CUET-UG ಪರೀಕ್ಷೆ ಮುಂದೂಡಿಕೆ; ಪರಿಷ್ಕೃತ ವೇಳಾಪಟ್ಟಿ ಪ್ರಕಟ

Date:

ಮೇ 28ರಿಂದ ನಡೆಯಲಿದ್ದ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ (CUET) 2026 ಪರೀಕ್ಷೆಯನ್ನು ಬಕ್ರೀದ್ (ಈದ್ ಉಲ್ ಅಝಾ) ಕಾರಣ ಮುಂದೂಡಲಾಗಿದ್ದು, ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಬಿಡುಗಡೆ ಮಾಡಿದೆ. ಪರೀಕ್ಷೆಯನ್ನು ಈಗ ಮೇ 31, ಜೂನ್ 6 ಮತ್ತು ಜೂನ್ 7ರಂದು ನಡೆಸಲಾಗುವುದು ಎಂದು ತಿಳಿಸಿದೆ.

- Advertisement -

CUET (Common University Entrance Test) ಎಂದರೆ “ಸಾಮಾನ್ಯ ವಿಶ್ವವಿದ್ಯಾನಿಲಯ ಪ್ರವೇಶ ಪರೀಕ್ಷೆ”. ಇದು ದೇಶಾದ್ಯಂತ ಇರುವ ಕೇಂದ್ರ, ರಾಜ್ಯ ಮತ್ತು ಇತರ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಪದವಿ (UG) ಮತ್ತು ಸ್ನಾತಕೋತ್ತರ (PG) ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯು (NTA) ನಡೆಸುವ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ. ಈ ಪರೀಕ್ಷೆಗೆ ಒಟ್ಟು 15,68,866 ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಇದನ್ನು ಓದಿದ್ದೀರಾ? ಕೊನೆ ಕ್ಷಣದಲ್ಲಿ ಬೆಂಗಳೂರು ಕೃಷಿ ವಿವಿ ಪರೀಕ್ಷೆ ಮುಂದೂಡಿಕೆ; ಕೃಷಿ ಸಚಿವರ ವಿರುದ್ಧ ಆಕ್ರೋಶ

ಮೇ 31ರ ಪರೀಕ್ಷೆಯನ್ನು ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಲಭ್ಯವಾಗುವಂತೆ ಮಾಡಲಾಗಿದೆ ಎಂದು NTA ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ. ಪ್ರವೇಶ ಪತ್ರವನ್ನು ಅಧಿಕೃತ ವೆಬ್‌ಸೈಟ್ – cuet.nta.nic.in ನಿಂದ ಡೌನ್‌ಲೋಡ್ ಮಾಡಬಹುದು. ಜೂನ್ 6 ಮತ್ತು 7 ರಂದು ನಿಗದಿಯಾಗಿದ್ದ ಪರೀಕ್ಷೆಗಳಿಗೆ ಪ್ರವೇಶ ಪತ್ರಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಎನ್‌ಟಿಎ ತಿಳಿಸಿದೆ.

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ, ದೆಹಲಿ ವಿಶ್ವವಿದ್ಯಾಲಯ, ಬನಾರಸ್ ಹಿಂದೂ ವಿಶ್ವವಿದ್ಯಾಲಯ ಮತ್ತು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಂತಹ 49 ಕೇಂದ್ರೀಯ ವಿಶ್ವವಿದ್ಯಾಲಯಗಳು ಸೇರಿದಂತೆ 250ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳು CUET ಅಂಕಗಳನ್ನು ಸ್ವೀಕರಿಸುತ್ತವೆ. ಪಟ್ಟಿಯಲ್ಲಿ 36 ರಾಜ್ಯ ವಿಶ್ವವಿದ್ಯಾಲಯಗಳು, 129 ಖಾಸಗಿ ವಿಶ್ವವಿದ್ಯಾಲಯಗಳು, ಸರ್ಕಾರಿ ಸಂಸ್ಥೆಗಳೂ ಸೇರಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಇತಿಹಾಸ ಸುಮ್ಮನಿರುವವರನ್ನು ಕ್ಷಮಿಸುವುದಿಲ್ಲ: ಪ್ರಕಾಶ್ ರಾಜ್

ಇತಿಹಾಸ ತಪ್ಪು ಮಾಡಿದವರನ್ನು ಕ್ಷಮಿಸುತ್ತದೆ. ಆದರೆ ಸುಮ್ಮನಿರುವವರನ್ನು ಯಾವತ್ತೂ ಕ್ಷಮಿಸುವುದಿಲ್ಲ ಎಂದು...

ಉತ್ತರ ಕನ್ನಡ |ಮಂಗನ ಕಾಯಿಲೆ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಜಿಲ್ಲಾಧಿಕಾರಿ ಹರ್ಷಲ್ ಬೊಯರ್

ಜಿಲ್ಲೆಯಲ್ಲಿ ಮಂಗನ ಕಾಯಿಲೆ (ಕೆಎಫ್‌ಡಿ) ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು,...

ಸಮಾನತೆ, ಕಾಯಕ-ದಾಸೋಹದ ತತ್ವಗಳಿಗೆ ಸಾಕ್ಷಿಯಾದ ನೆಲ ಬಸವಕಲ್ಯಾಣ

ಬಸವಕಲ್ಯಾಣ ಸಮಾನತೆ, ಕಾಯಕ ಮತ್ತು ದಾಸೋಹದ ತತ್ವಗಳನ್ನು ಸಾರುವ ಪವಿತ್ರ ಭೂಮಿಯಾಗಿದ್ದು,...

ಕಾರವಾರ |ಅರಣ್ಯದಲ್ಲಿ ಅಕ್ರಮ ಮದ್ಯ ಸಾಗಾಟ : 64 ಸಾವಿರ ಮೌಲ್ಯದ ಮದ್ಯ ಜಪ್ತಿ

ಮೈಂಗಿಣಿ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಗೋವಾ ರಾಜ್ಯದ ಮದ್ಯ ಸಾಗಾಟ ಮಾಡುತ್ತಿದ್ದ...