10ನೇ ತರಗತಿ ಬೋರ್ಡ್ ಪರೀಕ್ಷೆಯಿಂದ ಹೊರಗುಳಿದ ಕ್ರಿಕೆಟಿಗ ವೈಭವ್ ಸೂರ್ಯವಂಶಿ

Date:

ಭಾರತದ 14 ವರ್ಷದ ಯುವ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಈ ವರ್ಷ ಸಿಬಿಎಸ್‌ಇ 10ನೇ ತರಗತಿಯ ಬೋರ್ಡ್ ಪರೀಕ್ಷೆಯಿಂದ ಹೊರಗುಳಿದಿದ್ದಾರೆ. ಅವರು ಟೂರ್ನಿಗಳು ಹಾಗೂ ವಿವಿಧ ಪಂದ್ಯಾವಳಿಗಳಲ್ಲಿ ನಿರತನಾಗಿರುವುದರಿಂದ ಪರೀಕ್ಷೆಗೆ ಹಾಜರಾಗದೇ ಇರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ.

- Advertisement -

ಇತ್ತೀಚೆಗೆ, ನಡೆದ ಅಂಡರ್-19 ವಿಶ್ವಕಪ್‌ನಲ್ಲಿ ವೈಭವ್ ಸೂರ್ಯವಂಶಿ ಅವರು ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ಅವರು ಬಿಹಾರದ ತಾಜ್‌ಪುರದ ನಿವಾಸಿಯಾಗಿದ್ದು, ತಾಜ್‌ಪುರದ ಮಾಡೆಸ್ಟಿ ಸ್ಕೂಲ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಫೆಬ್ರವರಿ 17 ಮತ್ತು ಮಾರ್ಚ್ 11ರವರೆಗೆ ಸಿಬಿಎಸ್‌ಇ ಬೋರ್ಡ್‌ ಪರೀಕ್ಷೆ ನಡೆಯಲಿದೆ. ಆದರೆ, ನಿರಂತರ ಕ್ರಿಕೆಟ್ ಚಟುವಟಿಕೆಗಳಿಂದಾಗಿ, ಅವರು ಮನೆ ಮತ್ತು ಶಾಲೆಯಿಂದ ದೂರವಿದ್ದರು. ಪರಿಣಾಮ, ಪರೀಕ್ಷೆಗೆ ಸಿದ್ದತೆ ನಡೆಸಲು ಸಾಧ್ಯವಾಗಿಲ್ಲ. ಹೀಗಾಗಿ, ಈ ವರ್ಷ ಪರೀಕ್ಷೆಯಿಂದ ಹೊರಗಿರಲು ಅವರು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಾಡೆಸ್ಟಿ ಸ್ಕೂಲ್ ತಾಜ್‌ಪುರದ ನಿರ್ದೇಶಕ ಆದರ್ಶ್ ಕುಮಾರ್ ಪಿಂಟು ಹೇಳುವಂತೆ; ವೈಭವ್ ಅವರ ಪರೀಕ್ಷಾ ಫಾರ್ಮ್ಅನ್ನು ಭರ್ತಿ ಮಾಡಲಾಗಿದೆ. ಪ್ರವೇಶ ಪತ್ರವನ್ನು (ಹಾಲ್‌ ಟಿಕೆಟ್‌) ಸಹ ನೀಡಲಾಗಿದೆ. ಅವರು ಪೊದ್ದಾರ್ ಇಂಟರ್ನ್ಯಾಷನಲ್ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕು. ಆದರೆ, ವೈಭವ್ ಪರೀಕ್ಷೆ ಬರೆಯದೇ ಇರಲು ನಿರ್ಧರಿಸಿದ್ದಾರೆ ಎಂದು ಅವರ ತಂದೆ ಸಂಜೀವ್ ಸೂರ್ಯವಂಶಿ ತಿಳಿಸಿದ್ದಾರೆ.

U19 ವಿಶ್ವಕಪ್‌ನಲ್ಲಿ, ವೈಭವ್ ಏಳು ಪಂದ್ಯಗಳಲ್ಲಿ 62.71 ಸರಾಸರಿಯಲ್ಲಿ 439 ರನ್ ಗಳಿಸುವ ಮೂಲಕ ಎರಡನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿ ಹೊರಹೊಮ್ಮಿದ್ದರು. ಅವರು ಒಂದು ಶತಕ, ಮೂರು ಅರ್ಧಶತಕಗಳು ಹಾಗೂ 175ರ ಅತ್ಯುತ್ತಮ ಸ್ಕೋರ್ ಹೊಂದಿದ್ದರು. ಅಲ್ಲದೆ, 2026ರ ಐಪಿಎಲ್‌ನಲ್ಲಿ ಅವರು ರಾಜಸ್ಥಾನ್ ರಾಯಲ್ಸ್ ಪರ ಆಡಲಿದ್ದಾರೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘Instagram ಹೆಣ್ಮಕ್ಕಳಿಗೆ ಮಾತ್ರ’; ಎಲಾನ್ ಮಸ್ಕ್ ಹೀಗ್ಯಾಕಂದ್ರು?

ಟೆಕ್ ಜೈಂಟ್ ಎಲಾನ್ ಮಸ್ಕ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಗಳ...

ಜಂತರ್‌ ಮಂತರ್‌ನಲ್ಲಿ 500ಕ್ಕೂ ಅಧಿಕ ಮಂದಿ ಅರೆಸ್ಟ್: ‘ಗ್ಯಾನೇಶ್ ಕುಮಾರ್ ಬಂಧನವಾಗಲಿ’ ಎಂದ ನಾಯಕರು

ಎಸ್‌ಐಆರ್ ಮೊದಲಾದ ಪ್ರಕ್ರಿಯೆ ವಿಚಾರದಲ್ಲಿ ಏಕಪಕ್ಷೀಯ ನಿರ್ಧಾರ ಕೈಗೊಂಡ ಮುಖ್ಯ ಚುನಾವಣಾ...

ವಾಹ್‌ EC! 13 ಕೋಟಿ ಜನರನ್ನ ಹೊರದಬ್ಬಿ, ಈಗ ಮರುನೋಂದಣಿಯ ಕಸರತ್ತು

ರಾಷ್ಟ್ರವ್ಯಾಪಿ 'ವಿಶೇಷ ತೀವ್ರ ಪರಿಷ್ಕರಣೆ' (SIR) ಎನ್ನುವ ಭೀಕರ ಆಪರೇಷನ್ ನಡೆಸಿ,...

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...