ಇಂಡಿಯಾ ಒಕ್ಕೂಟದ ಸಭೆಗೆ ಸಿಪಿಐಎಂನಿಂದ ಜಾನ್ ಬ್ರಿಟ್ಟಾಸ್: ಕಾಂಗ್ರೆಸ್‌ ಅನ್ನು ಪ್ರಶ್ನಿಸುವ ಸಾಧ್ಯತೆ

Date:

ಸೋಮವಾರ ನಡೆಯಲಿರುವ ಇಂಡಿಯಾ ಒಕ್ಕೂಟ ಸಭೆಯಲ್ಲಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಅವರು ಸಿಪಿಐಎಂ ಅನ್ನು ಪ್ರತಿನಿಧಿಸಿ ಹಾಜರಾಗಲಿದ್ದಾರೆ. ಆದರೆ ಈ ನಡುವೆ ಕೇರಳ ವಿಧಾನಸಭಾ ಚುನಾವಣಾ ಪ್ರಚಾರದ ಸಮಯದಲ್ಲಿ ಎಡ ಪಕ್ಷವು ಬಿಜೆಪಿ ಜತೆ ಒಪ್ಪಂದ ಮಾಡಿಕೊಂಡಿದೆ ಎಂಬ ಆರೋಪಗಳ ಕುರಿತು ಕಾಂಗ್ರೆಸ್ ಪ್ರತಿಕ್ರಿಯೆಗಾಗಿ ಕಾಯುತ್ತಿದೆ.

- Advertisement -

ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂಎ ಬೇಬಿ ಇತ್ತೀಚೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿದ್ದಾರೆ. ಕೇರಳದಲ್ಲಿ ಸಿಪಿಐಎಂ ಮತ್ತು ಬಿಜೆಪಿ ನಡುವೆ ರಾಜಕೀಯ ಒಪ್ಪಂದವಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕರುಗಳು ಹೇಳಿಕೆ ನೀಡಿರುವ ಕುರಿತು ಸ್ಪಷ್ಟೀಕರಣವನ್ನು ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನು ಓದಿದ್ದೀರಾ? ಎಎಪಿ ಸಂಸದರು ಬಿಜೆಪಿ ಸೇರ್ಪಡೆ: ‘ತನಿಖಾ ಸಂಸ್ಥೆಗಳ ದುರುಪಯೋಗದ ಪರಿಣಾಮ’ ಎಂದ ಸಿಪಿಐಎಂ ನಾಯಕ

ಪ್ರತಿಗಳನ್ನು ಇಂಡಿಯಾ ಒಕ್ಕೂಟದ ಇತರ ಘಟಕಗಳೊಂದಿಗೆ ಹಂಚಿಕೊಳ್ಳಲಾಗಿದೆ. ಅಂತಹ ಆರೋಪಗಳು ವಿರೋಧ ಪಕ್ಷಗಳ ಮೈತ್ರಿಕೂಟವನ್ನು ಬೆಂಬಲಿಸುವ ಮನೋಭಾವಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ವಾದಿಸಿದ್ದಾರೆ. ಈ ವಿಷಯದ ಬಗ್ಗೆ ಕಾಂಗ್ರೆಸ್‌ನಿಂದ ಸ್ಪಷ್ಟೀಕರಣಕ್ಕಾಗಿ ಕಾಯುತ್ತಿರುವುದಾಗಿ ಎಡಪಕ್ಷವು ಹೇಳಿದೆ.

ಆದರೆ ಕಾಂಗ್ರೆಸ್‌ನಿಂದ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೂ ಇಂಡಿಯಾ ಒಕ್ಕೂಟದ ಸಭೆಗೆ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಅವರನ್ನು ಸಿಪಿಐಎಂ ಕಳುಹಿಸಲಿದೆ. ಹಾಗೆಯೇ ಬ್ರಿಟ್ಟಾಸ್ ಈ ವಿಷಯವನ್ನು ಎತ್ತುವ ನಿರೀಕ್ಷೆಯಿದೆ.

ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಖರ್ಗೆ ಸೇರಿದಂತೆ ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಗಳು ಸಾಮಾನ್ಯ ಚುನಾವಣಾ ಟೀಕೆಗಳನ್ನು ಮೀರಿದೆ. ಬಿಜೆಪಿಗೆ ಸಾಮೂಹಿಕವಾಗಿ ಸವಾಲು ಹಾಕಲು ರಚಿಸಲಾದ ಮೈತ್ರಿಕೂಟದ ಕಾರ್ಯನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಬೇಬಿ ಕಳವಳ ವ್ಯಕ್ತಪಡಿಸಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯ ನಂತರ ಈ ವಿಷಯವು ಎರಡೂ ಪಕ್ಷಗಳ ನಡುವೆ ಉದ್ವಿಗ್ನತೆ ಹೆಚ್ಚಿಸಿದೆ.

ಇನ್ನು ಈ ಸಭೆಗೆ ಟಿಎಂಸಿ ಮುಖ್ಯಸ್ಥೆ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಪಕ್ಷದ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ, ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ರಾಹುಲ್ ಗಾಂಧಿ ಮತ್ತು ಖರ್ಗೆ ಭಾಗವಹಿಸುವ ಸಾಧ್ಯತೆ ಇದೆ. ಆದರೆ ಡಿಎಂಕೆ ಮತ್ತು ಎಎಪಿ ಸಭೆಯಲ್ಲಿ ಭಾಗವಹಿಸುವ ಸಾಧ್ಯತೆ ಕಡಿಮೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...