ಮಿಚಾಂಗ್ ಚಂಡಮಾರುತ | ತಮಿಳುನಾಡಿನಲ್ಲಿ ಹೈ ಅಲರ್ಟ್‌; ಶಾಲಾ-ಕಾಲೇಜು ರಜೆ ಘೋಷಣೆ

Date:

ಬಂಗಾಳಕೊಲ್ಲಿಯಲ್ಲಿ ಮಿಚಾಂಗ್ ಚಂಡಮಾರುತ ರೂಪುಗೊಂಡಿದೆ. ಈ ಹಿನ್ನೆಲೆ, ಆಂಧ್ರಪ್ರದೇಶ ಮತ್ತು ತಮಿಳುನಾಡಿನತ್ತ ಚಂಡಮಾರುತ ಬೀಸುತ್ತಿದ್ದು, ಹಲವು ಭಾಗಗಳಲ್ಲಿ ಡಿ.5 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

- Advertisement -

ಭಾರತೀಯ ಹವಾಮಾನ ಇಲಾಖೆ ಚಂಡಮಾರುತದ ಬಗ್ಗೆ ಮಾಹಿತಿ ನೀಡಿದ ಕೂಡಲೇ, ತಮಿಳುನಾಡು ಸರ್ಕಾರ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಈ ಚಂಡಮಾರುತದಿಂದ ಉಂಟಾಗುವ ಸಮಸ್ಯೆಗಳನ್ನು ಎದುರಿಸಲು ಸಜ್ಜಾಗಿರುವ ತಮಿಳುನಾಡು ಸರ್ಕಾರ ಚೆನ್ನೈ, ತಿರುವಲ್ಲೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ ಶಾಲೆ ಮತ್ತು ಕಾಲೇಜುಗಳಿಗೆ ಸೋಮವಾರ ರಜೆ ಘೋಷಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಬಂಗಾಳಕೊಲ್ಲಿಯಿಂದ ಭಾರೀ ಚಂಡಮಾರುತ ಬೀಸುತ್ತಿರುವ ಹಿನ್ನೆಲೆ, ತಿರುವಲ್ಲೂರು ಮತ್ತು ಚೆನ್ನೈ ಜನರು ಡಿ.4 ಮತ್ತು 5ರಂದು ಆದಷ್ಟು ಮನೆಯಲ್ಲಿ ಸುರಕ್ಷಿತವಾಗಿ ಇರಬೇಕು. ಅನಿವಾರ್ಯ ಸಂದರ್ಭ ಇದ್ದರೆ ಮಾತ್ರ ಹೊರಬರಬೇಕು, ಇಲ್ಲದಿದ್ದರೆ ಮನೆಯಿಂದಲೇ ಕಾರ್ಯ ನಿರ್ವಹಿಸಬೇಕು ಎಂದು ತಿಳಿಸಿದೆ.

ಇನ್ನು ಅಗತ್ಯ ಸಿಬ್ಬಂದಿ ಜತೆಗೆ ಮಾತ್ರ ಕಾರ್ಯ ನಿರ್ವಹಿಸಲು ಉದ್ಯೋಗಿಗಳಿಗೆ ತಿಳಿಸುವಂತೆ ಖಾಸಗಿ ಕಂಪನಿಗಳಿಗೆ ಕೇಳಲಾಗಿದೆ.

118 ರೈಲು ಸೇವೆ ರದ್ದು ಮಾಡಿದ ದಕ್ಷಿಣ ರೈಲ್ವೆ

ದಕ್ಷಿಣ ರೈಲ್ವೆ ಡಿಸೆಂಬರ್ 3 ರಿಂದ 7ರ ವರೆಗೆ 118 ರೈಲು ಸೇವೆಗಳನ್ನು ರದ್ದುಗೊಳಿಸಿದೆ. ಬೆಂಗಳೂರು-ಹೌರಾ, ತಿರುವನಂತಪುರಂ-ನವದೆಹಲಿ ಕೇರಳ ಎಕ್ಸ್‌ಪ್ರೆಸ್, ಪಾಟ್ನಾ-ಎರ್ನಾಕುಲಂ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್, ತಿರುವನಂತಪುರ ಸಿಕಂದರಾಬಾದ್ ಶಬರಿ ಎಕ್ಸ್‌ಪ್ರೆಸ್, ವಿಜಯವಾಡ ಜನಶತಾಬ್ದಿ, ಬರೌನಿ-ಕೊಯಮತ್ತೂರು ವಿಶೇಷ ರೈಲು, ಗಯಾ ಚೆನ್ನೈ ಎಕ್ಸ್‌ಪ್ರೆಸ್, ಗೋರಖ್‌ಪುರ್ ರಪ್ತಿಸಾಗರ್ ಎಕ್ಸ್‌ಪ್ರೆಸ್, ಕೊಚುವೇಲಿ, ನಿಜಾಮುದ್ದೀನ್ ಚೆನ್ನೈ ಡುರಂಟೊ ಎಕ್ಸ್‌ಪ್ರೆಸ್ ಸೇರಿ ರದ್ದಾಗಿರುವ ಪ್ರಮುಖ ರೈಲುಗಳಾಗಿವೆ.

