ಆಂಧ್ರದಲ್ಲಿ ಮೊಂತಾ ಚಂಡಮಾರುತದ ಅಬ್ಬರ; ಮಹಿಳೆ ಸಾವು, ಅಪಾರ ಹಾನಿ

Date:

ಆಂಧ್ರಪ್ರದೇಶದ ಕಡಲತೀರಕ್ಕೆ ಅಪ್ಪಳಿಸಿದ ಮೊಂತಾ ಚಂಡಮಾರುತ ಇದೀಗ ದುರ್ಬಲಗೊಂಡು ಸಾಮಾನ್ಯ ಚಂಡಮಾರುತವಾಗಿ ಪರಿವರ್ತನೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಆದರೂ, ಈ ಚಂಡಮಾರುತವು ಕೃಷ್ಣ, ಪಶ್ಚಿಮ ಗೋದಾವರಿ, ಪೂರ್ವ ಗೋದಾವರಿ ಸೇರಿದಂತೆ ಹಲವು ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಬಿರುಗಾಳಿಯನ್ನು ತಂದಿದ್ದು, ಒಬ್ಬ ಮಹಿಳೆಯ ಸಾವಿಗೆ ಕಾರಣವಾಗಿದೆ. ಕೊನಸೀಮ ಜಿಲ್ಲೆಯ ಮಕನಗುಡೆಂ ಗ್ರಾಮದಲ್ಲಿ ಬಿರುಗಾಳಿಯಿಂದ ಮರ ಬಿದ್ದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

- Advertisement -

ಐಎಂಡಿ ವರದಿಯ ಪ್ರಕಾರ, ಮೊಂತಾ ಚಂಡಮಾರುತವು ಅಕ್ಟೋಬರ್ 28ರ ರಾತ್ರಿ ಮಚಿಲೀಪಟ್ಟಣಂ ಮತ್ತು ಕಾಳಿಂಗಪಟ್ಟಣಂ ನಡುವೆ ಕಾಕಿನಾಡದ ದಕ್ಷಿಣದಲ್ಲಿ ಆಂಧ್ರ ಪ್ರದೇಶ ಮತ್ತು ಯಾನಾಂ ಕರಾವಳಿಯನ್ನು ದಾಟಿದೆ. ಸದ್ಯ ಈ ಚಂಡಮಾರುತವು ಗಂಟೆಗೆ 10 ಕಿ.ಮೀ. ವೇಗದಲ್ಲಿ ವಾಯವ್ಯ ದಿಕ್ಕಿನಲ್ಲಿ ಸಾಗುತ್ತಿದೆ ಎಂದು ಐಎಂಡಿ ತಿಳಿಸಿದೆ. ಮಚಿಲೀಪಟ್ಟಣಂ ಮತ್ತು ವಿಶಾಖಪಟ್ಟಣಂನ ರೇಡಾರ್‌ಗಳ ಮೂಲಕ ಇದರ ಚಲನೆಯನ್ನು ನಿರಂತರವಾಗಿ ಗಮನಿಸಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಚಂಡಮಾರುತದ ಪ್ರಭಾವದಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಮರಗಳು ಧರೆಗುರುಳಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮಚಿಲೀಪಟ್ಟಣಂನ ಮಂಗಿನಪುಡಿ ಬೀಚ್ ರಸ್ತೆಯಲ್ಲಿ ತಾಳೆಮರವೊಂದು ವಿದ್ಯುತ್ ತಂತಿಗಳ ಮೇಲೆ ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನರಸಾಪುರದಲ್ಲಿ 9.8 ಮಿ.ಮೀ., ತುನಿಯಲ್ಲಿ 15.6 ಮಿ.ಮೀ., ಕಾಕಿನಾಡದಲ್ಲಿ 5.7 ಮಿ.ಮೀ. ಮತ್ತು ವಿಶಾಖಪಟ್ಟಣಂನಲ್ಲಿ 0.2 ಮಿ.ಮೀ. ಮಳೆ ದಾಖಲಾಗಿದೆ. ನೆಲ್ಲೂರು ಜಿಲ್ಲೆಯಲ್ಲಿ ಕಳೆದ 36 ಗಂಟೆಗಳಿಂದ ಸತತ ಮಳೆಯಾಗುತ್ತಿದ್ದು, ಕೆಲವು ಕಡೆ 7 ಸೆ.ಮೀ.ವರೆಗೆ ಮಳೆ ಸುರಿದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮತದಾನದ ಹಕ್ಕನ್ನು ಚುನಾವಣಾ ಆಯೋಗ ರಕ್ಷಿಸುತ್ತಿದೆಯೇ?

