ಉತ್ತರ ಪತ್ರಿಕೆ ವಿವಾದದ ಬೆನ್ನಲ್ಲೇ ಸೈಬರ್ ದಾಳಿ: ಯಾವುದೇ ಡೇಟಾ ಕಳವಾಗಿಲ್ಲ ಎಂದ CBSC

Date:

ಕೇಂದ್ರ ಪ್ರೌಢಶಿಕ್ಷಣ ಮಂಡಳಿಯ (CBSC) ಆನ್‌ಲೈನ್ ಪೋರ್ಟಲ್ ಮೇಲೆ ಕಳೆದ ಮೂರು ದಿನಗಳಿಂದ ನಿರಂತರ ಸೈಬರ್ ದಾಳಿಗಳು ನಡೆದಿದ್ದರೂ, ಯಾವುದೇ ರೀತಿಯ ‘ಡೇಟಾ ಸೋರಿಕೆ’ಯಾಗಿಲ್ಲ (ಡೇಟಾ ಬ್ರೀಚ್) ಎಂದು ಮಂಡಳಿಯು ಸ್ಪಷ್ಟಪಡಿಸಿದೆ. ಈ ಸಂಬಂಧ ದೆಹಲಿ ಪೊಲೀಸರ ‘ಇಂಟೆಲಿಜೆನ್ಸ್ ಫ್ಯೂಷನ್ ಆ್ಯಂಡ್ ಸ್ಟ್ರಾಟೆಜಿಕ್ ಆಪರೇಷನ್ಸ್’ (ಐಎಫ್‌ಎಸ್‌ಒ- IFSO) ಘಟಕಕ್ಕೆ ಸಿಬಿಎಸ್‌ಇ ಅಧಿಕೃತವಾಗಿ ದೂರು ದಾಖಲಿಸಿದೆ.

- Advertisement -

12ನೇ ತರಗತಿ ಬೋರ್ಡ್ ಪರೀಕ್ಷೆಯ ಅಭ್ಯರ್ಥಿಗಳ ಉತ್ತರ ಪತ್ರಿಕೆಗಳ ಪರಿಶೀಲನೆ ಹಾಗೂ ಮರುಮೌಲ್ಯಮಾಪನದಂತಹ ಸೇವೆಗಳಿಗಾಗಿ ಜೂನ್ 2ರಂದು ನೂತನ ಪೋರ್ಟಲ್ ಅನ್ನು ಆರಂಭಿಸಲಾಗಿತ್ತು. ಅಂದಿನಿಂದಲೇ ದೇಶ ಮತ್ತು ವಿದೇಶಗಳ ವಿವಿಧ ಐಪಿ (IP) ವಿಳಾಸಗಳ ಮೂಲಕ ಪೋರ್ಟಲ್ ಮೇಲೆ ಭಾರಿ ಪ್ರಮಾಣದ ದುರುದ್ದೇಶಪೂರಿತ ಹಾಗೂ ಸಂಘಟಿತ ಸೈಬರ್ ದಾಳಿಗಳು ನಡೆದಿವೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದ್ನು ಓದಿದ್ದೀರಾ? ಬಾಂಬ್, ಬೆದರಿಕೆಗಳಿಗೆ ಬಗ್ಗದ ಜ್ಞಾನದೀವಿಗೆ: ಬಡವರ ಪಾಲಿನ ಅಕ್ಷರ ಸಂತ ‘ಖಾನ್ ಸರ್’

