ಟಿಎಂಸಿಯಲ್ಲಿ ಬಿರುಕು ಉಲ್ಬಣ: ಕೇಂದ್ರ ಸಚಿವರನ್ನು ಭೇಟಿಯಾದ ಮಮತಾ ಆಪ್ತ

Date:

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಟ್ಟಾ ಬೆಂಬಲಿಗ ಹಾಗೂ ಟಿಎಂಸಿಯ ಹಿರಿಯ ನಾಯಕ ಸುದೀಪ್ ಬಂಡೋಪಾಧ್ಯಾಯ ಅವರು ಇಂದು ಕೇಂದ್ರ ಸಚಿವ ಭೂಪೇಂದ್ರ ಸಿಂಗ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಈ ಮಹತ್ವದ ಭೇಟಿಯ ಸಂದರ್ಭದಲ್ಲಿ ಟಿಎಂಸಿಯ ಬಂಡಾಯ ಸಂಸದೆ ಶತಾಬ್ದಿ ರಾಯ್ ಕೂಡ ಉಪಸ್ಥಿತರಿದ್ದರು.

- Advertisement -

ಲೋಕಸಭೆಯಲ್ಲಿ ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟದೊಂದಿಗೆ ಗುರುತಿಸಿಕೊಳ್ಳಲು ಒಲವು ತೋರಿರುವ ಟಿಎಂಸಿಯ ಒಟ್ಟು 20 ಬಂಡಾಯ ಸಂಸದರ ಪೈಕಿ 19 ಸಂಸದರ ಪಟ್ಟಿಯಲ್ಲಿ ಸುದೀಪ್ ಬಂಡೋಪಾಧ್ಯಾಯ ಅವರ ಹೆಸರು ಇರಲಿಲ್ಲ ಎಂಬುದು ಗಮನಾರ್ಹ. ಇದೀಗ ಅವರು ಕೂಡ ಕೇಂದ್ರ ಸಚಿವರನ್ನು ಭೇಟಿಯಾಗಿರುವುದು ಟಿಎಂಸಿ ವಲಯದಲ್ಲಿ ನಡುಕ ಹುಟ್ಟಿಸಿದೆ. ಇತ್ತೀಚೆಗಷ್ಟೇ 20 ಮಂದಿ ಟಿಎಂಸಿ ಸಂಸದರು ಲೋಕಸಭೆಯಲ್ಲಿ ಪ್ರತ್ಯೇಕವಾಗಿ ಕುಳಿತುಕೊಳ್ಳಲು ಅವಕಾಶ ನೀಡುವಂತೆ ಅಧಿಕೃತವಾಗಿ ಕೋರಿದ್ದರು. ಇದು ಪಕ್ಷದ ಸಂಸದೀಯ ವಿಭಾಗದಲ್ಲಿನ ವಿಭಜನೆಯನ್ನು ಸ್ಪಷ್ಟಪಡಿಸಿದೆ ಎಂದು ಬಂಡಾಯ ಸಂಸದೆ ಕಾಕೋಲಿ ಘೋಷ್ ದಸ್ತಿದಾರ್ ಈ ಮುನ್ನವೇ ಬಹಿರಂಗಪಡಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಪ್ರಜಾಪ್ರಭುತ್ವದ ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಇದನ್ನು ಓದಿದ್ದೀರಾ? 43ರ ಗಾರ್ಡನ್‌ನಿಂದ 17ರ ಮೊರಾವರೆಗೆ: ಫಿಫಾ ವಿಶ್ವಕಪ್‌ನ ಅಚ್ಚರಿಯ ಸಂಗತಿಗಳು

