ಸಿಜೆಪಿ ಪ್ರತಿಭಟನೆ ತಡೆಯಲು ಮೆಟ್ರೋ, ರೈಲು ಬಂದ್: ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಸಿಪಿಐಎಂ ನಾಯಕ ಎಂ ಎ ಬೇಬಿ

Date:

ಅಕ್ಟೋಬರ್ 10ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮತ್ತು ವಿವಿಧ ಪ್ರತಿಪಕ್ಷಗಳು ಹಮ್ಮಿಕೊಂಡಿರುವ ಶಾಂತಿಯುತ ಪ್ರತಿಭಟನೆಯನ್ನು ತಡೆಯಲು ರಾಜಧಾನಿ ದೆಹಲಿಯಲ್ಲಿ 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚುವುದು ಮತ್ತು ಸುದೀರ್ಘ ದೂರದ ರೈಲುಗಳನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಶುಕ್ರವಾರ ಸುಪ್ರೀಂ ಕೋರ್ಟ್‌ಗೆ ಸಿಪಿಐಎಂ ನಾಯಕ ಎಂ ಎ ಬೇಬಿ ತುರ್ತು ಅರ್ಜಿ ಸಲ್ಲಿಸಿದ್ದಾರೆ.

- Advertisement -

ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಹಾಗೂ ನ್ಯಾಯಮೂರ್ತಿ ವಿ. ಮೋಹನಾ ಅವರನ್ನೊಳಗೊಂಡ ಪೀಠದ ಮುಂದೆ ಹಿರಿಯ ವಕೀಲ ಕಪಿಲ್ ಸಿಬಲ್, ಪ್ರಶಾಂತ್ ಭೂಷಣ್ ಮತ್ತು ಗೋಪಾಲ್ ಶಂಕರನಾರಾಯಣನ್ ಅವರು ಈ ವಿಷಯವನ್ನು ಪ್ರಸ್ತಾಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ಇದನ್ನೂ ಓದಿ: ದೆಹಲಿ ಮೆಟ್ರೋಗೆ ಪೊಲೀಸ್ ಇಲಾಖೆ ಪತ್ರ: 57 ಸ್ಟೇಷನ್‌ಗಳ ಪ್ರವೇಶ-ನಿರ್ಗಮನ ದ್ವಾರ ಮುಚ್ಚಲು ಮನವಿ

ಎಂ.ಎ. ಬೇಬಿ ಅವರ ಪರವಾಗಿ ವಾದ ಮಂಡಿಸಿದ ಕಪಿಲ್ ಸಿಬಲ್, “ದೆಹಲಿಯಲ್ಲಿ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಾಗಿದೆ, ಮೆಟ್ರೋ ನಿಲ್ದಾಣಗಳನ್ನು ಬಂದ್ ಮಾಡಲಾಗಿದೆ. ಜನಸಾಮಾನ್ಯರು ಎಲ್ಲೂ ಸಂಚರಿಸದಂತೆ ನಿರ್ಬಂಧಿಸಲಾಗಿದೆ. ಶಾಂತಿಯುತವಾಗಿ ಪ್ರತಿಭಟನೆ ನಡೆಸುವುದು ದೇಶದ ಪ್ರಜೆಗಳ ಹಕ್ಕು. ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದರೂ ಸೋಮವಾರಕ್ಕೆ ವಿಚಾರಣೆ ಮುಂದೂಡಿದ್ದರಿಂದ ಇಲ್ಲಿಗೆ ಬಂದಿದ್ದೇವೆ” ಎಂದು ಸುಪ್ರೀಂ ಕೋರ್ಟ್ ಗಮನಕ್ಕೆ ತಂದರು.

ವಕೀಲ ಗೋಪಾಲ್ ಶಂಕರನಾರಾಯಣನ್ ಮಾತನಾಡಿ, “ಸುಮಾರು 57 ಮೆಟ್ರೋ ನಿಲ್ದಾಣಗಳನ್ನು ಮುಚ್ಚಲಾಗಿದೆ. ಪ್ರತಿಭಟನೆಯನ್ನು ಎದುರಿಸಲು ಇಡೀ ನಗರವನ್ನೇ ಬಂದ್ ಮಾಡುವುದು ಮತ್ತು ಕಠಿಣ ನಿರ್ಬಂಧಗಳನ್ನು ವಿಧಿಸುವುದು ಅಸಮಾನತೆಯಿಂದ ಕೂಡಿದೆ” ಎಂದು ವಾದಿಸಿದರು.

ವಾದ-ಪ್ರತಿವಾದ ಆಲಿಸಿದ ಪೀಠವು, ಶಾಂತಿಯುತವಾಗಿ ಸಂಘಟಿತರಾಗುವುದು ಮತ್ತು ಪ್ರತಿಭಟಿಸುವುದು ಮೂಲಭೂತ ಹಕ್ಕು ಎಂಬುದರಲ್ಲಿ ಸಂಶಯವಿಲ್ಲ, ಆದರೆ ಕಾನೂನಿನ ಚೌಕಟ್ಟಿನಲ್ಲಿ ಅನುಮತಿ ಪಡೆದು ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಅಭಿಪ್ರಾಯಪಟ್ಟಿತು. ಈ ವಿಷಯವಾಗಿ ಹೆಚ್ಚಿನ ವಿವರಗಳನ್ನು ಪಡೆದುಕೊಂಡು ಮಧ್ಯಾಹ್ನ 2 ಗಂಟೆ ಬಳಿಕ ಸುಪ್ರೀಂ ಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ಮುಂದುವರಿಸುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಶಿವಮೊಗ್ಗ | ಅಕ್ಟೋಬರ್ 11ರಂದು ರಾಜ್ಯ, ಜಿಲ್ಲಾ ಮಟ್ಟದ ದೇಹದಾರ್ಢ್ಯ ಸ್ಪರ್ಧೆ

ಶಿವಮೊಗ್ಗ ಮಹಾನಗರ ಪಾಲಿಕೆ, ಕರ್ನಾಟಕ ಅಸೋಸಿಯೇಷನ್ ಆಫ್ ಬಾಡಿ ಬಿಲ್ಡರ್ಸ್ ಹಾಗೂ...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...