ಆದಾಗ್ಯೂ, “ಈ ಸೈಬರ್ ದಾಳಿಯ ಯತ್ನಗಳ ನಡುವೆಯೂ ಮಂಡಳಿಯ ಡೇಟಾಬೇಸ್ ಸಂಪೂರ್ಣ ಸುರಕ್ಷಿತವಾಗಿದ್ದು, ಯಾವುದೇ ರೀತಿಯ ಅನಧಿಕೃತ ಪ್ರವೇಶ ಅಥವಾ ಮಾಹಿತಿ ಕಳವು ಆಗಿಲ್ಲ” ಎಂದು ಸಿಬಿಎಸ್‌ಇ ತಿಳಿಸಿದೆ. ದೆಹಲಿ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಲ್ಲೂ ಮಾಹಿತಿ ಸೋರಿಕೆಗೆ ಸಂಬಂಧಿಸಿದ ಯಾವುದೇ ಪುರಾವೆಗಳು ಪತ್ತೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಮಂಡಳಿಯು ಒದಗಿಸಿರುವ ಸ್ಕ್ಯಾನ್ ಮಾಡಿದ ಉತ್ತರ ಪತ್ರಿಕೆಗಳಲ್ಲಿರುವ ಕೈಬರಹ ತಮ್ಮದಲ್ಲ ಎಂದು ಇತ್ತೀಚೆಗಷ್ಟೇ 12ನೇ ತರಗತಿಯ ಹಲವು ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದರು. ಇದು ‘ಆನ್‌ಲೈನ್ ಸ್ಕ್ಯಾನ್ಡ್ ಮಾರ್ಕ್‌ಶೀಟ್’ (OSM) ವ್ಯವಸ್ಥೆಯ ವಿಶ್ವಾಸಾರ್ಹತೆಯ ಬಗ್ಗೆ ಆತಂಕ ಮೂಡಿಸಿತ್ತು ಹಾಗೂ ತೀವ್ರ ಟೀಕೆಗೆ ಗುರಿಯಾಗಿತ್ತು. ಈ ವಿವಾದದ ಬೆನ್ನಲ್ಲೇ, ಒಎಸ್‌ಎಂ (OSM) ವ್ಯವಸ್ಥೆಗೆ ಸಂಬಂಧಿಸಿದಂತೆ ಸಿಬಿಎಸ್‌ಇ ಅಳವಡಿಸಿಕೊಂಡಿರುವ ಸೇವೆಗಳ ಖರೀದಿ ಪ್ರಕ್ರಿಯೆಯನ್ನು ಕೂಲಂಕಷವಾಗಿ ಪರಿಶೀಲಿಸಲು ಕೇಂದ್ರ ಕ್ಯಾಬಿನೆಟ್ ಸಚಿವಾಲಯವು ಇದೀಗ ಏಕಸದಸ್ಯ ಸಮಿತಿಯನ್ನು ರಚಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ನಕಲಿ ವೈದ್ಯರಿಗೆ ಔಷಧ ಪೂರೈಕೆ : 7 ಮೆಡಿಕಲ್‌ಗಳ ಪರವಾನಗಿ ಅಮಾನತು

ನಕಲಿ ವೈದ್ಯರಿಗೆ ಔಷಧಗಳನ್ನು ಸರಬರಾಜು ಮಾಡಿದ ಆರೋಪದ ಹಿನ್ನೆಲೆ ಜಿಲ್ಲೆಯ ಏಳು...

ʼತ್ರಿವರ್ಣ ಧ್ವಜ ಹಾರಿಸಲು ಅನುಮತಿ ಬೇಕಿಲ್ಲʼ; ಪೊಲೀಸ್ ನೋಟಿಸ್ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ನೇಹಾ ಬೋರಾ

ರಾಷ್ಟ್ರಧ್ವಜ ಹಾರಿಸಲು ಯಾರ ಅನುಮತಿಯೂ ಅಗತ್ಯವಿಲ್ಲ ಎಂದು ವಾದಿಸಿರುವ ಎಐಎಸ್‌ಎ (AISA)...

ಬೀದರ್‌ | ಕನಿಷ್ಠ ವೇತನ ಪಾವತಿಗೆ ಅರಣ್ಯ ಇಲಾಖೆ ದಿನಗೂಲಿ ನೌಕರರ ಮನವಿ

ಔರಾದ ತಾಲ್ಲೂಕಿನ ಸಾಮಾಜಿಕ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೀಕ್ಷಕರು ಹಾಗೂ ದಿನಗೂಲಿ...

ಬೀದರ್‌ | ಅದ್ದೂರಿ ಕನ್ನಡ ರಾಜ್ಯೋತ್ಸವ ಆಚರಿಸೋಣ : ಡಿಸಿ ಶಿಲ್ಪಾ ಶರ್ಮಾ

ಬೀದರ್ ಜಿಲ್ಲೆಯಲ್ಲಿ ನವೆಂಬರ್ 1ರಂದು ಕನ್ನಡ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಹಾಗೂ ಆಕರ್ಷಕವಾಗಿ...