ಸಾರ್ವಜನಿಕ ಗೋಹತ್ಯೆ ಈದ್‌ನ ಕಡ್ಡಾಯ ಆಚರಣೆಯಲ್ಲ: ಕಲ್ಕತ್ತಾ ಹೈಕೋರ್ಟ್

Date:

ಮುಂಬರುವ ಈದ್-ಉಲ್-ಅಧಾ (ಬಕ್ರೀದ್) ಹಬ್ಬದ ಹಿನ್ನೆಲೆಯಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಗೋವುಗಳು, ಗೂಳಿಗಳು ಮತ್ತು ಎಮ್ಮೆಗಳ ಹತ್ಯೆಯನ್ನು ನಿರ್ಬಂಧಿಸಿ ಪಶ್ಚಿಮ ಬಂಗಾಳ ಸರ್ಕಾರ ಹೊರಡಿಸಿದ್ದ ಅಧಿಸೂಚನೆಯನ್ನು ಕಲ್ಕತ್ತಾ ಹೈಕೋರ್ಟ್ ಎತ್ತಿಹಿಡಿದಿದೆ.

- Advertisement -

ಪಶ್ಚಿಮ ಬಂಗಾಳ ಸರ್ಕಾರವು ಮೇ 13ರಂದು ಪ್ರಾಣಿ ಹತ್ಯೆ ನಿಯಂತ್ರಣ ಕಾಯ್ದೆ-1950ರ ಅಡಿಯಲ್ಲಿ ವಿಶೇಷ ಅಧಿಸೂಚನೆ ಹೊರಡಿಸಿತ್ತು. ಈ ಹೊಸ ನಿಯಮದ ಪ್ರಕಾರ, ಜಾನುವಾರುಗಳನ್ನು ವಧೆ ಮಾಡುವ ಮುನ್ನ ಪಶುವೈದ್ಯರಿಂದ ‘ಫಿಟ್ ಸರ್ಟಿಫಿಕೇಟ್’ (ದೃಢೀಕರಣ ಪ್ರಮಾಣಪತ್ರ) ಪಡೆಯುವುದು ಕಡ್ಡಾಯವಾಗಿದೆ. ಕೇವಲ 14 ವರ್ಷ ಮೇಲ್ಪಟ್ಟ, ವಯಸ್ಸಾದ, ಶಾಶ್ವತ ಅಂಗವೈಕಲ್ಯ ಹೊಂದಿರುವ ಅಥವಾ ಗುಣಪಡಿಸಲಾಗದ ಕಾಯಿಲೆಯಿಂದ ಬಳಲುತ್ತಿರುವ ಜಾನುವಾರುಗಳಿಗೆ ಮಾತ್ರ ಅಧಿಕಾರಿಗಳಿಂದ ಪ್ರಮಾಣಪತ್ರ ಪಡೆದು ವಧೆ ಮಾಡಲು ಅವಕಾಶ ಕಲ್ಪಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ರೀತಿಯ ಜಾನುವಾರು ಹತ್ಯೆಯನ್ನು ಈ ಆದೇಶವು ಸಂಪೂರ್ಣವಾಗಿ ನಿಷೇಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ಜನರು ಸಂಕಷ್ಟದಲ್ಲಿರುವಾಗ ರೋಮ್‌ನಲ್ಲಿ ಮಿಠಾಯಿ ಹಂಚಿ ರೀಲ್ಸ್‌ ಮಾಡುತ್ತಿರುವ ಪಿಎಂ ಮೋದಿ: ರಾಹುಲ್ ಗಾಂಧಿ

