ದಲಿತ ಪ್ರಾಧ್ಯಾಪಕಿ ಮೇಲೆ ಸಹೋದ್ಯೋಗಿ ಮತ್ತು ವಿದ್ಯಾರ್ಥಿಗಳಿಂದ ಹಲ್ಲೆ- ಜಾತಿ ದೌರ್ಜನ್ಯ; ಆರೋಪ

Date:

ತಮ್ಮ ಇಬ್ಬರು ಸಹೋದ್ಯೋಗಿ ಪ್ರಾಧ್ಯಾಪಕರು ಮತ್ತು ಇಬ್ಬರು ವಿದ್ಯಾರ್ಥಿಗಳು ತಮ್ಮ ಮೇಲೆ ಹಲ್ಲೆ ಮಾಡಿ, ಜಾತಿ ದೌರ್ಜನ್ಯ ಎಸಗಿದ್ದಾರೆ ಎಂದು ಉತ್ತರ ಪ್ರದೇಶದ ಬನಾರಸ್ ಹಿಂದೂ ವಿಶ್ವವಿದ್ಯಾನಿಲಯದ ದಲಿತ ಸಹಾಯಕ ಪ್ರಾಧ್ಯಾಪಕಿ ಒಬ್ಬರು ಆರೋಪಿಸಿದ್ದಾರೆ.

- Advertisement -

ಮೂರು ತಿಂಗಳ ಹಿಂದೆಯೇ ಘಟನೆ ನಡೆದಿದೆ. ಅಂದೇ ಪ್ರಾಧ್ಯಾಪಕಿಯು ವಾರಣಾಸಿ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಬರೋಬ್ಬರಿ ಮೂರು ತಿಂಗಳ ನಂತರ ಆಗಸ್ಟ್‌ 27ರಂದು ಎಫ್‌ಐಆರ್‌ ದಾಖಲಾಗಿದೆ. ಆದೂ, ಆಕೆ ಮಾನವ ಸಂಪನ್ಮೂಲ ಮತ್ತು ಅಭಿವೃದ್ಧಿ ಸಚಿವಾಲಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಮುಖ್ಯಮಂತ್ರಿ ಕಚೇರಿಗೆ ಪತ್ರ ಬರೆದ ಬಳಿಕ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದೂರುದಾರ ಪ್ರಾಧ್ಯಾಪಕಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಐತಿಹಾಸಿಕ ರೈತ ಹೋರಾಟಕ್ಕೆ ಸಾಕ್ಷಿಯಾದ ಹುಬ್ಬಳ್ಳಿ! ಆಕ್ರೋಶದ ನಡುವೆಯೂ...

ಡಾ. ಸ್ವಾಮಿನಾಥನ್ ಆಯೋಗ ವರದಿ ಜಾರಿಗೊಳಿಸುವ ಮೂಲಕ ಪ್ರತಿ ಟನ್ ಕಬ್ಬಿಗೆ ಕನಿಷ್ಠ ರೂ.5,500 ಬೆಂಬಲ ಬೆಲೆ ನಿಗದಿಪಡಿಸಲು ಮತ್ತು ಸಕ್ಕರೆಯ ಕನಿಷ್ಠ ಬೆಂಬಲ ಬೆಲೆಯನ್ನು ರೂ.31ರಿಂದ 60ಕ್ಕೆ ಏರಿಕೆ ಮಾಡಿ ವಾಣಿಜ್ಯ...

“ನಾನು ದಲಿತೆ ಎಂಬ ಕಾರಣಕ್ಕೆ ಆರೋಪಿಗಳು ನನ್ನನ್ನು ಗುರಿಯಾಗಿಸಿಕೊಂಡಿದ್ದರು. ನನ್ನನ್ನು ಹುದ್ದೆಯಿಂದ ತೆಗೆದು ಹಾಕುವಂತೆ ಒತ್ತಡ ಹಾಕಿದ್ದರು. ಅವರ ಒತ್ತದ ಹೊರತಾಗಿಯೂ ನಾನು ನನ್ನ ಹುದ್ದೆಯನ್ನು ಉಳಿಸಿಕೊಂಡಿದ್ದೇನೆ. ಆಗಿನಿಂದ, ನನ್ನ ಮೇಲೆ ಆರೋಪಿಗಳು ವೈಷಮ್ಯ ಹೆಚ್ಚಿಕೊಂಡು, ಹಲ್ಲೆ ಮಾಡಿದ್ದರು” ಎಂದು ದೂರುದಾರರು ತಿಳಿಸಿರುವುದಾಗಿ ದಿ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಆರೋಪಿಗಳು ಆಕೆಯನ್ನು ವಿವಸ್ತ್ರಗೊಳಿಸಿ, ವಿಶ್ವವಿದ್ಯಾಲಯದ ಸುತ್ತ ಸುತ್ತವಂತೆ ಮಾಡಬೇಕೆಂದು ಮಾತಾನಾಡಿಕೊಂಡಿದ್ದರು. ಮೇ 22ರಂದು ಆರೋಪಿಗಳಲ್ಲಿ ಒಬ್ಬರು ಆಕೆಯ ಬೇಂಬರ್‌ಗೆ ನುಗ್ಗಿ, ಹುದ್ದೆಯಿಂದ ತೆಗೆದು ಹಾಕಿಸುವುದಾಗಿ ಮತ್ತು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

