ಮರಗಳನ್ನು ಕಡಿಯುವುದು ನರಹತ್ಯೆಗಿಂತಲೂ ಭೀಕರ: ಸುಪ್ರೀಂ ಕೋರ್ಟ್

Date:

ಭಾರಿ ಸಂಖ್ಯೆಯಲ್ಲಿ ಮರಕಡಿಯುವುದು ನರಹತ್ಯೆಗಿಂತಲೂ ಭೀಕರ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಪರಿಸರಕ್ಕೆ ಹಾನಿ ಮಾಡುವವರ ವಿರುದ್ಧ ಯಾವುದೇ ದಯೆ ತೋರಿಸಬಾರದು ಎಂದು ಖಂಡತುಂಡವಾಗಿ ಹೇಳಿರುವ ಕೋರ್ಟ್, ಅಕ್ರಮವಾಗಿ ಕಡಿದ ಪ್ರತಿ ಮರಕ್ಕೆ ಒಂದು ಲಕ್ಷ ರೂಪಾಯಿಗಳಂತೆ ದಂಡ ವಿಧಿಸಿದೆ.

- Advertisement -

ಸಂಬಂಧಪಟ್ಟ ಅಧಿಕಾರಿಗಳ ಅನುಮತಿ ಇಲ್ಲದೇ ಅಕ್ರಮವಾಗಿ ಮರ ಕಡಿಯುವ ದಂಧೆಗೆ ಸ್ಪಷ್ಟ ಸಂದೇಶವನ್ನು ಸುಪ್ರೀಂಕೋರ್ಟ್‌ನ ಈ ತೀರ್ಪು ರವಾನಿಸಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್.ಓಕಾ ಮತ್ತು ಉಜ್ಜಲ್ ಭೂಯಾನ್ ಅವರನ್ನು ಒಳಗೊಂಡ ನ್ಯಾಯಪೀಠ, ತಾಜ್ ಟ್ರಪೇಝಿಯಂ ವಲಯದಲ್ಲಿ 454 ಮರಗಳನ್ನು ಅಕ್ರಮವಾಗಿ ಕಡಿದ ವ್ಯಕ್ತಿಯ ಮೇಲ್ಮನವಿಯನ್ನು ತಿರಸ್ಕರಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಯಾಂಡ್ ಬೆಂಗಳೂರು: ಡಿಜಿಟಲ್ ಆರ್ಥಿಕತೆಯಲ್ಲಿ ರಾಯಚೂರಿಗೆ ಸಿಗುವುದೇ ಪ್ರತ್ಯೇಕ...

ಕರ್ನಾಟಕದ ಅಭಿವೃದ್ಧಿ ಬೆಂಗಳೂರಿಗೆ ಮಾತ್ರ ಸೀಮಿತವಾಗದೆ ರಾಜ್ಯದ ವಿವಿಧ ನಗರಗಳಿಗೂ ತಲುಪಬೇಕು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರದ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (KDEM) ‘Beyond Bengaluru’ ಯೋಜನೆಯನ್ನು ಜಾರಿಗೊಳಿಸಿದೆ. ಐಟಿ, ಐಟಿಇಎಸ್,...

ಸ್ಥಳೀಯ ಸಂಸ್ಥೆ ಚುನಾವಣೆ: ಆಕಾಂಕ್ಷಿಗಳ ಲೆಕ್ಕಾಚಾರ ತಲೆಕೆಳಗು, ಬಂಡಾಯದ...

ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಕರಡು ಮೀಸಲಾತಿ ಪ್ರಕಟವಾಗುತ್ತಿದ್ದಂತೆ ರಾಯಚೂರು ಜಿಲ್ಲೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣಾ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಮೀಸಲಾತಿ ಬದಲಾವಣೆಯಿಂದ ಕೆಲವರ ಸ್ಪರ್ಧೆಯ ಲೆಕ್ಕಾಚಾರ ತಲೆಕೆಳಗಾಗಿದ್ದರೆ, ಮತ್ತೊಂದೆಡೆ...

ಹೊಸ ಓದು | ನಟರಾಜ್ ಹುಳಿಯಾರ್ ಅವರ ‘ಡಾಕ್ಟರ್...

ಇತ್ತೀಚೆಗೆ ಲೋಕಾರ್ಪಣೆಗೊಂಡ ನಟರಾಜ್ ಹುಳಿಯಾರ್ ಅವರ 'ಡಾಕ್ಟರ್ ಸಾಹೇಬ್- ರಾಮಮನೋಹರ ಲೋಹಿಯಾ ಜೀವನಯಾನ' ಕೃತಿಯಿಂದ ಆಯ್ದ 'ಲೋಹಿಯಾ ಮತ್ತು ಕರ್ನಾಟಕ' ಅಧ್ಯಾಯ, ಭಾನುವಾರದ ವಿರಾಮದ ಓದಿಗಾಗಿ... 'ಮಾರ್ಕ್ಸ್, ಗಾಂಧಿ ಅಂಡ್ ಸೋಷಲಿಸಂ' ಪುಸ್ತಕಕ್ಕೆ ಮುನ್ನುಡಿ...

