ಸಂಸತ್ತಿನ ಮೇಲೆ ದಾಳಿ: ‘ಸಿಖ್ಸ್ ಫಾರ್ ಜಸ್ಟೀಸ್’ ಸಂಘಟನೆಯಿಂದ ಸಿಪಿಐಎಂ ಸಂಸದರಿಗೆ ಬೆದರಿಕೆ ಕರೆ

Date:

ಕೇರಳದ ಸಿಪಿಐಎಂ ರಾಜ್ಯಸಭಾ ಸಂಸದ ವಿ ಶಿವದಾಸನ್ ಅವರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್‌ ಅವರಿಗೆ ಪತ್ರ ಬರೆದಿದ್ದು, ‘ಸಿಖ್ಸ್ ಫಾರ್ ಜಸ್ಟೀಸ್’ ಸಂಘಟನೆಯಿಂದ ತಮಗೆ ಬೆದರಿಕೆ ಕರೆ ಬಂದಿದೆ ಎಂದು ತಿಳಿಸಿದ್ದಾರೆ.

- Advertisement -

ಗುರ್ಪತ್‌ವಂತ್ ಸಿಂಗ್ ಪನ್ನುನ್ ನೇತೃತ್ವದ ಸಂಘಟನೆಯು ಖಾಲಿಸ್ತಾನ್ ಜನಾಭಿಪ್ರಾಯ ಸಂಗ್ರಹಣೆಯ ಸಂದೇಶದೊಂದಿಗೆ ಭಾರತೀಯ ಸಂಸತ್ತಿನಿಂದ ಕೆಂಪು ಕೋಟೆ ಪ್ರದೇಶದವರೆಗೆ ಬಾಂಬ್ ದಾಳಿ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಶಿವದಾಸನ್ ಅವರು ಧನಕರ್‌ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದೆಹಲಿ ವಿಮಾನ ನಿಲ್ದಾಣದ ಲಾಂಜ್‌ನಲ್ಲಿರುವಾಗ ರಾಜ್ಯಸಭಾ ಸಂಸದರಿಗೆ ಕರೆ ಬಂದಿದೆ. ಕೆಲವೇ ನಿಮಿಷಗಳ ಹಿಂದೆ ಸಂಸದ ಎಎ ರಹೀಮ್‌ ಅವರಿಗೂ ಕರೆ ಬಂದಿದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಯ ‘ಭಗವಂತ’ನಿಗೇ ಎಚ್ಚರಿಕೆ ಕೊಟ್ಟರೆ ಭಾಗವತ್?

ಶಿವದಾಸನ್ ಅವರು ಈಗಾಗಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಜುಲೈ 23 ರಂದು ಬಜೆಟ್ ಮಂಡಿಸುವುದರೊಂದಿಗೆ ಆಗಸ್ಟ್ 12 ರವರೆಗೆ ನಡೆಯಲಿದೆ.

ಈ ನಡುವೆ ಅಧಿವೇಶನದಲ್ಲಿ ನೀಟ್‌–ಯುಜಿ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆಪತ್ರಿಕೆ ಸೋರಿಕೆ, ಕನ್ವರ್ ಯಾತ್ರೆಗೆ ಸಂಬಂಧಿಸಿ ಉತ್ತರ ಪ್ರದೇಶ ಸರ್ಕಾರ ಹೊರಡಿಸಿರುವ ಆದೇಶ ಸೇರಿದಂತೆ ವಿವಾದಾತ್ಮಕ ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿರೋಧ ಪಕ್ಷಗಳು ಸಜ್ಜಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...