“ಅಂದು ಆರೋಪಿಯೊಬ್ಬ ನನ್ನ ಚೇಂಬರ್‌ನಲ್ಲಿ ಗಲಾಟೆ ಮಾಡಿದ್ದರಿಂದ ನಾನು ಕೊಠಡಿಯಿಂದ ಹೊರ ಬಂದೆ. ಅಲ್ಲಿ ಇತರ ಆರೋಪಿಗಳು ಕೊಠಡಿಯ ಬಾಗಿಲು ಮುಚ್ಚಿದರು. ಒಬ್ಬ ನನ್ನನ್ನು ಹಿಡಿದುಕೊಂಡು ನನ್ನ ಬಟ್ಟೆಗಳನ್ನು ಹರಿದು ಹಾಕಿದ. ಅನುಚಿತವಾಗಿ ವರ್ತಿಸಲು ಪ್ರಯತ್ನಿಸಿದ” ಎಂದು ಪ್ರಾಧ್ಯಾಪಕಿ ಅರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಉ. ಪ್ರದೇಶ | ಮುಸ್ಲಿಂ ಪ್ರಯಾಣಿಕರ ನಮಾಝ್‌ಗೆ ಅವಕಾಶ ನೀಡಿ ಅಮಾನತಾಗಿದ್ದ ಬಸ್ ಕಂಡಕ್ಟರ್ ಆತ್ಮಹತ್ಯೆ

ಪೊಲೀಸರು ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ಗಾಯಗೊಳಿಸುವುದು), 342 (ತಪ್ಪಾದ ಬಂಧನ), 354-ಬಿ (ವಿವಸ್ತ್ರಗೊಳ್ಳುವ ಉದ್ದೇಶದಿಂದ ಮಹಿಳೆಯ ಮೇಲೆ ಹಲ್ಲೆ), 504 (ಉದ್ದೇಶಪೂರ್ವಕ ಅವಮಾನ) ಮತ್ತು 506 (ಅಪರಾಧ ಬೆದರಿಕೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳಲ್ಲಿ ಒಬ್ಬರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ. ಆರೋಪಗಳು ಆಧಾರರಹಿತವೆಂದು ಹೇಳಿದ್ದಾರೆ. “ಆಕೆ ಇತರರ ವಿರುದ್ಧವೂ ಇದೇ ರೀತಿಯ ದೂರುಗಳನ್ನು ದಾಖಲಿಸಿದ್ದಾರೆ” ಎಂದು ಆರೋಪಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಫಾರ್ಮ್-6 ಹೆಚ್ಚುವರಿ ನಿಯಮ ಹಿಂಪಡೆದ ಚುನಾವಣಾ ಆಯೋಗ; ಆದರೆ, ಪೂರ್ಣ ವಿನಾಯಿತಿಯಲ್ಲ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಹೊಸ ಮತದಾರರ ನೋಂದಣಿ ಪ್ರಕ್ರಿಯೆಯಲ್ಲಿ ಸಂಕೀರ್ಣ ಕಾಗದಪತ್ರಗಳ ಕಟ್ಟುನಿಟ್ಟಿನ...

​’ಇದು ಶತಮಾನದ ಅತಿ ದೊಡ್ಡ ನಾಟಕ’: ನಿರ್ಮಲಾ ಸೀತಾರಾಮನ್ ಸಿಟಿ ಬಸ್ ಪ್ರಯಾಣಕ್ಕೆ ನೆಟ್ಟಿಗರ ಕಟು ಟೀಕೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಾರ್ವಜನಿಕ ಸಾರಿಗೆಯಲ್ಲಿ ಪ್ರಯಾಣಿಸುವ...

ದೇಶ ಹಾದಿ ತಪ್ಪಿದೆ; ಮತ್ತೆ ಸರಿ ದಾರಿಗೆ ಬರುವ ಶಕ್ತಿ ಭಾರತಕ್ಕಿದೆ: ಬಿಜೆಪಿ ಹಿರಿಯ ನಾಯಕ ಮುರಳಿ ಮನೋಹರ ಜೋಶಿ

"ಪ್ರಸ್ತುತ ಪರಿಸ್ಥಿತಿಯಲ್ಲಿ ದೇಶ ತನ್ನ ಹಾದಿಯನ್ನು ಕಳೆದುಕೊಂಡಿದೆ ಎಂದು ನನಗೆ ಅನಿಸುತ್ತದೆ....