ಆಹಾರಕ್ಕೆ ಮೂತ್ರ ಬೆರೆಸುತ್ತಿದ್ದ ವಿಕೃತ ಮಹಿಳೆ; ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಮಾಧ್ಯಮಗಳು

Date:

ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಹಿಳೆ, ಪಾತ್ರೆಯಲ್ಲಿ ಮೂತ್ರ ಮಾಡಿ, ಆಹಾರಕ್ಕೆ ಬೆರೆಸುತ್ತಿದ್ದ ಪ್ರಕರಣ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬೆಳಕಿಗೆ ಬಂದಿದೆ.

- Advertisement -

ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಪ್ರಕರಣಕ್ಕೆ ಕೆಲ ಮಾಧ್ಯಮಗಳು ಕೋಮು ಬಣ್ಣ ಬಳಿದಿದ್ದು, ಆಕೆ ಮುಸ್ಲಿಂ ಎಂದು ಬಿಂಬಿಸಿವೆ. ಇದೀಗ, ಆಕೆ ಮುಸ್ಲಿಂ ಅಲ್ಲವೆಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಮಹಿಳೆ ಉದ್ಯಮಿಯ ಮನೆಯಲ್ಲಿ ಕೆಲಸ ಮಾಡಲು ಆರಂಭಿಸಿದ ಬಳಿಕ, ಉದ್ಯಮಿಯ ಇಡೀ ಕುಟುಂಬವು ಯಕೃತ್ತಿಗೆ ಸಂಬಂಧಿಸಿದ ಕಾಯಿಲೆಗೆ ತುತ್ತಾಗಿದೆ. ಏನೋ ತಪ್ಪಾಗುತ್ತಿದೆ ಎಂದು ಅನುಮಾನಿಸಿದ್ದ ಕುಟುಂಬವು ಅಡುಗೆ ಮನೆಗೆ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದ್ದು, ಬಳಿಕ ಕೆಲಸದಾಕೆಯ ಕೃತ್ಯ ಬೆಳಕಿಗೆ ಬಂದಿದೆ.

ಸಂತ್ರಸ್ತ ಕುಟುಂಬವು ಗಾಜಿಯಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿ ಮಹಿಳೆ ರೀನಾಳನ್ನು ಮಂಗಳವಾರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಮಹಿಳೆ ಹಲವು ವರ್ಷಗಳಿಂದ ಈ ಕೃತ್ಯ ಎಸಗಿದ್ದಾಳೆ ಎಂದು ಕುಟುಂಬವು ಆರೋಪಿಸಿದೆ.

”ರಿಯಲ್ ಎಸ್ಟೇಟ್ ಉದ್ಯಮಿಯು ಕುಟುಂಬವು ಕ್ರಾಸಿಂಗ್ ರಿಪಬ್ಲಿಕ್ ಪ್ರದೇಶದ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದೆ. ಅವರ ಮನೆಯಲ್ಲಿ ಗಾಜಿಯಾಬಾದ್‌ನ ಶಾಂತಿನಗರ ನಿವಾಸಿ ರೀನಾ ಸುಮಾರು 8 ವರ್ಷಗಳಿಂದ ಕೆಲಸ ಮಾಡುತ್ತಿದ್ದಳು. ಆಕೆ ಉದ್ಯಮಿಯ ಮನೆಯಲ್ಲಿ ಅಡುಗೆ ಮಾಡುವ, ಪಾತ್ರೆ ತೊಳೆಯುವ ಕೆಲಸ ಮಾಡುತ್ತಿದ್ದಳು” ಎಂದು ಪೊಲೀಸರು ತಿಳಿಸಿದ್ದಾರೆ.

