ಹಿಂದಿ ಭಾಷಾ ಹೇರಿಕೆ ವಿವಾದದ ನಡುವೆ ಡೈರಿ ಮಿಲ್ಕ್ ಹೊಸ ಜಾಹೀರಾತು ವೈರಲ್

Date:

ಕೇಂದ್ರ ಸರ್ಕಾರ ಮತ್ತು ತಮಿಳುನಾಡು ಸರ್ಕಾರದ ನಡುವೆ ತ್ರಿಭಾಷಾ ನೀತಿ ವಿಚಾರದಲ್ಲಿ ವಾಗ್ವಾದ ನಡೆಯುತ್ತಿದೆ. ಕೇಂದ್ರ ಸರ್ಕಾರವು ಹಿಂದಿ ಹೇರಿಕೆ ಮಾಡುತ್ತಿದೆ ದಕ್ಷಿಣ ಭಾರತದ ರಾಜ್ಯಗಳು ವರ್ಷಗಳಿಂದ ಆರೋಪಿಸುತ್ತಾ ಬಂದಿದೆ. ಪ್ರಸ್ತುತ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮತ್ತು ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರದ ನಡುವೆ ರಾಜಕೀಯ ವಾಕ್ಸಮರ ನಡೆಯುತ್ತಿರುವ ನಡುವೆ ಡೈರಿಮಿಲ್ಕ್‌ನ ವಿಡಿಯೋವೊಂದು ಭಾರೀ ವೈರಲ್ ಆಗುತ್ತಿದೆ. ಹಲವರು ಈ ವಿಡಿಯೋಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -

ಟ್ರೆಂಡಿಂಗ್ ವಿಚಾರಗಳಿಗೆ ಸಂಬಂಧಿಸಿದಂತೆ ಜಾಹೀರಾತು ಮಾಡುವುದು ಕಾರ್ಪೋರೇಟ್ ಸಂಸ್ಥೆಗಳ ಮಾರುಕಟ್ಟೆ ತಂತ್ರವಾಗಿದೆ. ಅದರ ಭಾಗವಾಗಿಯೇ ಡೈರಿ ಮಿಲ್ಕ್ ಇದೀಗ ಭಾಷಾ ಹೇರಿಕೆಯ ವಿವಾದ ನಡುವೆ ತಮಿಳು ಮತ್ತು ಹಿಂದಿಗರ ನಡುವೆ ನಡೆಯುವ ಸಂಭಾಷಣೆಯ ಜಾಹೀರಾತೊಂದನ್ನು ಬಿಡುಗಡೆ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ತ್ರಿಭಾಷಾ ಸೂತ್ರದ ಹೆಸರಿನಲ್ಲಿ‌ ಹಿಂದಿ‌ ಹೇರಿಕೆ‌ ಮಾಡುತ್ತಿದೆ ಕೇಂದ್ರ ಸರ್ಕಾರ? three-language formula | BJP

ವಿಡಿಯೋದಲ್ಲಿ ಏನಿದೆ?

ಹಿಂದಿ ಮಾತನಾಡುವ ಮಹಿಳೆಯರು ಕೂತು ಮಾತನಾಡುತ್ತಿದ್ದ ವೇಳೆ ಹೊಸದಾಗಿ ಉತ್ತರ ಭಾರತಕ್ಕೆ ಹೋದ ಚೆನ್ನೈನ ಮಹಿಳೆಯೊಬ್ಬರು ಗುಂಪಿಗೆ ಸೇರಿಕೊಳ್ಳುತ್ತಾರೆ. ಹೆಚ್ಚಾಗಿ ಹಿಂದಿ ಬಾರದ ತಮಿಳುನಾಡಿನ ಮಹಿಳೆ ಗುಂಪಿನಲ್ಲಿದ್ದರೂ ಕೂಡಾ ಪ್ರತ್ಯೇಕವಾದಂತೆ ಇರುತ್ತಾರೆ.

