ಡಾನಾ ಚಂಡಮಾರುತ | ಒಡಿಶಾದಲ್ಲಿ ಭಾರೀ ಮಳೆ; ಪಶ್ಚಿಮ ಬಂಗಾಳದಲ್ಲಿ ಓರ್ವ ಸಾವು

Date:

Advertisements

ಡಾನಾ ಚಂಡಮಾರುತವು ಇಂದು ಒಡಿಶಾಕ್ಕೆ ಅಪ್ಪಳಿಸಿದ್ದು ರಾಜ್ಯದ ಕರಾವಳಿಯಲ್ಲಿ ಭಾರೀ ಮಳೆಯಾಗುತ್ತಿದೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಡಾನಾ ಚಂಡಮಾರುತಕ್ಕೆ ಓರ್ವ ವ್ಯಕ್ತಿ ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಪಶ್ಚಿಮ ಬಂಗಾಳದಲ್ಲಿ ಚಂಡಮಾರುತದ ಅಬ್ಬರಕ್ಕೆ ಮರಗಳು ಬುಡಸಮೇತ ಧರಾಶಾಯಿಯಾಗಿದೆ. ಹಲವು ಪ್ರದೇಶಗಳಲ್ಲಿ ವಿದ್ಯುತ್ ತಂತಿಗಳು ತುಂಡಾಗಿದ್ದು ವಿದ್ಯುತ್ ತಗುಲಿ ಒಬ್ಬರು ಸಾವನ್ನಪ್ಪಿದ್ದಾರೆ. ಚಂಡಮಾರುತವು ಗಂಟೆಗೆ 100-110 ಕಿಮೀ ವೇಗದಲ್ಲಿ ಬೀಸಿದ್ದು, ಭಿತರ್‌ ಕಾನಿಕಾ ಮತ್ತು ದಮ್ರಾ ನಡುವೆ ಭೂಕುಸಿತ ಉಂಟಾಗಿದೆ.

ಒಡಿಶಾ ಕರಾವಳಿಯಲ್ಲಿ ಡಾನಾ ಚಂಡಮಾರುತದಿಂದಾಗಿ ಮಧ್ಯರಾತ್ರಿಯ ಸುಮಾರಿಗೆ ಭೂಕುಸಿತವಾಗಲು ಪ್ರಾರಂಭವಾಗಿದೆ. ಭದ್ರಕ್, ಕೇಂದ್ರಪಾರಾ, ಬಾಲಸೋರ್ ಮತ್ತು ಜಗತ್‌ಸಿಂಗ್‌ಪುರ ಜಿಲ್ಲೆಗಳಲ್ಲಿ ಗಂಟೆಗೆ 110 ಕಿಮೀ ವೇಗದಲ್ಲಿ ಗಾಳಿ ಬೀಸಿದ್ದು, ಭಾರೀ ಮಳೆಯಾಗಿದೆ.

Advertisements

ಇದನ್ನು ಓದಿದ್ದೀರಾ? ಒಡಿಶಾ, ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ ಡಾನಾ ಚಂಡಮಾರುತ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ

ಇನ್ನು ಈಗಾಗಲೇ ಉಭಯ ರಾಜ್ಯಗಳಲ್ಲಿ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಇಂದು ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ಐಎಂಡಿ ಭೂಕುಸಿತ ನಿಂತಿದೆ ಎಂದು ಹೇಳಿದೆ. ಡಾನಾ ಚಂಡಮಾರುತ ಮುಂದಿನ ಆರು ಗಂಟೆಗಳಲ್ಲಿ ಕ್ರಮೇಣ ದುರ್ಬಲವಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಒಡಿಶಾದಲ್ಲಿ ಹಲವು ಮರಗಳು ಧರೆಗುರುಳಿದ್ದು, ಕೆಲವು ಪ್ರದೇಶಗಳು ಜಲಾವೃತವಾಗಿದೆ. ಆದರೆ ಈವರೆಗೂ ಯಾವುದೇ ಪ್ರಾಣಾಪಾಯಗಳ ಬಗ್ಗೆ ವರದಿಯಾಗಿಲ್ಲ. ರಾಜ್ಯವು ಶೂನ್ಯ ಅಪಘಾತ ಮಿಷನ್ ಅನ್ನು ಸಾಧಿಸಿದೆ ಎಂದು ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಹೇಳಿದ್ದಾರೆ.

ಆದರೆ ನೆರೆಯ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಪಥರ್‌ ಪ್ರತಿಮಾದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಚಂಡಮಾರುತದ ಸಮಯದಲ್ಲಿ ಕೇಬಲ್ ಕೆಲಸವನ್ನು ಮಾಡುತ್ತಿದ್ದರು. ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಪೂರ್ವ ಮಿಡ್ನಾಪುರ ಮತ್ತು ಕೋಲ್ಕತ್ತಾದಲ್ಲಿ ಚಂಡಮಾರುತದ ಹೆಚ್ಚಿನ ಪ್ರಭಾವ ಉಂಟಾಗಿದೆ. ಹಲವು ಪ್ರದೇಶಗಳು ಜಲಾವೃತವಾಗಿದೆ.

ಇದನ್ನು ಓದಿದ್ದೀರಾ? ಒಡಿಶಾ, ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ ಡಾನಾ ಚಂಡಮಾರುತ

ಎರಡೂ ರಾಜ್ಯಗಳಲ್ಲಿನ ಅಧಿಕಾರಿಗಳು ಈಗಾಗಲೇ ಲಕ್ಷಾಂತರ ಜನರನ್ನು ಸ್ಥಳಾಂತರಿಸಿದ್ದಾರೆ. ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ. 400ಕ್ಕೂ ಅಧಿಕ ರೈಲುಗಳು ರದ್ದಾಗಿದ್ದರೆ, ಹಲವು ವಿಮಾನಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ.

ಒಡಿಶಾದಲ್ಲಿ, ಮೋಹನ್ ಚರಣ್ ಮಾಝಿ ನೇತೃತ್ವದ ಸರ್ಕಾರವು ಸುಮಾರು 5.8 ಲಕ್ಷ ಜನರನ್ನು ಸ್ಥಳಾಂತರಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡಗಳು, ಒಡಿಶಾ ವಿಪತ್ತು ಕ್ಷಿಪ್ರ ಕಾರ್ಯಾಚರಣೆ ಪಡೆ (ಒಡಿಆರ್‌ಎಫ್) 51, ಅಗ್ನಿಶಾಮಕ ಸೇವೆ ಮತ್ತು ಅರಣ್ಯ ಸಿಬ್ಬಂದಿಯನ್ನು ಒಳಗೊಂಡ 385 ರಕ್ಷಣಾ ತಂಡಗಳನ್ನು ನಿಯೋಜಿಸಿದೆ ಎಂದು ಹೇಳಿದೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ಸುಮಾರು 2,43,374 ಜನರು ನಿರಾಶ್ರಿತರ ಶಿಬಿರದಲ್ಲಿ ಆಶ್ರಯ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಸಿಎಂ ಮಮತಾ ಅವರು ಗುರುವಾರ ರಾತ್ರಿ ಇಡೀ ರಾಜ್ಯ ಸಚಿವಾಲಯದಲ್ಲಿಯೇ ಉಳಿದು ಪರಿಸ್ಥಿತಿಯನ್ನು ಖುದ್ದಾಗಿ ಪರಿಶೀಲಿಸಿದರು ಎಂದು ವರದಿಯಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X