ದೂರುದಾರರ ಪ್ರಕಾರ, ಕೆಲವು ತಿಂಗಳುಗಳಿಂದ ಅವರ ಕುಟುಂಬದ ಸದಸ್ಯರು ಯಕೃತ್ತಿನ ಕಾಯಿಲೆಯಿಂದ ಬಳಲುತ್ತಿದ್ದರು. ಆರಂಭದಲ್ಲಿ ಸೋಂಕು ತಗುಲಿದೆ ಎಂದು ಭಾವಿಸಿ ವೈದ್ಯರನ್ನು ಸಂಪರ್ಕಿಸಿದ್ದರು. ಆದರೆ, ಶಾಶ್ವತ ಪರಿಹಾರ ದೊರೆತಿರಲಿಲ್ಲ. ಒಬ್ಬರ ನಂತರ ಮತ್ತೊಬ್ಬರಂತೆ ಇಡೀ ಕುಟುಂಬವೇ ಯಕೃತ್ತಿನ ಕಾಯಿಲೆಗೆ ತುತ್ತಾದಾಗ, ಕುಟುಂಬವು ಏನೋ ಅಚಾತುರ್ಯ ನಡೆಯುತ್ತಿದೆ ಎಂದು ಅನುಮಾನಿಸಿದೆ. ಅಡುಗೆ ಕೋಣೆಗೆ ಸಿಸಿಟಿವಿ ಕ್ಯಾಮೆರಾವನ್ನು ಅಳವಡಿಸಿದೆ. ಬಳಿಕ, ಆರೋಪಿ ರೀನಾ ಪಾತ್ರೆಯಲ್ಲಿ ಮೂತ್ರ ಮಾಡಿ, ಅದರಲ್ಲಿ ಗೋಧಿ ಹಿಟ್ಟು ಕಲಸಿ ಚಪಾತಿ ಮಾಡಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.

ಆರೋಪಿ ರೀನಾಳನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಆಕೆ ಯಾವ ಕಾರಣಕ್ಕೆ ಇಂತಹ ಕೃತ್ಯ ಎಸಗುತ್ತಿದ್ದಳು ಮತ್ತು ಎಷ್ಟು ದಿನಗಳಿಂದ ಈ ಕೃತ್ಯ ಎಸಗಿದ್ದಾಳೆ ಎಂಬ ಬಗ್ಗೆ ಇನ್ನೂ ಬಾಯಿಬಿಟ್ಟಿಲ್ಲ.

ಇನ್ನು, ಈ ಪ್ರಕರಣಕ್ಕೆ ಕೆಲ ಮಾಧ್ಯಮಗಳು ಕೋಮು ಬಣ್ಣ ಬಳಿಯಲು ಯತ್ನಿಸಿವೆ. ಆರೋಪಿ ರೀನಾ ಹಿಂದು ಮಹಿಳೆಯೇ ಆಗಿದ್ದರೂ, ಆಕೆಯನ್ನು ಮುಸ್ಲಿಂ ಎಂದು ಬಿಂಬಿಸಿವೆ. ಆಕೆ ತಲೆಗೆ ಬಟ್ಟೆ ಸುತ್ತಿಕೊಂಡಿರುವ ಕಾರಣ, ಆಕೆ ಹಿಜಾಬ್ ಧರಿಸಿದ್ಧಾಳೆ. ಆಕೆ ಮುಸ್ಲಿಂ ಎಂದು ಮಾಧ್ಯಮಗಳು ವರದಿ ಮಾಡಿವೆ. ಆ ಮೂಲಕ ಪ್ರಕರಣಕ್ಕೆ ಕೋಮು ಆಯಾಮ ನೀಡಿವೆ. ಕೋಮು ದ್ವೇಷ ಪ್ರಚೋದಿಸಲು ಯತ್ನಿಸಿವೆ. ಆದರೆ, ಆಕೆ ಮುಸ್ಲಿಂ ಅಲ್ಲ, ಹಿಂದು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

ದೇಶದ ಸುದ್ದಿ ಮಾಧ್ಯಮಗಳ ಮಾಲೀಕರು ಮತ್ತು ಪತ್ರಕರ್ತರು ಶೇ. 80 ಭಾಗ ಹಿಂದೂಗಳು. ಅದರಲ್ಲೂ ಈಗ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೇರಿದ ನಂತರ, ಅವರಲ್ಲಿ ಹೆಚ್ಚಿನವರು ಗೋದಿ ಮೀಡಿಯಾ ಆಗಿ ಪರಿವರ್ತನೆ ಹೊಂದಿದ್ದಾರೆ. ಹಾಗಾಗಿ ಅವರು ಪ್ರತಿಯೊಂದು ಸುದ್ದಿಯಲ್ಲೂ ಮುಸ್ಲಿಂ ಹುಡುಕುತ್ತಾರೆ. ಸಿಗದಿದ್ದರೆ ಅದನ್ನೇ ತಿರುಚುತ್ತಾರೆ. ಅಂಥದ್ದೇ ಒಂದು ಉತ್ತರ ಪ್ರದೇಶದ ರೀನಾ ಕೇಸ್. ಸದ್ಯ ಸೋಷಿಯಲ್ ಮೀಡಿಯಾಗಳ ಮೂಲಕ ಸತ್ಯ ಹೊರಬಂದಿದೆ. ಪೊಲೀಸರೂ ಕ್ರಮ ಕೈಗೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ...

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...