ಈ ದಿಢೀರ್ ಬೆಳವಣಿಗೆಯ ಕುರಿತು ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಟಿಎಂಸಿ ಶಾಸಕ ಕುನಾಲ್ ಘೋಷ್, “ಸುದೀಪ್ ಬಂಡೋಪಾಧ್ಯಾಯ ಅವರಿಗೆ ಪಕ್ಷಾಂತರ ಮಾಡುವ ಹಳೆಯ ಚಾಳಿಯಿದೆ. ಮಮತಾ ದೀದಿ ಇಂಥವರಿಗೆ ಸ್ಥಾನಮಾನ ಮತ್ತು ಗೌರವ ನೀಡಿದರು, ಆದರೆ ಇವರು ಮರಳಿ ನೀಡುತ್ತಿರುವುದು ಈ ದ್ರೋಹವನ್ನು. ಮಮತಾ ಅವರನ್ನು ದಾರಿ ತಪ್ಪಿಸುವ ಮೂಲಕವೇ ಸುದೀಪ್ ರಾಜಕಾರಣ ಮಾಡಿದ್ದಾರೆ ಎಂದು ನಾನು ಹಿಂದೆಯೇ ಹೇಳಿದ್ದೆ. ಆ ಕಾರಣಕ್ಕಾಗಿ ನನ್ನನ್ನು ಒಮ್ಮೆ ಪಕ್ಷದಿಂದ ಅಮಾನತು ಮಾಡಲಾಗಿತ್ತು. ಅಂದು ನಾನು ಹೇಳಿದ್ದು ಇಂದು ಸತ್ಯವೆಂದು ಸಾಬೀತಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಂಡಾಯ ಸಂಸದರು ಲೋಕಸಭಾ ಸ್ಪೀಕರ್ ಅವರನ್ನು ಭೇಟಿಯಾಗುವ ಮುನ್ನ, ಭಾನುವಾರ (ಜೂನ್ 14) ದೆಹಲಿಯಲ್ಲಿ ಪಶ್ಚಿಮ ಬಂಗಾಳದ ಹಾಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರನ್ನು ಭೇಟಿಯಾಗಿ ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಸಲಿದ್ದಾರೆ. “ಎಲ್ಲಾ ಬಂಡಾಯ ಸಂಸದರು ನಾಳೆ ದೆಹಲಿಗೆ ಆಗಮಿಸಲಿದ್ದು, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರೊಂದಿಗೆ ಭಾನುವಾರ ಸಭೆ ನಡೆಸಲಿದ್ದಾರೆ. ನಂತರ ಸೋಮವಾರ (ಜೂನ್ 15) ನಾವೆಲ್ಲರೂ (19 ಸಂಸದರು) ಲೋಕಸಭಾ ಸ್ಪೀಕರ್ ಅವರನ್ನು ಭೇಟಿಯಾಗಲಿದ್ದೇವೆ” ಎಂದು ಟಿಎಂಸಿ ಬಂಡಾಯ ಸಂಸದ ಜಗದೀಶ್ ಬಸುನಿಯಾ ತಿಳಿಸಿದ್ದಾರೆ. ಆದರೆ, 20 ಸಂಸದರೂ ಸ್ಪೀಕರ್‌ ಭೇಟಿಯಾಗುವ ಬಗ್ಗೆ ಅವರು ಖಚಿತಪಡಿಸಿಲ್ಲ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ ಕರೆಘಂಟೆಯೇ?

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ...

ಬೀದರ್‌ | ನ.1ರಂದು ಸಚಿವ ಈಶ್ವರ ಖಂಡ್ರೆಗೆ ಅಭಿನಂದನಾ ಸಮಾರಂಭ

ಬೀದರ್‌ ತಾಲ್ಲೂಕಿನ ಅತಿವಾಳ ಸಮೀಪ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಮತ್ತು...

ಬೀದರ್‌ | ವಾಲ್ಮೀಕಿ ರಾಮಾಯಣ ಮಾನವ ಸಂಬಂಧಗಳ ಮೌಲ್ಯ ಸಾರುತ್ತದೆ: ನಾ.ಗೀತಾಚಾರ್ಯ

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣವು ಮಾನವ ಸಂಬಂಧಗಳ ಮಹತ್ವ, ಕುಟುಂಬದ ಜವಾಬ್ದಾರಿ,...