ಅ.24ರಂದು ಒಡಿಶಾಕ್ಕೆ ಅಪ್ಪಳಿಸಲಿರುವ ಚಂಡಮಾರುತ: ಕರ್ನಾಟಕ ಸೇರಿ ಹಲವು ಕಡೆ ಮಳೆ

Date:

Advertisements

ಬಂಗಾಳ ಕೊಲ್ಲಿ ಹಾಗೂ ಅಂಡಮಾನ್‌ನಲ್ಲಿ ಸೋಮವಾರ ವಾಯುಭಾರ ಕುಸಿತ ಉಂಟಾಗಿದೆ.ಅ.24ರ ಒಳಗಾಗಿ ಅದು ಚಂಡಮಾರುತವಾಗಿ ಮಾರ್ಪಾಡಾಗಲಿದ್ದು, ಒಡಿಶಾದ ಪುರಿ ಹಾಗೂ ಪಶ್ಚಿಮ ಬಂಗಾಳದ ನಡುವೆ ಹಾದು ಹೋಗಲಿದೆ ಭಾರತೀಯ ಹವಾಮಾನ ಇಲಾಖೆ ಹೇಳಿದೆ.

ಈ ಹಿನ್ನೆಲೆಯಲ್ಲಿ ಶನಿವಾರದವರೆಗೆ ಮೀನುಗಾರರು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ. ಒಡಿಶಾದಲ್ಲಿ ಚಂಡಮಾರುತದ ಪ್ರಭಾವ ಹೆಚ್ಚು ಕಾಲ ಇರಲಿದೆ. ರಾಜ್ಯದ ಕರಾವಳಿಯಲ್ಲಿ ಧಾರಾಕಾರ ಮಳೆಯಾಗಲಿದ್ದು, ಪ್ರತೀ ಗಂಟೆಗೆ 100 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ.

ವಾಯುವ್ಯ ದಿಕ್ಕಿಗೆ ಚಲಿಸಲಿರುವ ಈ ಚಂಡಮಾರುತ ಗುರುವಾರ ರಾತ್ರಿ ಅಥವಾ ಶುಕ್ರವಾರ ಮುಂಜಾನೆ ಒಡಿಶಾದ ಪುರಿಗೆ ಅಪ್ಪಳಿಸಲಿದೆ. ಈ ವೇಳೆ ಗಾಳಿಯ ವೇಗ ಗಂಟೆಗೆ 100 ರಿಂದ 120 ಕಿಲೋಮೀಟರ್‌ಗಳವರೆಗೆ ಇರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆಯೊಳಗೆ ದಡ ಸೇರುವಂತೆ ಮೀನುಗಾರರಿಗೆ ಸೂಚಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಟ್ರಂಪ್-ನೆತನ್ಯಾಹು ಮೇಲೇಕೆ ಭಾರತೀಯರಿಗೆ ಪ್ರೀತಿ?

ಒಡಿಶಾ ಮತ್ತು ಪಶ್ಚಿಮ ಬಂಗಾಳದಲ್ಲಿ ಗುರುವಾರ ಮತ್ತು ಶುಕ್ರವಾರ ಭಾರೀ ಮಳೆಯಾಗಲಿದೆ. ಅಕ್ಟೋಬರ್ 23 ರಿಂದಲೇ ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 90 ರಿಂದ 120 ಕಿಮಿ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಇದನ್ನು ತೀವ್ರ ಚಂಡಮಾರುತ ಎಂದು ವರ್ಗೀಕರಿಸಲಾಗಿದೆ.

ಪುರಿ, ಭುವನೇಶ್ವರ, ಜಗತ್‌ಸಿಂಗ್‌ಪುರ, ಕೇಂದ್ರಪಾರಾ, ಭದ್ರಕ್, ಬಾಲಸೋರ್, ಜಾಜ್‌ಪುರ್, ಧೆಂಕನಲ್, ಕೆಂದುಜಾರ್ ಮತ್ತು ಮಯೂರ್‌ಭಂಜ್ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ಕೇಂದ್ರ ಸರ್ಕಾರ ಕೂಡ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಎನ್‌ಡಿಎಂಎ) ರಕ್ಷಣಾ ಮತ್ತು ಪರಿಹಾರ ಸಿದ್ಧತೆಗಳನ್ನು ಪರಿಶೀಲಿಸಲು ಸಭೆಯನ್ನು ಕರೆದಿದೆ.

ಸಂಭಾವ್ಯ ತುರ್ತು ಪರಿಸ್ಥಿತಿಗಳನ್ನು ನಿಭಾಯಿಸಲು ಒಟ್ಟು 14 ಎನ್‌ಡಿಆರ್‌ಎಫ್‌ಗಳನ್ನು ಪಶ್ಚಿಮ ಬಂಗಾಳದಲ್ಲಿ ಮತ್ತು 11 ಒಡಿಶಾದಲ್ಲಿ ನಿಯೋಜಿಸಲಾಗಿದೆ. ಕ್ಯಾಬಿನೆಟ್ ಕಾರ್ಯದರ್ಶಿ ಟಿವಿ ಸೋಮನಾಥನ್ ಅವರು  ಆಸ್ತಿ, ಪಾಸ್ತಿ ನಷ್ಟವನ್ನು ಕಡಿಮೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಎರಡೂ ರಾಜ್ಯ ಸರ್ಕಾರಗಳಿಗೆ ಸೂಚಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X