ಮೋದಿ ದುರಾಡಳಿತ ವಿರುದ್ಧ ಧ್ವನಿ: ಸಿಪಿಐನಿಂದ ಬೃಹತ್ ‘ಬದ್ಲಾವ್ ಜರೂರಿ ಹೈ’ ರ‍್ಯಾಲಿ

Date:

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದ ನೀತಿಗಳಿಂದಾಗಿ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಮತ್ತು ಬೆಲೆ ಏರಿಕೆ ಮಿತಿಮೀರಿದೆ ಎಂದು ಆರೋಪಿಸಿರುವ ಭಾರತೀಯ ಕಮ್ಯುನಿಸ್ಟ್ ಪಕ್ಷ (ಸಿಪಿಐ), ಕೇಂದ್ರ ಸರ್ಕಾರದ ವಿರುದ್ಧ ‘ಬದ್ಲಾವ್ ಜರೂರಿ ಹೈ’ (ಬದಲಾವಣೆ ಅತ್ಯಗತ್ಯ) ಎಂಬ ಬೃಹತ್ ರ‍್ಯಾಲಿ ಆಯೋಜಿಸಿದೆ.

- Advertisement -

ದೆಹಲಿಯ ರಾಮ್‌ಲೀಲಾ ಮೈದಾನದಲ್ಲಿ ಈ ಬೃಹತ್ ಸಮಾವೇಶ ನಡೆಯಲಿದೆ. ದೇಶಾದ್ಯಂತದಿಂದ ಸಾವಿರಾರು ಕಾರ್ಯಕರ್ತರು ಹಾಗೂ ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿ: ಭ್ರಷ್ಟ ಬಿಜೆಪಿ ಮತ್ತು ಸ್ವಾರ್ಥಿ ಜೆಡಿಎಸ್ ಸೋಲಿಸಿ ಹಾಸನದ ಘನತೆ ಉಳಿಸಿದ ಮತದಾರರಿಗೆ ಧನ್ಯವಾದ: ಜನಪರ ಚಳವಳಿಗಳ ಒಕ್ಕೂಟ

ಸಿಪಿಐ ಪ್ರಧಾನ ಕಾರ್ಯದರ್ಶಿ ಡಿ. ರಾಜಾ ಹಾಗೂ ಪಕ್ಷದ ಪ್ರಮುಖ ನಾಯಕರು ನವದೆಹಲಿಯಲ್ಲಿ ಸುದ್ಧಿಗೋಷ್ಠಿ ನಡೆಸಿ, ಕೇಂದ್ರ ಸರ್ಕಾರದ 12 ವರ್ಷಗಳ ಆಡಳಿತವನ್ನು ತೀವ್ರವಾಗಿ ಖಂಡಿಸಿದ್ದಾರೆ. ದೇಶವು ಹಲವು ರೀತಿಯ ಗಂಭೀರ ಬಿಕ್ಕಟ್ಟುಗಳನ್ನು ಎದುರಿಸುತ್ತಿದ್ದರೂ, ಮೋದಿ ಸರ್ಕಾರವು ಅವುಗಳನ್ನು ಬಗೆಹರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಅವರು ಆರೋಪಿಸಿದರು.

ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಬೇಕು ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ತಕ್ಷಣವೇ ನಿಯಂತ್ರಿಸಬೇಕು. ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಮ್‌ಎಸ್‌ಪಿ) ಕಾನೂನಾತ್ಮಕ ಗ್ಯಾರಂಟಿ ನೀಡಬೇಕು. ದಲಿತರು, ಆದಿವಾಸಿಗಳು, ಅಲ್ಪಸಂಖ್ಯಾತರು ಮತ್ತು ಶ್ರಮಿಕ ವರ್ಗದ ಹಕ್ಕುಗಳನ್ನು ರಕ್ಷಿಸುಬೇಕು. ಸಾರ್ವಜನಿಕ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಬಲಪಡಿಸಬೇಕು ಎಂಬುದು ಸಿಪಿಐ ಬೇಡಿಕೆಯಾಗಿದೆ.