ಆಂಧ್ರ ಪ್ರದೇಶ ಸರ್ಕಾರವು ಚಂಡಮಾರುತದಿಂದ ಪ್ರಭಾವಿತವಾದ ಏಳು ಜಿಲ್ಲೆಗಳಾದ ಕೃಷ್ಣ, ಏಲೂರು, ಪೂರ್ವ ಗೋದಾವರಿ, ಪಶ್ಚಿಮ ಗೋದಾವರಿ, ಕಾಕಿನಾಡ, ಡಾ. ಬಿ ಆರ್ ಅಂಬೇಡ್ಕರ್ ಕೊನಸೀಮ ಮತ್ತು ಅಲ್ಲೂರಿ ಸೀತಾರಾಮ ರಾಜು (ಚಿಂತೂರು ಮತ್ತು ರಾಂಪಚೋದವರಂ ವಿಭಾಗಗಳು) ಜಿಲ್ಲೆಗಳಲ್ಲಿ ಮಂಗಳವಾರ ರಾತ್ರಿ 8:30ರಿಂದ ಬುಧವಾರ ಬೆಳಗ್ಗೆ 6 ಗಂಟೆಯವರೆಗೆ ವಾಹನ ಸಂಚಾರಕ್ಕೆ ನಿಷೇಧಾಜ್ಞೆ ವಿಧಿಸಿದೆ. ತುರ್ತು ವೈದ್ಯಕೀಯ ಸೇವೆಗಳಿಗೆ ಮಾತ್ರ ಈ ನಿಷೇಧದಿಂದ ವಿನಾಯಿತಿ ನೀಡಲಾಗಿದೆ. ವಿಶಾಖಪಟ್ಟಣಂನಲ್ಲಿ 32, ವಿಜಯವಾಡದಲ್ಲಿ 16 ಮತ್ತು ತಿರುಪತಿಯಲ್ಲಿ 4 ವಿಮಾನಗಳನ್ನು ರದ್ದುಗೊಳಿಸಲಾಗಿದೆ. ಜೊತೆಗೆ, ದಕ್ಷಿಣ ಮಧ್ಯ ರೈಲ್ವೆ ವಲಯದಲ್ಲಿ 120 ರೈಲುಗಳನ್ನು ಸೋಮವಾರ ಮತ್ತು ಮಂಗಳವಾರ ರದ್ದುಗೊಳಿಸಲಾಗಿತ್ತು.

ಚಂಡಮಾರುತದ ಪರಿಣಾಮವು ತೆಲಂಗಾಣ, ತಮಿಳುನಾಡು, ಜಾರ್ಖಂಡ್ ಮತ್ತು ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆಯ ರೂಪದಲ್ಲಿ ಕಾಣಿಸಿಕೊಳ್ಳಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ. ಒಡಿಶಾದಲ್ಲಿ ಮಲಕಂಗಿರಿ, ಕೊರಾಪುಟ್, ರಾಯಗಡ, ಗಜಪತಿ ಮತ್ತು ಗಂಜಾಂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಒಡಿಶಾ ಸರ್ಕಾರವು ಎಂಟು ಜಿಲ್ಲೆಗಳಲ್ಲಿ 2,048 ದುರಂತ ಪರಿಹಾರ ಕೇಂದ್ರಗಳನ್ನು ತೆರೆದಿದ್ದು, 11,396 ಜನರನ್ನು ಸ್ಥಳಾಂತರಿಸಲಾಗಿದೆ. ಮೀನುಗಾರರಿಗೆ ಅಕ್ಟೋಬರ್ 29ರವರೆಗೆ ಕಡಲಿಗಿಳಿಯದಂತೆ ಸೂಚನೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 12 ಗಂಟೆಗಳ ಕಾಲ ಭಾರೀ ಮಳೆ ಮುಂದುವರಿಯಲಿದ್ದು, ಕಡಿಮೆ ಎತ್ತರದ ಪ್ರದೇಶಗಳಲ್ಲಿ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಸಾರ್ವಜನಿಕರು ಮನೆಯಿಂದ ಹೊರಗೆ ಬಾರದಂತೆ ಮತ್ತು ಸರ್ಕಾರಿ ಸುರಕ್ಷತಾ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...