ಪರಿಸರ ವಿಚಾರದಲ್ಲಿ ಕೋರ್ಟ್‌ಗೆ ಸಹಕರಿಸಿದ ಅಮಿಕಸ್ ಕ್ಯೂರಿ, ಹಿರಿಯ ವಕೀಲ ಎಡಿಎನ್ ರಾವ್ ಅವರು ಈ ಸಂಬಂಧ ನೀಡಿ ಸಲಹೆಗಳನ್ನು ನ್ಯಾಯಪೀಠ ಸ್ವೀಕರಿಸಿದೆ. ಕಾನೂನು ಮತ್ತು ಮರಗಳನ್ನು ಹಗುರವಾಗಿ ಪರಿಗಣಿಸಬಾರದು ಎನ್ನುವ ಸ್ಪಷ್ಟ ಸಂದೇಶ ರವಾನಿಸಬೇಕು ಎಂದು ರಾವ್ ಸಲಹೆ ನೀಡಿದ್ದರು.

ಇಂತಹ ಪ್ರಕರಣಗಳಲ್ಲಿ ಎಷ್ಟು ದಂಡ ವಿಧಿಸಬೇಕು ಎಂಬ ಬಗ್ಗೆ ಸುಪ್ರೀಂಕೋರ್ಟ್ ಈ ತೀರ್ಪಿನ ಮೂಲಕ ಮಾನದಂಡ ನಿಗದಿಪಡಿಸಿದಂತಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶಾಸಕರ ವೇತನ ಹೆಚ್ಚಳ: ಇವರಿಗೆ ಹೇಳೋರು ಕೇಳೋರು ಯಾರೂ ಇಲ್ಲವೇ?

“ಪರಿಸರ ಪ್ರಕರಣಲ್ಲಿ ಯಾವುದೇ ದಯೆ ತೋರಿಸಬಾರದು. ದೊಡ್ಡ ಸಂಖ್ಯೆಯ ಮರಗಳನ್ನು ಕಡಿಯುವುದು ನರಹತ್ಯೆಗಿಂತ ಕೆಟ್ಟದು. ಇಂಥ ಮರವನ್ನು ಮತ್ತೆ ಬೆಳೆಸಲು ಅಥಾ 454 ಮರಗಳ ಹಸಿರು ಹೊದಿಕೆಯನ್ನು ಮರು ಸೃಷ್ಟಿಸಲು ಕನಿಷ್ಠ 100 ವರ್ಷ ಬೇಕು. 2015ರಲ್ಲಿ ನ್ಯಾಯಾಲಯ ನಿಷೇಧ ವಿಧಿಸಿದ್ದರೂ, ಕೋರ್ಟ್‌ನ ಅನುಮತಿ ಇಲ್ಲದೇ ಇವುಗಳನ್ನು ಕಡಿಯಲಾಗಿದೆ” ಎಂದು ನ್ಯಾಯಪೀಠ ಆಕ್ಷೇಪಿಸಿದೆ.

ಕೇಂದ್ರದ ಸಶಕ್ತ ಸಮಿತಿಯ ಶಿಫಾರಸ್ಸಿನಂತೆ ಶಿವಶಂಕರ್ ಅಗರ್‌ವಾಲ್‌ ಎಂಬ ಆರೋಪಿಗೆ ಪ್ರತಿ ಮರಕ್ಕೆ ಒಂದು ಲಕ್ಷ ರೂಪಾಯಿಗಳಂತೆ ದಂಡ ವಿಧಿಸಲಾಗಿದೆ. “ನನ್ನ ಕಕ್ಷಿದಾರ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆ ಯಾಚಿಸಿದ್ದಾರೆ ಹಾಗೂ ದಂಡವನ್ನು ಕಡಿಮೆ ಮಾಡುವಂತೆ ಕೋರಿದ್ದಾರೆ” ಎಂದು ಅರ್ಜಿದಾರರ ಪರ ವಕೀಲ ಮುಕುಲ್ ರೋಹಟ್ಗಿ ಹೇಳಿದರು. ಆದರೆ ಇದಕ್ಕೆ ಕೋರ್ಟ್ ನಿರಾಕರಿಸಿದ್ದು, ಅಕ್ಕಪಕ್ಕದ ಪ್ರದೇಶಗಳಲ್ಲಿ ಮರಗಳನ್ನು ಬೆಳೆಸಲು ಅವಕಾಶ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಷ್ಯಾದ ಇಂಧನದಿಂದ ಭಾರತ ದೂರ ಸರಿಯುವುದು ಅಸಾಧ್ಯ: ಅಮೆರಿಕ

ರಷ್ಯಾದ ತೈಲ ಖರೀದಿಸುವ ರಾಷ್ಟ್ರಗಳ ಮೇಲಿನ ದಿಗ್ಬಂಧನ ಮತ್ತು ಆಮದು ಸುಂಕದ...

ಫುಟ್‌ಪಾತ್ ನಿರ್ಮಿಸದಿದ್ರೆ, ನಾವೇ ಧರಣಿ‌ ಕೂರ್ತೀವಿ; BJP ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್!

ದೆಹಲಿ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಸಮೀಪದ ಮಥುರಾ ರಸ್ತೆಯಲ್ಲಿ ಪಾದಚಾರಿಗಳು...

ಶಾಲೆಗಳಲ್ಲಿ ಋತುಚಕ್ರ ನೈರ್ಮಲ್ಯ ನೀತಿ ಜಾರಿ: ಆದೇಶ ಪಾಲಿಸದ ರಾಜ್ಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ

ಶಾಲೆಗಳಲ್ಲಿ ಓದುವ ಹೆಣ್ಣುಮಕ್ಕಳಿಗೆ ಮೂಲಭೂತ ಋತುಚಕ್ರ ನೈರ್ಮಲ್ಯ ಸೌಲಭ್ಯಗಳು ಮತ್ತು ಉಚಿತ...