200 ಸ್ಥಾನ ಗೆದ್ದು ತೋರಿಸಿ: ಬಿಜೆಪಿಗೆ ಮಮತಾ ಸವಾಲು

Date:

ಈ ಬಾರಿಯ ಲೋಕಸಭಾ ಚುನಾವಣೆಗಳಲ್ಲಿ 400 ಕ್ಕೂ ಅಧಿಕ ಸ್ಥಾನ ಗೆಲ್ಲುವ ವಿಶ್ವಾಸ ಹೊಂದಿರುವ ಭಾರತೀಯ ಜನತಾ ಪಕ್ಷ 200 ಸ್ಥಾನ ಗೆದ್ದು ತೋರಿಸಲಿ ಸಾಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸವಾಲು ಹಾಕಿದ್ದಾರೆ.

ಬಿಜೆಪಿ 400 ದಾಟುತ್ತೇವೆ ಎನ್ನುತ್ತಿದ್ದಾರೆ. ಮೊದಲು ಅವರು ಇನ್ನೂರನ್ನು ದಾಟಲಿ. 2021ರ ವಿಧಾನಸಭೆ ಚುನಾವಣೆಯಲ್ಲಿ ಅವರು 200ಕ್ಕೂ ಹೆಚ್ಚು ಸ್ತಾನ ಗೆಲ್ಲುತ್ತೇವೆ ಎಂದು ಹೇಳಿಕೊಂಡಿದ್ದರು. ಗೆದ್ದಿದ್ದು ಕೇವಲ 77 ಕ್ಷೇತ್ರಗಳನ್ನು ಮಾತ್ರ. ಗೆದ್ದ 77 ಶಾಸಕರಲ್ಲಿ ಹಲವರು ಈಗ ನಮ್ಮೊಂದಿಗಿದ್ದಾರೆ ಎಂದು ಮಮತಾ ಅಣಕವಾಡಿದರು.

ಕೃಷ್ಣಾನಗರದಲ್ಲಿ ತೃಣಮೂಲ ಕಾಂಗ್ರೆಸ್‌ ಅಭ್ಯರ್ಥಿ ಮಹುವಾ ಮೊಯಿತ್ರಾ ಅವರ ಪರವಾಗಿ ಪ್ರಚಾರ ನಡೆಸಿದ ಮಮತಾ ಬ್ಯಾನರ್ಜಿ, ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ರಾಜ್ಯದಲ್ಲಿ ಅನುಷ್ಠಾನಗೊಳಿಸುವುದಿಲ್ಲ ಎಂದು ಮತ್ತೊಮ್ಮೆ ಘೋಷಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಚುನಾವಣಾ ಕಾಲದಲ್ಲಿ ಮೋದಿಯ ಬಾಂಡ್ ಭಯೋತ್ಪಾದನೆ

ಬಿಜೆಪಿ ಒಂದು ʻಜುಮ್ಲಾ ಪಕ್ಷ’ ಎಂದು ಬಣ್ಣಿಸಿದ ಅವರು ಬಿಜೆಪಿಯವರು ಸುಳ್ಳುಕೋರರು. ವಿದೇಶಿ ವಲಸೆಕೋರರಿಗೆ ಪೌರತ್ವ ನೀಡುವ ಹುನ್ನಾರ ಸಿಎಎ ಮೂಲಕ ನಡೆಸಲು ಹೊರಡಲಾಗಿದೆ. ಸಿಎಎ ಬೆನ್ನಲ್ಲೇ ಅವರು ಎನ್‌ ಆರ್‌ ಸಿಯನ್ನು ತರುತ್ತಾರೆ. ನಾವು ಸಿಎಎ ಆಗಲಿ ಎನ್‌ಆರ್‌ಸಿಯನ್ನಾಗಲಿ ಪಶ್ಚಿಮ ಬಂಗಾಳದಲ್ಲಿ ಜಾರಿಗೆ ತರಲು ಬಿಡುವುದಿಲ್ಲ ಎಂದರು.

