೆಸುತ್ತಿರುವ ಬಗ್ಗೆ ಸುಳಿವು ಸಿಕ್ಕಿತು. ಮಾಹಿತಿ ಬಂದ ತಕ್ಷಣ, ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಆರೋಪಿಗಳ ವಾಹನ, ಮೊಬೈಲ್ ಫೋನ್‌ಗಳು ಮತ್ತು ಗೋಮಾಂಸವನ್ನು ವಶಪಡಿಸಿಕೊಂಡಿದ್ದಾರೆ. ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. 3ನೇ ಆರೋಪಿ ತಪ್ಪಿಸಿಕೊಂಡಿದ್ದು, ಆತನಿಗಾಗಿ ಹುಡುಕಾಟ ನಡೆಸುತ್ತಿದೆ” ಎಂದು ಉಜ್ಜಯಿನಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಿತೇಶ್ ಭಾರ್ಗವ್ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...