ಉತ್ತರ ಪ್ರದೇಶ | ಸಿಬಿಎಸ್‌ಇ ವಿದ್ಯಾರ್ಥಿಗಳಿಗೆ ಮೊಘಲ್‌ ಅರಸರ ಕುರಿತ ಅಧ್ಯಯನ ಕಡಿತ

Date:

  • ಪ್ರಸಕ್ತ ಶೈಕ್ಷಣಿಕ ವರ್ಷದಿಂದ ನೂತನ ಸಿಬಿಎಸ್ಇ ಪಠ್ಯಕ್ರಮ ಅನ್ವಯ
  • 11ನೇ ತರಗತಿಯ ಇತಿಹಾಸ ಪುಸ್ತಕದಿಂದಲೂ ಕೆಲವು ಅಧ್ಯಾಯ ಕಡಿತ

ಸಿಬಿಎಸ್ಇ 12ನೇ ತರಗತಿ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ಮೊಘಲ್ ಸಾಮ್ರಾಜ್ಯದ ಕುರಿತ ಪಠ್ಯ ಇರುವುದಿಲ್ಲ.

ಕೇಂದ್ರ ಹಾಗೂ ರಾಜ್ಯದ ಶಾಲಾ ಶಿಕ್ಷಣದ ಉನ್ನತ ಸಲಹಾ ಸಂಸ್ಥೆಯಾದ ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ತು (ಎನ್‌ಸಿಇಆರ್‌ಟಿ) ರಾಜ್ಯದ 12ನೇ ತರಗತಿಯ ಪಠ್ಯಕ್ರಮವನ್ನು ಪರಿಷ್ಕರಿಸಿದೆ.

ಈ ಮುನ್ನ 12ನೇ ತರಗತಿ ವಿದ್ಯಾರ್ಥಿಗಳಿಗೆ ಇದ್ದ ಸಿಬಿಎಸ್ಇ ಮಧ್ಯಕಾಲೀನ ಇತಿಹಾಸ ಪಠ್ಯಪುಸ್ತಕಗಳಲ್ಲಿನ ‘ರಾಜರು ಮತ್ತು ಪ್ರಮುಖ ಘಟನಾವಳಿಗಳ ಕಾಲಾನುಕ್ರಮ’ ಹಾಗೂ ‘ಮೊಘಲ್ ನ್ಯಾಯಾಲಯಗಳು’ ಅಧ್ಯಾಯಗಳನ್ನುಎನ್‌ಸಿಇಆರ್‌ಟಿ ಕೈಬಿಟ್ಟಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ಮೊಘಲ್ ಸಾಮ್ರಾಜ್ಯದ ಕುರಿತು ಮಾಹಿತಿ ಒದಗಿಸುತ್ತಿದ್ದ ಎನ್‌ಸಿಇಆರ್‌ಟಿ ಪಠ್ಯಕ್ರಮವನ್ನು ಅನುಸರಿಸುವ ಉತ್ತರ ಪ್ರದೇಶದ ಶಿಕ್ಷಣ ಮಂಡಳಿಯು, ಮುಂಬರುವ ಶೈಕ್ಷಣಿಕ ವರ್ಷದಿಂದ ಸಿಬಿಎಸ್‌ಇ ಪರಿಷ್ಕೃತ ಪಠ್ಯಕ್ರಮವನ್ನು ಅನುಸರಿಸಲು ನಿರ್ಧರಿಸಿದೆ.

ಮೊಘಲ್ ನ್ಯಾಯಾಲಯಕ್ಕೆ ಸಂಬಂಧಿಸಿದ ಅಧ್ಯಾಯಗಳು, ಅಕ್ಬರ್‌ನಾಮ, ಬಾದಶಹಾನಾಮ ಮತ್ತು ಇತರರ ಅಧ್ಯಾಯಗಳನ್ನು ಕೈಬಿಡಲಾಗಿದೆ ಎಂದು ಉತ್ತರ ಪ್ರದೇಶ ಶಿಕ್ಷಣ ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನೂತನ ಪಠ್ಯಕ್ರಮ ಪ್ರಸಕ್ತ 2023-24ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗಲಿದೆ ಎಂದು ಎನ್‌ಸಿಇಆರ್‌ಟಿ ಹಿರಿಯ ಅಧಿಕಾರಿ ಹೇಳಿದ್ದಾರೆ.

“ಎನ್‌ಸಿಇಆರ್‌ಟಿ ಪಠ್ಯಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ನಾವು ಬೋಧಿಸುತ್ತೇವೆ. ಪರಿಷ್ಕೃತ ಆವೃತ್ತಿಯಲ್ಲಿ ಯಾವ ಮಾಹಿತಿ ಇದೆಯೋ ಅದನ್ನು ವಿದ್ಯಾರ್ಥಿಗಳಿಗೆ ಕಲಿಸುತ್ತೇವೆ” ಎಂದು ಉಪ ಮುಖ್ಯಮಂತ್ರಿ ಬ್ರಜೇಶ್‌ ಪಾಠಕ್‌ ಹೇಳಿದ್ದಾರೆ.

