ದಕ್ಷಿಣ ಕನ್ನಡ | ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ‘ಲಾರಿ’ಯಲ್ಲಿ ಕರೆದೊಯ್ದ ಶಿಕ್ಷಕರು: ಮುಖ್ಯೋಪಾಧ್ಯಾಯ ಅಮಾನತು

Date:

ಶಾಲೆಯ ಶಿಕ್ಷಣಿಕ ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಶಿಕ್ಷಕರು ತೆರೆದ ಪಿಕಪ್ ಟ್ರಕ್ ಮತ್ತು ಲಾರಿಯಲ್ಲಿ ಕರೆದೊಯ್ದಿರುವ ಆತಂಕಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಬಹಿರಂಗಗೊಂಡ ಬೆನ್ನಲ್ಲೇ ಶಾಲೆಯ ಮುಖ್ಯೋಪಾಧ್ಯಾಯರನ್ನು ಅಮಾನತು ಮಾಡಲಾಗಿದೆ.

- Advertisement -

ಜಿಲ್ಲೆಯ ಮುಲ್ಕಿ ತಾಲೂಕಿನ ಬಳಂಜೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯೋಪಾಧ್ಯಾಯ ಕಿರಣ್ ಅವರು ವಿದ್ಯಾರ್ಥಿಗಳನ್ನು ಜೇನು ಕೃಷಿ ಅಧ್ಯಯನಕ್ಕಾಗಿ ಸಮೀಪದ ಕೆಲ ಜಮೀನುಗಳಿಗೆ ಕರೆದೊಯ್ದಿದ್ದಾರೆ. ಆದರೆ, ವಿದ್ಯಾರ್ಥಿಗಳನ್ನು ಸುರಕ್ಷತೆಯುಳ್ಳ ಬಸ್‌ಗಳಲ್ಲಿ ಕರೆದೊಯ್ಯುವ ಬದಲು ಪಿಕಪ್ ವಾಹನ ಮತ್ತು ಲಾರಿಯಲ್ಲಿ ಕರೆದೊಯ್ಯಲಾಗಿದೆ. ಇದು ನಿಗದಿತ ಸುರಕ್ಷತಾ ಮಾನದಂಡಗಳ ಉಲ್ಲಂಘನೆಯಾಗಿದೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೋಷಕರು ಮತ್ತು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ನಿರ್ಲಕ್ಷಿಸಿದ್ದನ್ನು ಪೋಷಕರು ಖಂಡಿಸಿದ್ದಾರೆ. ಶಾಲಾ ಅಧಿಕಾರಿಗಳು ಈ ರೀತಿ ಅಸುರಕ್ಷಿತವಾಗಿ ಮಕ್ಕಳನ್ನು ಪ್ರಯಾಣಿಸಲು ಹೇಗೆ ಅನುಮತಿಸಿದರು ಎಂದು ಪ್ರಶ್ನಿಸಿದ್ದಾರೆ.

ಘಟನೆ ಬೆಳಕಿಗೆ ಬಂದ ನಂತರ, ಕರ್ನಾಟಕ ಶಿಕ್ಷಣ ಇಲಾಖೆಯು ಕ್ಷೇತ್ರ ಶಿಕ್ಷಣಾಧಿಕಾರಿಯಿಂದ (ಬಿಇಒ) ವಿವರವಾದ ವರದಿ ಕೇಳಿದೆ. ಪ್ರಾಥಮಿಕ ತನಿಖೆಯ ಆಧಾರದ ಮೇಲೆ, ಪ್ರಭಾರ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಲಾಗಿದೆ. ಅಂತಿಮ ವರದಿ ಸಲ್ಲಿಕೆಯ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆ ಹೇಳಿದೆ.

WhatsApp Image 2023 06 13 at 1.10.34 PM e1686642227658
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿಯಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಪ್ರಾಧಿಕಾರಗಳ ನಿರ್ಲಕ್ಷ್ಯ: ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ

ದೆಹಲಿ ಮತ್ತು ರಾಷ್ಟ್ರೀಯ ರಾಜಧಾನಿ ವಲಯದಲ್ಲಿ (NCR) ಅಪ್ರಾಪ್ತರು ಹಾಗೂ ಮಹಿಳೆಯರ...

ಜನಸಂಖ್ಯಾ ಸಮಿತಿಯ ‘ಧರ್ಮ ಆಧಾರಿತ’ ಪ್ರಶ್ನೆಗಳಿಗೆ ಉತ್ತರಿಸಲಾಗದೆ ರಾಜ್ಯ ಸರ್ಕಾರಗಳ ಪರದಾಟ

ಜನಸಂಖ್ಯಾ ಬದಲಾವಣೆಗಳ ಕುರಿತು ಅಧ್ಯಯನ ನಡೆಸುತ್ತಿರುವ ಉನ್ನತ ಮಟ್ಟದ ಸಮಿತಿಯು (HLCDC)...

ಟ್ರ್ಯಾಫಿಕ್ ದಂಡ ಬಾಕಿ ಉಳಿಸಿಕೊಂಡಿದ್ದೀರಾ? ವಿದ್ಯುತ್ ಬಿಲ್‌ನೊಂದಿಗೆ ವಸೂಲಿ ಮಾಡಲು ಸುಪ್ರೀಂ ಸಲಹೆ

ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸಲಾಗುವ ಇ-ಚಲನ್‌ಗಳ ಬಾಕಿ ಮೊತ್ತವನ್ನು ವಸೂಲಿ ಮಾಡಲು...

ಮುಂಬೈ | ಮ್ಯಾನ್‌ಹೋಲ್‌ಗೆ ಇಳಿದ ಓರ್ವ ಕಾರ್ಮಿಕ ಸಾವು, ಮತ್ತೊಬ್ಬರು ಗಂಭೀರ

ಮ್ಯಾನ್‌ಹೋಲ್ ಸ್ವಚ್ಛಗೊಳಿಸಲು ಇಳಿದ ಇಬ್ಬರು ಕಾರ್ಮಿಕರು ವಿಷಕಾರಿ ಅನಿಲದಿಂದ ಅಸ್ವಸ್ಥಗೊಂಡು, ಓರ್ವ...