ಮಥುವಾ ಸಮುದಾಯಕ್ಕೆ ಭರವಸೆ ನೀಡಿದ ಮಮತಾ ಬ್ಯಾನರ್ಜಿ, ನಿಮ್ಮ ಪೌರತ್ವವನ್ನು ಕಿತ್ತುಕೊಳ್ಳಲು ನಾನು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಮಥುವಾ ಸಮುದಾಯ ಪೂರ್ವ ಪಾಕಿಸ್ತಾನದಿಂದ ವಲಸೆ ಬಂದಿರುವ ಹಿಂದೂ ಧರ್ಮದ ದುರ್ಬಲ ವರ್ಗಕ್ಕೆ ಸೇರಿದೆ.

ಬಿಜೆಪಿ ವಿರುದ್ಧದ ಸಂಘರ್ಷಕ್ಕಾಗಿ ಅಭ್ಯರ್ಥಿ ಮಹುವಾ ಮೋಯಿತ್ರಾ ಅವರನ್ನು ಶ್ಲಾಘಿಸಿದ ಅವರು, ನೀವು ಮಹುವಾ ಅವರನ್ನು ಗೆಲ್ಲಿಸಿ ಕಳುಹಿಸಿದರೂ ಅವರನ್ನು ಲೋಕಸಭೆಯಿಂದ ಅನ್ಯಾಯವಾಗಿ ಉಚ್ಚಾಟಿಸಲಾಯಿತು. ಬಿಜೆಪಿ ವಿರುದ್ಧ ಯಾವ ಹಿಂಜರಿಕೆ ಇಲ್ಲದೆ ವಾಗ್ದಾಳಿ ನಡೆಸಿದ್ದಕ್ಕಾಗಿ ಹೀಗೆ ಮಾಡಲಾಯಿತು. ಈಗ ಅವರನ್ನು ಮತ್ತೊಮ್ಮೆ ಆಯ್ಕೆ ಮಾಡಿ ಕಳಿಸುವ ಜವಾಬ್ದಾರಿ ನಮ್ಮದು ಎಂದು ಮಮತಾ ಹೇಳಿದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನರೇಂದ್ರ ಮೋದಿಯೇ ಭಾರತದ ದೊಡ್ಡ ಸಮಸ್ಯೆ: ಎಂ ಕೆ ಸ್ಟಾಲಿನ್

ಪ್ರಸ್ತುತ ಭಾರತದ ದೊಡ್ಡ ಸಮಸ್ಯೆ ಪ್ರಧಾನಿ ನರೇಂದ್ರ ಮೋದಿ ಅವರೇ ಆಗಿದ್ದಾರೆ...

ಟಿಎಂಸಿ ಚುನಾವಣಾ ಪ್ರಣಾಳಿಕೆ ಬಿಡುಗಡೆ: ಸಿಎಎ, ಏಕರೂಪ ನಾಗರಿಕ ಸಂಹಿತೆ ನಿಷೇಧ

ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ) ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಒಕ್ಕೂಟ...

ಬಸ್‌ನ ಡ್ಯಾಶ್‌ಬೋರ್ಡ್‌ನಲ್ಲಿ ‘ಫ್ಯಾಮಿಲಿ ಫೋಟೋ’ ಇರಿಸಲು ಯುಪಿ ಚಾಲಕರಿಗೆ ಮನವಿ!

ರಸ್ತೆ ಅಪಘಾತಗಳ ಸಂಖ್ಯೆಯನ್ನು ಕಡಿಮೆ ಮಾಡಲು ಉತ್ತರ ಪ್ರದೇಶ ಸಾರಿಗೆ ಇಲಾಖೆ...

ಭಾರತದ ಯುವಕರದು ವಿರಾಟ್ ಕೊಹ್ಲಿ ರೀತಿಯ ಮನಸ್ಥಿತಿ: ರಘುರಾಂ ರಾಜನ್

ಬೃಹತ್ ಸಂಖ್ಯೆಯ ಭಾರತದ ಯುವಕರು ವಿದೇಶಗಳಿಗೆ ಹೋಗಿ ಅಲ್ಲಿ ತಮ್ಮ ಉದ್ಯಮವನ್ನು...