11ನೇ ತರಗತಿಯ ಸಿಬಿಎಸ್‌ಇ ಇತಿಹಾಸ ಪುಸ್ತಕದಿಂದ ‘ರೈಸ್ ಆಫ್ ಇಸ್ಲಾಂ’ ಮತ್ತು ‘ಸಾಂಸ್ಕೃತಿಕ ಸಂಘರ್ಷ’ ಹೆಸರಿನ ಅಧ್ಯಾಯಗಳನ್ನು ತೆಗೆದುಹಾಕಲಾಗಿದೆ. ಅದೇ ರೀತಿ ‘ಶೀತಲ ಸಮರ’ದ ಅಧ್ಯಾಯಗಳು ಮತ್ತು ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಪಾತ್ರದ ಕೆಲವು ಅಧ್ಯಾಯಗಳನ್ನು ತೆಗೆದುಹಾಕಲಾಗಿದೆ ಎಂದು ವರದಿಯಾಗಿದೆ.

ಈ ಸುದ್ದಿ ಓದಿದ್ದೀರಾ? ಮೋದಿ ಉಪನಾಮ ಪ್ರಕರಣ | ಸಂಸದರಾಗಿ ಅನರ್ಹಗೊಳಿಸುವ ಶಿಕ್ಷೆ ವಿಧಿಸಲಾಗಿದೆ: ರಾಹುಲ್ ಗಾಂಧಿ

ಪಠ್ಯಕ್ರಮದ ಪರಿಷ್ಕರಣೆಯನ್ನು ಸ್ವಾಗತಿಸಿರುವ ಬಿಜೆಪಿ ನಾಯಕರು, ಎಡಪಂಥೀಯ ಮತ್ತು ಕಾಂಗ್ರೆಸ್ ಒಲವು ಹೊಂದಿರುವ ಲೇಖಕರು ದೇಶದ ಇತಿಹಾಸ ತಿರುಚಿದ್ದಾರೆ. ಹಾಗಾಗಿ ಅದನ್ನು ಸರಿಪಡಿಸಬೇಕಾಗಿದೆ ಎಂದು ಹೇಳಿದ್ದಾರೆ.

ಪ್ರತಿಪಕ್ಷಗಳು ಸಿಬಿಎಸ್ಇ ಪಠ್ಯಕ್ರಮದ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿವೆ. ಮೊಘಲ್ ರಾಜರಿಗೆ ಸಂಬಂಧಿಸಿದ ಅಧ್ಯಾಯಗಳನ್ನು ತೆಗೆದುಹಾಕುವುದರಿಂದ ಇತಿಹಾಸ ಬದಲಾಗುವುದಿಲ್ಲ ಸಮಾಜವಾದಿ ಪಕ್ಷದ ನಾಯಕರು ಹೇಳಿದ್ದಾರೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಿಚಾಂಗ್ ಚಂಡ ಮಾರುತ | ಆಂಧ್ರದಲ್ಲಿ 40 ಲಕ್ಷ ಜನರಿಗೆ ತೊಂದರೆ, ಕನಿಷ್ಠ 17 ಮಂದಿ ಸಾವು

ಮಿಚಾಂಗ್‌ ಚಂಡಮಾರುತವು ಮಂಗಳವಾರ ಆಂಧ್ರಪ್ರದೇಶದ ಕರಾವಳಿ ದಾಟುತ್ತಿದ್ದಂತೆ ದುರ್ಬಲತೆ ಕಂಡುಬಂದಿದೆ. 770...

ಮಿಚಾಂಗ್ ಚಂಡಮಾರುತ: ₹5,060 ಕೋಟಿ ಪರಿಹಾರಕ್ಕೆ ಪ್ರಧಾನಿಗೆ ಪತ್ರ ಬರೆದ ತಮಿಳುನಾಡು ಸಿಎಂ

ತಮಿಳುನಾಡಿನಲ್ಲಿ ಮಿಚಾಂಗ್ ಚಂಡಮಾರುತದಿಂದ ಉಂಟಾದ ಹಾನಿಯ ನಡುವೆ ಮುಖ್ಯಮಂತ್ರಿ ಎಂ ಕೆ...

ಕರ್ಣಿ ಸೇನಾ ಮುಖ್ಯಸ್ಥನ ಹತ್ಯೆಯ ಹೊಣೆ ಹೊತ್ತ ಗೋಲ್ಡಿ ಬ್ರಾರ್ ಗ್ಯಾಂಗ್; ರಾಜಸ್ಥಾನ ಬಂದ್‌ಗೆ ಕರೆ

ಬಲಪಂಥೀಯ ರಜಪೂತ ಕರ್ಣಿ ಸೇನೆಯ ಅಧ್ಯಕ್ಷ ಸುಖ್‌ದೇವ್ ಸಿಂಗ್ ಗೊಗಮೆಡಿಯನ್ನು ಭೀಕರವಾಗಿ...

ತೆಲಂಗಾಣ: ಎಬಿವಿಪಿಯಿಂದ ಫೈರ್ ಬ್ರಾಂಡ್ ನಾಯಕನವರೆಗೆ; ರೇವಂತ್ ರೆಡ್ಡಿ ನಡೆದುಬಂದ ಹಾದಿ

ಮುಖ್ಯಮಂತ್ರಿ ಕೆಸಿಆರ್ ಸಭೆಗೆ ಅಡ್ಡಿಪಡಿಸಬಹುದು ಎನ್ನುವ ಕಾರಣಕ್ಕೆ 2018ರ ಡಿಸೆಂಬರ್ ನಾಲ್ಕರಂದು...