ಸರ್ಕಾರದ ಈ ನಿರ್ಬಂಧಗಳನ್ನು ಪ್ರಶ್ನಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶಾಸಕ ಅಖ್ರುಜ್ಜಮಾನ್ ಅವರು ಹೈಕೋರ್ಟ್ ಮೊರೆಹೋಗಿದ್ದರು. ವಿಚಾರಣೆ ವೇಳೆ ಖುದ್ದಾಗಿ ಹಾಜರಿದ್ದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು, ಈ ನಿರ್ಬಂಧಗಳಿಂದಾಗಿ ಜಾನುವಾರು ಸಾಕಾಣಿಕೆ ಮತ್ತು ಮಾರಾಟದ ಮೇಲೆ ಅವಲಂಬಿತವಾಗಿರುವ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಹಾಗೂ ಗ್ರಾಮೀಣ ಆರ್ಥಿಕತೆಗೆ ತೀವ್ರ ಪೆಟ್ಟು ಬೀಳಲಿದೆ ಎಂದು ವಾದ ಮಂಡಿಸಿದ್ದರು. ಅಲ್ಲದೆ, ಈ ನಿಯಮಗಳು ಕುರ್ಬಾನಿ ಸಂಪ್ರದಾಯದ ಮೇಲೂ ನೇರ ಪರಿಣಾಮ ಬೀರಲಿವೆ ಎಂದು ಅರ್ಜಿದಾರರು ಆಕ್ಷೇಪ ವ್ಯಕ್ತಪಡಿಸಿದ್ದರು.

ಆದರೆ, ಮುಖ್ಯ ನ್ಯಾಯಮೂರ್ತಿ ಸುಜಾಯ್ ಪಾಲ್ ಮತ್ತು ನ್ಯಾಯಮೂರ್ತಿ ಪಾರ್ಥ ಸಾರಥಿ ಸೇನ್ ಅವರಿದ್ದ ವಿಭಾಗೀಯ ಪೀಠವು ಅರ್ಜಿದಾರರ ಆಕ್ಷೇಪಗಳನ್ನು ಬದಿಗೊತ್ತಿ, ಸಾರ್ವಜನಿಕ ಸ್ಥಳಗಳಲ್ಲಿ ಗೋವಧೆ ನಿಷೇಧಿಸುವ ಸರ್ಕಾರದ ಕ್ರಮವನ್ನು ಮಾನ್ಯ ಮಾಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುತ್ತಿಗೆಗಳು ಸುತ್ತುವರೆದಿರುವ ಗ್ಯಾನೇಶ್ ರಾಜೀನಾಮೆ ಸನ್ನಿಹಿತವೇ?

ದಿಲ್ಲಿ- ಮುಂಬಯಿಯಲ್ಲಿ‌ ಯುವಜನರು ಮತ್ತು  ಪ್ರತಿಪಕ್ಷಗಳ ಪ್ರತಿಭಟನೆಗಳು ಮುಂದುವರೆದಿವೆ. ಕಾಂಗ್ರೆಸ್ ಮತ್ತಿತರೆ ...

ವಿಜಯಪುರ | ಬರಪೀಡಿತ ಪ್ರದೇಶಗಳಿಗೆ ಡಿಸಿಎಂ ಪರಮೇಶ್ವರ್‌ ಭೇಟಿ

ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌ ಅವರು ಅ.8 ಹಾಗೂ 9ರಂದು ವಿಜಯಪುರ ಮತ್ತು...

ಮಲ್ಲೇಶ್ವರಂನಲ್ಲಿ ಫಾರ್ಮ್-7‌ ದುರ್ಬಳಕೆ ಆರೋಪ; ʼಈ ದಿನʼ ವರದಿ ಆಧರಿಸಿ ಕಾಂಗ್ರೆಸ್ ದೂರು

ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಸಮುದಾಯದ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

ಕಮಲನಗರ | ಅರ್ಹ ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ: ಕ್ಲಿನಿಕ್ ಸೀಜ್

ಕಮಲನಗರ ತಾಲ್ಲೂಕಿನ ಚಾಂದೋರಿ ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಇಲ್ಲದೆ ಅಕ್ರಮವಾಗಿ...