ರಾಜಸ್ಥಾನ ಸರ್ಕಾರಿ ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಕಡ್ಡಾಯ

Date:

ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸವನ್ನು ಉತ್ತೇಜಿಸಲು, ಸಾಮಾನ್ಯ ಜ್ಞಾನವನ್ನು ಹೆಚ್ಚಿಸಲು ರಾಜಸ್ಥಾನ ಸರ್ಕಾರವು ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದೆ. ಈ ಸಂಬಂಧ ಹೊರಡಿಸಿರುವ ಆದೇಶದಲ್ಲಿ ವಿದ್ಯಾರ್ಥಿಗಳು ಬೆಳಗಿನ ಸಭೆಯಲ್ಲಿ ಕನಿಷ್ಠ 10 ನಿಮಿಷಗಳ ಕಾಲ ಪತ್ರಿಕೆಗಳನ್ನು ಓದಬೇಕು.

- Advertisement -

ವಿದ್ಯಾರ್ಥಿಗಳಿಗೆ ಪ್ರಚಲಿತ ವಿದ್ಯಮಾನಗಳ ಅರಿವು ಮುಖ್ಯ, ಆರಂಭಿಕ ಹಂತದಲ್ಲಿಯೇ ಸುದ್ದಿಗಳನ್ನು ಅರ್ಥಮಾಡಿಕೊಳ್ಳುವ ಮತ್ತು ವಿಶ್ಲೇಷಿಸುವ ಸಾಮರ್ಥ್ಯವನ್ನು ವಿದ್ಯಾರ್ಥಿಗಳಲ್ಲಿ ಅಭಿವೃದ್ಧಿಪಡಿಸುವ ಉದ್ದೇಶದಿಂದಾಗಿ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಇದನ್ನು ಓದಿದ್ದೀರಾ? ತುರ್ತು ಪರಿಸ್ಥಿತಿಯ ಪತ್ರಿಕಾ ಸೆನ್ಸಾರ್‌ಶಿಪ್ ದಿನಗಳು ಮರಳಿ ಬರುತ್ತಿವೆಯೇ?

ಇನ್ನು ರಾಜ್ಯದ ಶಾಲಾ ಶಿಕ್ಷಣ ಇಲಾಖೆಯು ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಗಳು ಮತ್ತು ಇಂಗ್ಲಿಷ್-ಮಾಧ್ಯಮ ಶಾಲೆಗಳು ಕನಿಷ್ಠ ಎರಡು ಪತ್ರಿಕೆಗಳಿಗೆ – ಒಂದು ಹಿಂದಿ ಮತ್ತು ಒಂದು ಇಂಗ್ಲಿಷ್ – ಚಂದಾದಾರಿಕೆ ಮಾಡಿಕೊಳ್ಳಲು ಸೂಚಿಸಿದೆ. ಇನ್ನೊಂದೆಡೆ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಗಳು ಕನಿಷ್ಠ ಎರಡು ಹಿಂದಿ ಪತ್ರಿಕೆಗಳ ಚಂದಾದಾರಿಕೆ ಮಾಡಬೇಕು ಎಂದು ಸೂಚಿಸಿದೆ. ಈ ಚಂದಾದಾರಿಕೆಯ ವೆಚ್ಚವನ್ನು ಜೈಪುರದ ರಾಜಸ್ಥಾನ ಶಾಲಾ ಶಿಕ್ಷಣ ಮಂಡಳಿ ಭರಿಸುತ್ತದೆ.

ಜತೆಗೆ ಭಾಷಾ ಕೌಶಲ್ಯವನ್ನು ಬಲಪಡಿಸಲು ಪ್ರತಿದಿನ ಪತ್ರಿಕೆಗಳಿಂದ ಐದು ಹೊಸ ಪದಗಳನ್ನು ಗುರುತಿಸಲು ಮತ್ತು ಅವುಗಳ ಅರ್ಥಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಲು ಶಾಲೆಗಳಿಗೆ ತಿಳಿಸಲಾಗಿದೆ. ವಿದ್ಯಾರ್ಥಿಗಳನ್ನು ವರ್ಗವಾರು ವಿಂಗಡಿಸಿ ಸಂಪಾದಕೀಯಗಳು, ಪ್ರಮುಖ ರಾಷ್ಟ್ರೀಯ, ಅಂತಾರಾಷ್ಟ್ರೀಯ, ಕ್ರೀಡಾ ಬೆಳವಣಿಗೆಗಳನ್ನು ಓದಲು ಮತ್ತು ಚರ್ಚಿಸಲು ಪ್ರೋತ್ಸಾಹಿಸಬೇಕು ಎಂದು ಆದೇಶ ಹೇಳುತ್ತದೆ.

ವಿದ್ಯಾರ್ಥಿಗಳ ಸಾಮಾನ್ಯ ಜ್ಞಾನ ಮತ್ತು ಸಾಮಾಜಿಕ ಅರಿವನ್ನು ಸುಧಾರಿಸುವುದು ಮಾತ್ರವಲ್ಲ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧಪಡಿಸಲು ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇತ್ತೀಚೆಗೆ ಉತ್ತರ ಪ್ರದೇಶ ಸರ್ಕಾರವು ಸರ್ಕಾರಿ ಶಾಲೆಗಳಲ್ಲಿ ಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದೆ. ಇದಾದ ಒಂದು ವಾರದಲ್ಲೇ ರಾಜಸ್ಥಾನ ಸರ್ಕಾರವೂ ಇದೇ ಆದೇಶ ಹೊರಡಿಸಿದೆ.

ಇದನ್ನು ಹೊರತುಪಡಿಸಿ 2025ರ ಜೂನ್‌ನಲ್ಲಿ ಕೇರಳ ಸರ್ಕಾರ ಎಲ್ಲಾ ತರಗತಿಗಳಲ್ಲಿ ದಿನಪತ್ರಿಕೆ ಓದುವುದನ್ನು ಕಡ್ಡಾಯಗೊಳಿಸಿದೆ. ಮುಖ್ಯವಾಗಿ ಮಾತೃಭಾಷೆಯ ಕಲಿಕೆಗೆ ಒತ್ತು ನೀಡಲು, ಭಾಷಾ ಪ್ರಾವೀಣ್ಯತೆಯನ್ನು ಹೆಚ್ಚಿಸಲು ಕೇರಳ ಸರ್ಕಾರ ಈ ಕ್ರಮಕೈಗೊಂಡಿದೆ. ಹಿಮಾಚಲ ಪ್ರದೇಶದಲ್ಲಿಯೂ ಎಲ್ಲಾ ಸರ್ಕಾರಿ ಶಾಲೆಗಳ ಬೆಳಗಿನ ಪ್ರಾರ್ಥನೆಯಲ್ಲಿ ದಿನಪತ್ರಿಕೆ ಓದುವುದು ಕಡ್ಡಾಯವಾಗಿದೆ. ಸದ್ಯ ಕರ್ನಾಟಕದಲ್ಲಿಯೂ ಇದೇ ರೀತಿಯ ಆದೇಶ ಹೊರಡಿಸಬೇಕು ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಆಗ್ರಹ ಕೇಳಿಬರುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...