ರೆಮಲ್ ಚಂಡಮಾರುತಕ್ಕೆ ಕೋಲ್ಕತ್ತಾದಲ್ಲಿ ಓರ್ವ ಬಲಿ, ಬಂಗಾಳದಲ್ಲಿ ಭಾರೀ ಹಾನಿ

Date:

ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ ಭಾರೀ ಹಾನಿ ಉಂಟು ಮಾಡಿದ್ದು, ಚಂಡಮಾರುತದಿಂದ ಗೋಡೆ ಕುಸಿದು ಕೋಲ್ಕತ್ತಾದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಸುಂದರಬನ್ಸ್‌ನ ಗೋಸಾಬಾ ಪ್ರದೇಶದಲ್ಲಿ ಅವಶೇಷಗಳಡಿ ಸಿಲುಕಿ ಮತ್ತೊಬ್ಬರು ಗಾಯಗೊಂಡಿದ್ದಾರೆ.

- Advertisement -

ಭಾನುವಾರ ರಾತ್ರಿ ರೆಮಲ್ ಚಂಡಮಾರುತ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದ್ದು ಬಂಗಾಳ ಮತ್ತು ಬಾಂಗ್ಲಾದೇಶದ ಕರಾವಳಿಯ ನಡುವೆ ಭೂಕುಸಿತವಾಗಿದೆ. ಈ ಸಂದರ್ಭದಲ್ಲಿ ಗೋಡೆ ಕುಸಿದು ಕೋಲ್ಕತ್ತಾದಲ್ಲಿ ಒಂದು ಸಾವು ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಚಂಡಮಾರುತವು ದುರ್ಬಲಗೊಂಡಿದೆ, ಕ್ರಮೇಣ ಇನ್ನಷ್ಟು ದುರ್ಬಲವಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ. ಈ ಬೆನ್ನಲ್ಲೇ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಕಾರ್ಯಚರಣೆಯು ಭಾನುವಾರ ಮಧ್ಯಾಹ್ನ ಸ್ಥಗಿತಗೊಂಡಿದ್ದು ಮತ್ತೆ ವಿಮಾನ ಕಾರ್ಯಾಚರಣೆ ಪುನರಾರಂಭಗೊಂಡಿದೆ.

ಇದನ್ನು ಓದಿದ್ದೀರಾ?  ರೆಮಲ್ ಚಂಡಮಾರುತದಿಂದ ಭೂಕುಸಿತ: ಬಂಗಾಳದಲ್ಲಿ ಒಂದು ಲಕ್ಷ ಜನರ ಸ್ಥಳಾಂತರ

ಇನ್ನು ರೆಮಲ್ ಚಂಡಮಾರುತವು ಸೋಮವಾರ ಈಶಾನ್ಯ ಕಡೆಗೆ ಚಲಿಸುತ್ತದೆ ಮತ್ತು ಕ್ರಮೇಣ ಚಂಡಮಾರುತದ ದುರ್ಬಲವಾಗುತ್ತದೆ. ಸೋಮವಾರ ಮತ್ತು ಮಂಗಳವಾರದಂದು ಅಸ್ಸಾಂ ಮತ್ತು ಇತರ ಈಶಾನ್ಯ ರಾಜ್ಯಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಐಎಂಡಿ ಎಚ್ಚರಿಕೆ ನೀಡಿದೆ.

ಅಸ್ಸಾಂನ ಏಳು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆಯಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. 11 ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ.

ಇದನ್ನು ಓದಿದ್ದೀರಾ? ರೆಮಲ್ ಚಂಡಮಾರುತ| ಬಂಗಾಳದಲ್ಲಿ ಭೂಕುಸಿತ ಸಾಧ್ಯತೆ; ವಿಮಾನ, ರೈಲುಗಳು ರದ್ದು

ಪಶ್ಚಿಮ ಬಂಗಾಳದಲ್ಲಿ ಕರಾವಳಿ ಭಾಗದಲ್ಲಿರುವ ಸುಮಾರು 1.10 ಲಕ್ಷ ಮಂದಿಯನ್ನು ಸ್ಥಳಾಂತರಿಸಲಾಗಿದೆ. ಭಾನುವಾರ ಮಧ್ಯಾಹ್ನದ ವೇಳೆಗೆಯೇ ಜನರನ್ನು ನಿರಾಶ್ರಿತ ಕೇಂದ್ರ, ಶಾಲೆ, ಕಾಲೇಜುಗಳಿಗೆ ಸ್ಥಳಾಂತರಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...