ದಲಿತ ಬಾಲಕಿ ಮೇಲೆ 2 ವರ್ಷ ನಿರಂತರ ಸಾಮೂಹಿಕ ಅತ್ಯಾಚಾರ: 13 ಮಂದಿ ಕಾಮುಕರ ಬಂಧನ

Date:

ಆಂಧ್ರ ಪ್ರದೇಶದ ಶ್ರೀ ಸತ್ಯ ಜಿಲ್ಲೆಯಲ್ಲಿ 15 ವರ್ಷದ ದಲಿತ ಬಾಲಕಿಯ ಮೇಲೆ ಎರಡು ವರ್ಷಗಳ ಕಾಲ ನಿರಂತರ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಕ್ಕೆ ಸಂಬಂಧಿಸಿದಂತೆ 13 ಮಂದಿ ಕಾಮುಕರನ್ನು ಬಂಧಿಸಲಾಗಿದೆ.

- Advertisement -

ಬಾಲಕಿ ಎಂಟು ತಿಂಗಳ ಗರ್ಭಿಣಿಯಾದ ಬಳಿಕವೇ ಈ ಪ್ರಕರಣ ಬೆಳಕಿಗೆ ಬಂದಿದೆ. ಬಾಲಕಿ ಜೂನ್ 9 ರಂದು ದೂರು ನೀಡಿದ್ದು, ಸದ್ಯ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ, ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಮತ್ತು ಬಿಎನ್‌ಎಸ್ ಸೇರಿದಂತೆ ಹಲವು ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಇದನ್ನು ಓದಿದ್ದೀರಾ? ದಲಿತ ಬಾಲಕಿ ಮೇಲೆ 14 ಜನರಿಂದ 2 ವರ್ಷ ನಿರಂತರ ಅತ್ಯಾಚಾರ: ಎಂಟು ತಿಂಗಳ ಗರ್ಭಿಣಿಯಾದಾಗ ಪ್ರಕರಣ ಬೆಳಕಿಗೆ

ಪೊಲೀಸರ ಪ್ರಕಾರ, ಅಚಂಪಲ್ಲಿ ವರ್ಧನ್ (21), ತಲಾರಿ ಮುರಳಿ (25), ಬಡಗೋರ್ಲ ನಂದವರ್ಧನ್ ರಾಜ್ (23), ಅರೆಂಚೆರು ನಾಗರಾಜು (51), ಬೋಯ ಸಂಜೀವ್ (40) ಮತ್ತು ಬುಡಿದ ರಾಜಣ್ಣ (49) ಎಂಬ ಆರೋಪಿಗಳನ್ನು ಜೂನ್ 9ರಂದು ಬಂಧಿಸಲಾಗಿದೆ. ಜೂನ್ 10ರಂದು ಇತರ ಏಳು ಮಂದಿಯನ್ನು ಬಂಧಿಸಲಾಗಿದೆ. ಹಲವು ಪ್ರಮುಖ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದಾನೆ ಎಂದು ಹೇಳಲಾಗಿದೆ.

ಏನಿದು ಪ್ರಕರಣ?

ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಅದರ ವಿಡಿಯೋವನ್ನು ಇಟ್ಟುಕೊಂಡು ನಿರಂತರ ಎರಡು ವರ್ಷಗಳ ಕಾಲ ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರ ಎಸಗಲಾಗಿದೆ. ಬಾಲಕಿ ಎಂಟು ತಿಂಗಳ ಗರ್ಭಿಣಿಯಾದ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದೆ. ಪ್ರಸ್ತುತ ಅನಂತಪುರ ಜಿಲ್ಲೆಯ ಸರ್ಕಾರಿ ಜನರಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಸದ್ಯ ಬಾಲಕಿಯು ಗರ್ಭಪಾತ ಮಾಡಲಾಗದ ಸ್ಥಿತಿಯಲ್ಲಿದ್ದಾಳೆ. ಹೆರಿಗೆಯ ಬಳಿಕ ಬಾಲಕಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿದೆ. ಕಾನೂನು ಕ್ರಮಗಳಿಗೆ ಅಗತ್ಯವಾದ ಕಾರಣ ಮಗುವಿನ ಡಿಎನ್‌ಎ ಪರೀಕ್ಷೆಗೆ ಅನುಮತಿ ಕೋರಲಾಗಿದೆ.

ಇದನ್ನು ಓದಿದ್ದೀರಾ? ಕೋಲಾರ | ದಲಿತ ಬಾಲಕಿ ಮೇಲೆ ಅತ್ಯಾಚಾರ; ಐವರು ಕಾಮುಕರ ಬಂಧನ

ಬಾಲಕಿ ಎಂಟು ತಿಂಗಳ ಗರ್ಭಿಣಿಯಾಗಿದ್ದರೂ ಯಾವುದೇ ಸ್ಥಳೀಯರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿಲ್ಲ. ಪ್ರಕರಣವನ್ನು ಮುಚ್ಚಿಹಾಕಲು ಕೆಲವು ಗ್ರಾಮಸ್ಥರು ಬಾಲಕಿಯ ಮೇಲೆ ಆರೋಪಿಗಳಲ್ಲಿ ಒಬ್ಬನನ್ನು ಮದುವೆಯಾಗುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ.

ಸದ್ಯ ಈ ಪ್ರಕರಣವು ದೇಶದಲ್ಲಿ ಹೆಣ್ಣುಮಕ್ಕಳ ರಕ್ಷಣೆ ಬಗ್ಗೆ ಅದರಲ್ಲೂ ಮುಖ್ಯವಾಗಿ ದಲಿತ ಬಾಲಕಿಯರ ಸುರಕ್ಷತೆಯ ಬಗ್ಗೆ ಪ್ರಶ್ನೆ ಎತ್ತಿದೆ. ಸ್ಥಳೀಯರಿಗೆ ತಿಳಿದಿದ್ದರೂ ಪೊಲೀಸರಿಗೆ ಮಾಹಿತಿ ನೀಡದಿರುವುದರಿಂದ ಈ ಕೃತ್ಯದ ಹಿಂದೆ ಬಲಾಢ್ಯರ ಕೈ ಇರುವ ಅನುಮಾನ ಹುಟ್ಟುಹಾಕಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...

ಉತ್ತರ ಪ್ರದೇಶದಲ್ಲಿ ಜಲಪ್ರಳಯ: ಪ್ರವಾಹಕ್ಕೆ 56 ಮಂದಿ ಬಲಿ, ಸಾವಿರಕ್ಕೂ ಹೆಚ್ಚು ಮನೆಗಳು ಧ್ವಂಸ

ಉತ್ತರ ಪ್ರದೇಶದಲ್ಲಿ ಕಳೆದ 60 ಗಂಟೆಗಳಿಂದ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹ...