ಚೆನ್ನೈ ನಂತರ ಆಂಧ್ರಕ್ಕೆ ಅಪ್ಪಳಿಸಿದ ಮಿಚಾಂಗ್ ಚಂಡಮಾರುತ: 50 ವಿಮಾನ, 100ಕ್ಕೂ ಹೆಚ್ಚು ರೈಲು ರದ್ದು

Date:

ಕಳೆದ ಎರಡು ದಿನಗಳಿಂದ ತಮಿಳುನಾಡಿನ ಚೆನ್ನೈ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಿಗೆ ಹಾನಿಯುಂಟು ಮಾಡಿದ್ದ ಮಿಚಾಂಗ್ ಚಂಡಮಾರುತ ಇಂದು ಆಂಧ್ರಪ್ರದೇಶಕ್ಕೆ ಅಪ್ಪಳಿಸಿದೆ.

- Advertisement -

ಆಂಧ್ರಪ್ರದೇಶದ ವಿಶಾಖಪಟ್ಟಣಂ, ತಿರುಪತಿ ಮತ್ತು ವಿಜಯವಾಡ ವಿಮಾನ ನಿಲ್ದಾಣಗಳಲ್ಲಿ ಬಹುತೇಕ ಎಲ್ಲ ಸೇವೆಗಳು ಸ್ಥಗಿತಗೊಂಡಿವೆ. ಆಂಧ್ರದ ಎಲ್ಲ ಮೂರು ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ಒಟ್ಟು 51 ವಿಮಾನ ಸೇವೆಗಳನ್ನು ರದ್ದುಗೊಳಿಸಲಾಗಿದೆ. ಅಲ್ಲದೆ, ರೈಲು ಸೇವೆಗಳಿಗೆ ತೊಂದರೆಯುಂಟಾದ ಕಾರಣ 100ಕ್ಕೂ ಹೆಚ್ಚು ರೈಲುಗಳನ್ನು ರದ್ದುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮಿಂಚಾಂಗ್‌ನ ತೀವ್ರ ಚಂಡಮಾರುತದಿಂದ ಹಲವು ಕಡೆ ಭೂಕುಸಿತ ಉಂಟಾಗಿದೆ. ಮಳೆಯಿಂದ ಭಾರಿ ಪ್ರವಾಹ ಉಂಟಾಗುವ ಕಾರಣದಿಂದ ನೆಲ್ಲೂರು, ಪ್ರಕಾಶಂ ಮತ್ತು ಬಾಪಟ್ಲಾ ಜಿಲ್ಲೆಗಳಿಂದ ಸುಮಾರು 9,450 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.

ನಿರಂತರ ಮಳೆಯಿಂದಾಗಿ ತಿರುಪತಿಯ ಎಲ್ಲ 5 ಪ್ರಮುಖ ಅಣೆಕಟ್ಟುಗಳು ಭರ್ತಿಯಾಗಿದ್ದು, ಪೂರ್ಣ ಪ್ರಮಾಣದಲ್ಲಿ ಹರಿಯುತ್ತವೆ. ಆಂಧ್ರಪ್ರದೇಶ ಸರ್ಕಾರವು ಚಂಡಮಾರುತ ಪೀಡಿತ ಜಿಲ್ಲೆಗಳಿಗೆ ಹಲವಾರು ಹಿರಿಯ ಅಧಿಕಾರಿಗಳನ್ನು ವಿಶೇಷ ಅಧಿಕಾರಿಗಳನ್ನಾಗಿ ನೇಮಿಸಿದೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರು ಚಂಡಮಾರುತದ ಪರಿಣಾಮದ ಬಗ್ಗೆ ಚರ್ಚಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಪರಿಶೀಲನಾ ಸಭೆ ನಡೆಸಿದರು. ತೀವ್ರ ಚಂಡಮಾರುತ ಮಿಚಾಂಗ್‌ನಿಂದ ಪೀಡಿತ ಪ್ರದೇಶಗಳಲ್ಲಿ ಕೈಗೊಂಡ ಪರಿಹಾರ ಕ್ರಮಗಳ ಬಗ್ಗೆ ವಿವಿಧ ಜಿಲ್ಲಾ ಅಧಿಕಾರಿಗಳಿಂದ ಏಕಕಾಲದಲ್ಲಿ ಅವಲೋಕನ ಸಭೆ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಡಿ.6 ರಂದು ನಡೆಯಲಿರುವ ‘ಇಂಡಿಯಾ’ ಸಭೆ ಮುಂದೂಡಿಕೆ

ಚೆನ್ನೈನಲ್ಲಿ 8 ಮಂದಿ ಸಾವು

ಭಾನುವಾರ (ಡಿ.3) ರಾತ್ರಿ ಚಂಡಮಾರುತ ಚೆನ್ನೈ ಮತ್ತು ಅದರ ನೆರೆಯ ಜಿಲ್ಲೆಗಳಿಗೆ ಮಿಚಾಂಗ್ ಅಬ್ಬರಿಸಿದ ಕಾರಣ ಮಹಾನಗರದಾದ್ಯಂತ ಸಾವಿರಾರು ಮನೆಗಳಿಗೆ ನೀರು ನುಗ್ಗಿ ಸಾರ್ವಜನಿಕರ ಆಸ್ತಿ ನಾಶಪಡಿಸಿದೆ. ವಿದ್ಯುತ್ ಸ್ಪರ್ಶ, ಮರ ಬೀಳುವಿಕೆ ಸೇರಿದಂತೆ ವಿವಿಧ ಕಾರಣಗಳಿಂದ ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಸೋಮವಾರ ರಾತ್ರಿ ಮಿಚಾಂಗ್ ಚಂಡಮಾರುತವು ಚೆನ್ನೈ ಕರಾವಳಿಯನ್ನು ದಾಟಿದ ನಂತರವೂ ಅರುಂಬಕ್ಕಂ, ಎಂಎಂಡಿಎ, ಚೂಲೈಮೇಡು, ಅಮಿಂಜಿಕಾರಿ ಸುತ್ತಮುತ್ತಲಿನ ಪ್ರದೇಶಗಳ ವಸತಿ ಪ್ರದೇಶಗಳು ಇನ್ನೂ ಜಲಾವೃತವಾಗಿವೆ. ಕಳೆದ 2 ದಿನಗಳಲ್ಲಿ ನಗರದಲ್ಲಿ 45 ಸೆಂ.ಮೀ ಮಳೆಯಾಗಿದೆ.

ಚೆನ್ನೈನಲ್ಲಿ ಚಂಡಮಾರುತದ ಪರಿಣಾಮದಿಂದ ವಿಪರೀತ ಮಳೆ ಸುರಿದು, ರಸ್ತೆಗಳು ನದಿಯಂತಾಗಿವೆ. ವಾಹನಗಳು ಕೊಚ್ಚಿಕೊಂಡು ಹೋಗುವ ವಿಡಿಯೋಗಳು ವೈರಲ್ ಆಗಿವೆ. ಇದರಿಂದಾಗಿ ಮಳೆ ಅಪಾಯವಿರುವ ಪ್ರದೇಶಗಳಲ್ಲಿ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಪರಿಸ್ಥಿತಿ ಸುಧಾರಿಸುವವರೆಗೂ ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಂ ಮಾಡುವಂತೆ ಸಂಸ್ಥೆಗಳು ಸೂಚಿಸಿದೆ.

ವಿದ್ಯುತ್ ಪೂರೈಕೆ ಮತ್ತು ಇಂಟರ್ನೆಟ್ ಸಂಪರ್ಕದ ವ್ಯತ್ಯಯದಿಂದ ದೈನಂದಿನ ಕಾರ್ಯಚಟುವಟಿಕೆಗಳಿಗೆ ಮತ್ತಷ್ಟು ತೊಡಕಾಗಿದೆ. ಭಾರಿ ಗಾಳಿಯಿಂದಾಗಿ ಮರಗಳು, ಗೋಡೆಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ. ಸರ್ಕಾರಿ ಆಸ್ಪತ್ರೆಗಳಿಗೆ ನೀರು ನುಗ್ಗಿದ್ದರಿಂದ ಆರೋಗ್ಯ ಸೇವೆಗಳಿಗೆ ತಾತ್ಕಾಲಿಕ ತಡೆ ಬಿದ್ದಿದೆ. ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣಗಳಿಗೂ ನೀರು ನುಗ್ಗಿ ಜಲಾವೃತವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...