ಆದರೆ ತಮಿಳಿನ ಮಹಿಳೆಗೆ ಹಿಂದಿ ಬರುವುದಿಲ್ಲ ಎಂದು ತಿಳಿದ ಬಳಿಕ ಹಿಂದಿ ಮಾತನಾಡುವ ಮಹಿಳೆಯೊಬ್ಬರು ತನ್ನಗೆ ಬಂದಷ್ಟು ಹಿಂದಿಯಲ್ಲಿ ಮಾತನಾಡುತ್ತಾ ಘಟನೆಯನ್ನು ವಿವರಿಸುತ್ತಾರೆ. ಆ ವೇಳೆ ಎಲ್ಲರೂ ಜೊತೆಯಾಗಿ ಸಂಭಾಷಣೆ ನಡೆಸುತ್ತಾರೆ. ಈ ಜಾಹೀರಾತಿನ ಮೂಲಕ ಡೈರಿ ಮಿಲ್ಕ್ ಇಂಗ್ಲೀಷ್ ಅನ್ನು ಮಾಧ್ಯಮವಾಗಿ ಬಳಸಿಕೊಂಡಿದ್ದಾರೆ. ಹಿಂದಿ ಹೇರಿಕೆ ವಿರುದ್ಧ ಸ್ಪಷ್ಟ ಸಂದೇಶ ನೀಡಿದಂತಿದೆ.

ನೆಟ್ಟಿಗರ ಪ್ರತಿಕ್ರಿಯೆ ಹೇಗಿದೆ?

ಈ ಜಾಹೀರಾತು ವೈರಲ್ ಆಗುತ್ತಿದ್ದಂತೆ ನೆಟ್ಟಿಗರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. “ಉತ್ತರ- ದಕ್ಷಿಣದ ಭಾಷಾ ರಾಜಕೀಯದ ಬಗ್ಗೆ ನನಗೆ ಅರ್ಥವಾಗುವುದಿಲ್ಲ. ಆದರೆ ಇದು ಅತೀ ಉತ್ತಮವಾದ ಜಾಹೀರಾತಾಗಿದೆ. ಡೈರಿ ಮಿಲ್ಕ್ ಇಂಡಿಯಾ ಯಾವೆಗಲೂ ಆ ಸಮಯಕ್ಕೆ ತಕ್ಕುದಾದ ಜಾಹೀರಾತು ನೀಡುತ್ತದೆ” ಎಂದು ನೆಟ್ಟಿಗರೊಬ್ಬರು ಹೇಳಿದ್ದಾರೆ.

ಇನ್ನೋರ್ವ ನೆಟ್ಟಿಗರು, “ಇಂಗ್ಲೀಷ್ ಎಂದಿಗೂ ಉತ್ತಮ ಸಂವಾದ ಭಾಷೆಯಾಗಿದೆ. ಸ್ಥಳೀಯ ಭಾಷೆಗಳು ಬಾರದಿದ್ದಾಗ ಬರುವಷ್ಟು ಇಂಗ್ಲೀಷ್‌ನಲ್ಲೇ ಮಾತನಾಡಬಹುದು. ಇದು ಉತ್ತಮ ಜಾಹೀರಾತಾಗಿದೆ. ನೇರವಾಗಿ ಏನೂ ಹೇಳಬೇಕೋ ಅದನ್ನು ಹೇಳಲಾಗಿದೆ. ಸರಳವಾದ ವಿವರಣೆಯಿದೆ” ಎಂದಿದ್ದಾರೆ.

“ಸದ್ಯ ಎಲ್ಲವೂ ಗೂಗಲ್‌ನಲ್ಲಿ ಸಿಗುವಾಗ ಹಿಂದಿಯನ್ನು ಕಲಿಯುವ ಅಗತ್ಯವೇನಿದೆ? ಯಾರಿಗೆ ಅನಿವಾರ್ಯವಾಗಿ ಹಿಂದಿ ಕಲಿಯಬೇಕೋ ಅವರು ಆ ಸಮಯ ಬಂದಾಗ ಕಲಿಯುತ್ತಾರೆ. ಪ್ರಾಥಮಿಕ ಶಾಲೆಯಿಂದಲೇ ಹಿಂದಿ ಕಲಿಯಬೇಕಾದ ಅಗತ್ಯವೇನಿಲ್ಲ” ಎಂದು ಸತೀಶ್ ಕುಮಾರ್ ಎಂಬ ನೆಟ್ಟಿಗರು ಅಭಿಪ್ರಾಯಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...