ಹಾಗೆಯೇ ವಿರೋಧ ಪಕ್ಷಗಳನ್ನು ಹಸಿ ಸುಳ್ಳು ಮತ್ತು ಸಂಸ್ಥೆಗಳ ದುರುಪಯೋಗದ ಮೂಲಕ ಹತೋಟಿಯಲ್ಲಿಡಲು ಯತ್ನಿಸಲಾಗುತ್ತಿದೆ ಎಂದು ಆರೋಪಿಸಿ, ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯಲು ಸಿಪಿಐ ಕರೆ ನೀಡಿದೆ.

ಜನರ ನೈಜ ಸಮಸ್ಯೆಗಳಿಂದ ಗಮನ ಬೇರೆಡೆ ಸೆಳೆಯಲು ಆಡಳಿತಾರೂಢ ಆರ್‌ಎಸ್‌ಎಸ್-ಬಿಜೆಪಿ ಧಾರ್ಮಿಕ ಧ್ರುವೀಕರಣ ಮತ್ತು ಭಾವನಾತ್ಮಕ ವಿಚಾರಗಳನ್ನು ಮುನ್ನೆಲೆಗೆ ತರುತ್ತಿದೆ ಎಂದು ಸಿಪಿಐ ಆರೋಪಿಸಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಅಸಮಾಧಾನವನ್ನು ಒಗ್ಗೂಡಿಸಿ, ಬಲಿಷ್ಠ ರಾಜಕೀಯ ಪರ್ಯಾಯವನ್ನು ರೂಪಿಸಲು ಈ ‘ಬದ್ಲಾವ್ ಜರೂರಿ ಹೈ’ ರ‍್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಕ್ಷದ ನಾಯಕರು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಡಿಬಿಐ ಬ್ಯಾಂಕ್ ಮಾರಾಟಕ್ಕೆ ಕೇಂದ್ರ ಸಂಪುಟ ಅಸ್ತು: ₹52,878 ಕೋಟಿಗೆ ಫೇರ್‌ಫ್ಯಾಕ್ಸ್ ತೆಕ್ಕೆಗೆ

ಐಡಿಬಿಐ (IDBI) ಬ್ಯಾಂಕ್‌ನ ‘ಕಾರ್ಯತಂತ್ರದ ಪುನರ್‌ರಚನೆ’ಗೆ (Strategic Restructuring) ಕೇಂದ್ರ ಸಚಿವ...

ಬೀದರ್‌ | ಜಿಪಂ, ತಾಪಂ ಚುನಾವಣೆ: ಸಾಮಾಜಿಕ ಜಾಲತಾಣದಲ್ಲಿ ಆಕಾಂಕ್ಷಿಗಳ ಪ್ರಚಾರ ಜೋರು!

ರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಕ್ಷೇತ್ರವಾರು ಮೀಸಲಾತಿ ಪ್ರಕಟವಾಗುತ್ತಿದ್ದಂತೆ, ಬೀದರ್‌...

ಸಿಜೆಪಿ ನಾಯಕರ ಬಂಧನಕ್ಕೆ ತೀವ್ರ ಖಂಡನೆ: ತಕ್ಷಣ ರಾಂಕಾ, ಸೌರವ್ ಬಿಡುಗಡೆಗೆ ವಿಪಕ್ಷಗಳ ಆಗ್ರಹ

ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್...

ಪತಿಯನ್ನು ಕೊಂದು ಕಾಂಕ್ರೀಟ್ ಡ್ರಮ್‌ನಲ್ಲಿ ಹೂತಿಟ್ಟ ಪ್ರಕರಣ: ಪತ್ನಿ, ಪ್ರಿಯಕರನಿಗೆ ಗಲ್ಲು ಶಿಕ್ಷೆ

ಮರ್ಚೆಂಟ್ ನೇವಿ ಅಧಿಕಾರಿ ಸೌರಭ್ ರಜಪೂತ್ ಅವರನ್ನು ಬರ್ಬರವಾಗಿ ಹತ್ಯೆಗೈದು, ಮೃತದೇಹವನ್ನು...