ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ವಕ್ಫ್ ಮಸೂದೆಯು ಅಂಗೀಕಾರಗೊಂಡ ಬಳಿಕ ಹಲವು ರಾಜಕೀಯ ಪಕ್ಷಗಳು ಸಂಘಟನೆಗಳು ಈ ವಿವಾದಾತ್ಮಕ ಮಸೂದೆ ವಿರುದ್ಧವಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಸೋಮವಾರ ಭಾರತೀಯ ಕಮ್ಯೂನಿಸ್ಟ್ ಪಕ್ಷ (ಸಿಪಿಐ) ಕೂಡಾ ಉನ್ನತ ನ್ಯಾಯಾಲಯದಲ್ಲಿ ವಕ್ಫ್ ಮಸೂದೆ ವಿರುದ್ಧವಾಗಿ ಅರ್ಜಿಯನ್ನು ಸಲ್ಲಿಸಿದೆ.
ಪ್ರಧಾನ ಕಾರ್ಯದರ್ಶಿ ಡಿ ರಾಜಾ ಅವರ ಮುಖಾಂತರ ಎಡ ಪಕ್ಷವು ರಿಟ್ ಅರ್ಜಿಯನ್ನು ಸಲ್ಲಿಸಿದೆ. ಸಿಪಿಐ ಅರ್ಜಿ ಸಲ್ಲಿಸಿದ ವಕೀಲ ರಾಮ್ ಶಂಕರ್ ಅವರು, ವಕ್ಫ್ ತಿದ್ದುಪಡಿ ಮಸೂದೆಯು 1995ರ ವಕ್ಫ್ ಕಾಯ್ದೆಯ ಮೂಲವನ್ನೇ ತತ್ವವನ್ನೇ ಬದಲಾಯಿಸುತ್ತದೆ ಎಂದು ಆರೋಪಿಸಿದ್ದಾರೆ.
ಇದನ್ನು ಓದಿದ್ದೀರಾ? ವಕ್ಫ್ ಮಸೂದೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಲು ಮುಂದಾದ ಆರ್‌ಜೆಡಿ ನಾಯಕರು
ಈಗಾಗಲೇ ವಕ್ಫ್ ವಿರುದ್ಧವಾಗಿ ಸುಪ್ರೀಂ ಕೋರ್ಟ್‌ನಲ್ಲಿ ಹಲವು ಅರ್ಜಿಗಳು ಸಲ್ಲಿಸಲಾಗಿದೆ. ಇತ್ತೀಚೆಗೆ ನಟ, ಟಿವಿಕೆ ಅಧ್ಯಕ್ಷ ವಿಜಯ್ ಕೂಡಾ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ ಕೂಡಾ ವಕ್ಫ್ ವಿರುದ್ಧವಾಗಿ ಸುಪ್ರೀಂ ಕೋರ್ಟ್ ಕದ ತಟ್ಟಿದ್ದಾರೆ.
ಎಸ್‌ಪಿ ನಾಯಕರು, ಕಾಂಗ್ರೆಸ್ ನಾಯಕರೂ ಕೂಡಾ ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿಗಳ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಸಂಜಿವ್ ಖನ್ನಾ ಅವರ ನೇತೃತ್ವದ ತ್ರಿಸದಸ್ಯ ಪೀಠ ಏಪ್ರಿಲ್ 16ರಂದು ನಡೆಸುವ ಸಾಧ್ಯತೆಯಿದೆ. ನ್ಯಾಯಮೂರ್ತಿ ಸಂಜಯ್ ಕುಮಾರ್, ಕೆವಿ ವಿಶ್ವನಾಥನ್ ಕೂಡಾ ಪೀಠದಲ್ಲಿದ್ದಾರೆ.