ಹೈ ಅಲರ್ಟ್‌ ಘೋಷಣೆ

ಬಂಗಾಳಕೊಲ್ಲಿಯಲ್ಲಿ ಡಿ.3ರ ವೇಳೆಗೆ ಮಿಚಾಂಗ್ ಚಂಡಮಾರುತ ರೂಪುಗೊಳ್ಳುವ ಸಾಧ್ಯತೆ ಇದೆ. ಆಂಧ್ರಪ್ರದೇಶ, ತಮಿಳುನಾಡು ಕರಾವಳಿಗೆ ಡಿ.4ರಂದು ಈ ಚಂಡಮಾರುತ ಬಂದು ಅಪ್ಪಳಿಸಲಿದೆ. ಹಾಗಾಗಿ, 16 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮ್ಯಾನ್ಮಾರ್‌ ಸಲಹೆಯಂತೆ ಈ ಚಂಡಮಾರುತಕ್ಕೆ ‘ಮಿಚಾಂಗ್‌’ ಎಂದು ಹೆಸರಿಡಲಾಗಿದೆ.

ತಮಿಳುನಾಡಿನ ಚೆನ್ನೈ, ತಿರುವಳ್ಳೂರು, ಚೆಂಗಲ್‌ಪಟ್ಟು ಮತ್ತು ಕಾಂಚೀಪುರಂ, ತಿರುವಣ್ಣಾಮಲೈ, ವಿಲ್ಲುಪುರಂ, ಕಡಲೂರು, ಮೈಲಾಡುತುರೈ, ತಂಜಾವೂರು, ಅರಿಯಲೂರು, ಪೆರಂಬಲೂರು, ಕಲ್ಲಕುರಿಚ್ಚಿ, ವೆಲ್ಲೂರು, ತಿರುಪತ್ತೂರು, ಧರ್ಮಪುರಿ, ಕೃಷ್ಣಗಿರಿ ಸೇಲಂ, ನಾಮಕ್ಕಲ್ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಈಗಾಗಲೇ ಚೆನ್ನೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಚೆನ್ನೈನಾದ್ಯಂತ ಹಲವಾರು ಮೆಟ್ರೋ ನಿಲ್ದಾಣಗಳ ಬಳಿ ಜಲಾವೃತವಾಗಿದೆ. ಸೇಂಟ್ ಥಾಮಸ್ ಮೆಟ್ರೋ ನಿಲ್ದಾಣದಲ್ಲಿ 4 ಅಡಿಗಳಷ್ಟು ನೀರು ನಿಂತಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾಕಿಸ್ತಾನದ ಪರ ಘೋಷಣೆ ಕೂಗಿದ್ದ ಇಬ್ಬರ ಬಂಧನ

ಪುದುಚೇರಿಯ ಪೂರ್ವ-ಆಗ್ನೇಯಕ್ಕೆ ಸುಮಾರು 440 ಕಿಲೋ ಮೀಟರ್ ಮತ್ತು ಚೆನ್ನೈನ ಆಗ್ನೇಯಕ್ಕೆ 420 ಕಿಲೋ ಮೀಟರ್, ಆಂಧ್ರ ಪ್ರದೇಶದ ನೆಲ್ಲೂರಿನ ಆಗ್ನೇಯಕ್ಕೆ 740 ಕಿಲೋ ಮೀಟರ್ ದೂರದಲ್ಲಿ ಚಂಡಮಾರುತ ರೂಪಗೊಂಡಿದೆ. ಗಾಳಿಯೂ ಗಂಟೆಗೆ 80 ರಿಂದ 90 ಕಿಲೋ ಮೀಟರ್ ವೇಗದಲ್ಲಿ ಬೀಸುತ್ತಿದ್ದು, ಈ ವೇಗ ಗಂಟೆಗೆ 100 ಕಿಲೋ ಮೀಟರ್‌ಗೆ ಹೆಚ್ಚುವ ಸಾಧ್ಯತೆ ಇಂದು ಐಎಂಡಿ ಮಾಹಿತಿ ನೀಡಿದೆ.

ಚಂಡಮಾರುತದ ಬಗ್ಗೆ ಸಾರ್ವಜನಿಕರು ಮತ್ತು ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು, ಕೃಷ್ಣಪಟ್ಟಣಂ ಸೇರಿದಂತೆ ಮೀನುಗಾರಿಕಾ ಬಂದರುಗಳಲ್ಲಿ 1,000ಕ್ಕೂ ಹೆಚ್ಚು ದೋಣಿಗಳು ಲಂಗರು ಹಾಕಿವೆ.

ತಮಿಳುನಾಡು ವಿಪತ್ತು ನಿರ್ವಹಣಾ ಪಡೆಯ 14 ತಂಡಗಳು 350 ಸಿಬ್ಬಂದಿ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ (ಎನ್‌ಡಿಆರ್‌ಎಫ್) 225 ಸಿಬ್ಬಂದಿ ಒಂಬತ್ತು ತಂಡಗಳು ಮೈಲಾಡುತುರೈ, ನಾಗಪಟ್ಟಣಂ, ತಿರುವಳ್ಳೂರ್, ಕಡಲೂರು, ವಿಲ್ಲುಪುರಂ, ಕಾಂಚೀಪುರಂ, ಚೆನ್ನೈ, ಚೆಂಗಲ್‌ಪೇಟ್‌ನ ಕರಾವಳಿ ಪ್ರದೇಶಗಳಲ್ಲಿ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಾಗಿ ನಿಯೋಜಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...